ಡಿ. ಎಸ್‌ ವೀರಯ್ಯ 
ರಾಜ್ಯ

ದೇವರಾಜು ಅರಸು ಟ್ರಕ್‌ ಟರ್ಮಿನಲ್‌ ಅಕ್ರಮ: ಬಿಜೆಪಿ ಮಾಜಿ ಎಂಎಲ್‌ಸಿ ಡಿ.ಎಸ್‌ ವೀರಯ್ಯ ಬಂಧನ

ದೇವರಾಜು ಅರಸು ಟ್ರಕ್‌ ಟರ್ಮಿನಲ್‌ ಗುತ್ತಿಗೆ ಅವ್ಯವಹಾರದಲ್ಲಿ ಅಂದಿನ ಅಧ್ಯಕ್ಷರಾಗಿದ್ದ ಡಿ.ಎಸ್‌. ವೀರಯ್ಯ, ಗುತ್ತಿಗೆದಾರರಿಂದ ಮೂರು ಕೋಟಿ ರೂ. ಕಿಕ್‌ಬ್ಯಾಕ್‌ ಪಡೆದಿರುವುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ತನಿಖಾ ಮೂಲಗಳು ತಿಳಿಸಿವೆ.

ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ (ಡಿಡಿಯುಟಿಟಿಎಲ್‌) ಅಕ್ರಮ ಸಂಬಂಧ ಬಿಜೆಪಿ ನಾಯಕ, ವಿಧಾನ ಪರಿಷತ್​ ಮಾಜಿ ಸದಸ್ಯ ಡಿ ಎಸ್ ವೀರಯ್ಯ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ದೇವರಾಜು ಅರಸು ಟ್ರಕ್‌ ಟರ್ಮಿನಲ್‌ ಗುತ್ತಿಗೆ ಅವ್ಯವಹಾರದಲ್ಲಿ ಅಂದಿನ ಅಧ್ಯಕ್ಷರಾಗಿದ್ದ ಡಿ.ಎಸ್‌. ವೀರಯ್ಯ, ಗುತ್ತಿಗೆದಾರರಿಂದ ಮೂರು ಕೋಟಿ ರೂ. ಕಿಕ್‌ಬ್ಯಾಕ್‌ ಪಡೆದಿರುವುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ತನಿಖಾ ಮೂಲಗಳು ತಿಳಿಸಿವೆ.

2021ರಿಂದ 2023ರ ಅವಧಿಯಲ್ಲಿ ಡಿಡಿಯುಟಿಟಿಎಲ್‌ ನಿಗಮದಲ್ಲಿ ಗುತ್ತಿಗೆ ನೀಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ವಿಲ್ಸನ್ ಗಾರ್ಡನ್‌ ಠಾಣೆಗೆ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ ಎನ್‌ ಶಿವಪ್ರಕಾಶ್ ದೂರು ನೀಡಿದ್ದರು. ಈ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಅಂತೆಯೇ ತನಿಖೆಗಿಳಿದ ಸಿಐಡಿ ಅಧಿಕಾರಿಗಳು ಶುಕ್ರವಾರ ಅವರನ್ಜು ಬಂಧಿಸಿದ್ದಾರೆ.

2021ರಿಂದ 2023ರ ನಡುವೆ ಡಿ ಎಸ್ ವೀರಯ್ಯ ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ನಿಗಮದ ಅಧ್ಯಕ್ಷರಾಗಿದ್ದಾಗ 55 ಕೋಟಿ ರೂಪಾಯಿ ಅಕ್ರಮ ಎಸಗಿರುವ ಆರೋಪ ಡಿ ಎಸ್ ವೀರಯ್ಯ ಮೇಲೆ ಕೇಳಿ ಬಂದಿದೆ.

ಟರ್ಮಿನಲ್‌ ವತಿಯಿಂದ 2021 ರಿಂದ 2023ರ ನಡುವೆ 821 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಈ ಪೈಕಿ 9.18 ಕೋಟಿ ರೂ. ವೆಚ್ಚದ 153 ಕಾಮಗಾರಿಗಳನ್ನಷ್ಟೇ ನಿರ್ವಹಿಸಲಾಗಿತ್ತು. ಉಳಿದ 668 ಕಾಮಗಾರಿಗಳನ್ನು ಕೈಗೊಳ್ಳದೆಯೇ ನಕಲಿ ಬಿಲ್‌ ಸೃಷ್ಟಿಸಿ 39.42 ಕೋಟಿ ರೂ.ಗಳನ್ನು ಮೂರು ಗುತ್ತಿಗೆ ಏಜೆನ್ಸಿಗಳಿಗೆ ಹಣ ಬಿಡುಗಡೆ ಮಾಡಲಾಗಿತ್ತು.

ಮೆಸರ್ಸ್‌ ಎಸ್‌.ಎಸ್‌.ಎಂಟರ್‌ಪ್ರೈಸಸ್‌, ವೆನಿಶಾ ಎಂಟರ್‌ಪ್ರೈಸಸ್‌, ಮಯೂರ್‌ ಅಡ್ವರ್ಟೈಸ್‌ಮೆಂಟ್‌ ಹೆಸರಿನ ಗುತ್ತಿಗೆ ಏಜೆನ್ಸಿಗಳಿಗೆ 39.42 ಕೋಟಿ ರೂ. ಪಾವತಿಯಾಗಿತ್ತು. ಇದಕ್ಕೆ ಪ್ರತಿಯಾಗಿ ಗುತ್ತಿಗೆದಾರರು ವರ್ತಕರ ಖಾತೆಗಳಿಗೆ ಹಣ ಜಮಾ ಮಾಡಿದ್ದರು. ಸುಮಾರು 10 ವರ್ತಕ ಬ್ಯಾಂಕ್‌ ಖಾತೆಗಳಿಂದ ಅಂದಿನ ಅಧ್ಯಕ್ಷರಾದ ಡಿ.ಎಸ್‌. ವೀರಯ್ಯ ಅವರ ಬ್ಯಾಂಕ್‌ ಖಾತೆಗೆ ಹಂತ- ಹಂತವಾಗಿ ಮೂರು ಕೋಟಿ ರೂ. ವರ್ಗಾವಣೆ ಆಗಿರುವುದಕ್ಕೆ ದಾಖಲೆಗಳು ಸಿಕ್ಕಿವೆ ಎಂದು ಮೂಲಗಳು ಹೇಳಿವೆ. ಗುತ್ತಿಗೆದಾರರು ನೀಡಿದ ಕಿಕ್‌ಬ್ಯಾಕ್‌ ಹಣದಲ್ಲಿಯೇ ಡಿ.ಎಸ್‌. ವೀರಯ್ಯ ಅವರು ಕೆಂಗೇರಿ ವ್ಯಾಪ್ತಿಯ ಉಲ್ಲಾಳುವಿನಲ್ಲಿ ಒಂದು ನಿವೇಶನ ಖರೀದಿ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಮೂಲಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ದೆಹಲಿ ಚಲೋ’ ಪ್ರತಿಭಟನೆಗೆ ಬ್ರೇಕ್: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video