ಸಾಂದರ್ಭಿಕ ಚಿತ್ರ 
ರಾಜ್ಯ

ಹಾವೇರಿ: ಮರಕ್ಕೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು; ಐವರಿಗೆ ಗಂಭೀರ ಗಾಯ

ಹನುಮರಹಳ್ಳಿಯ ರಸ್ತೆಯಲ್ಲಿ ಮರಕ್ಕೆ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಾವೇರಿ: ಹನುಮರಹಳ್ಳಿಯ ರಸ್ತೆಯಲ್ಲಿ ಮರಕ್ಕೆ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸವಣೂರು ತಾಲ್ಲೂಕಿನ ಬೇವಿನಹಳ್ಳಿಯ ನೀಲಪ್ಪ ಮೂಲಿಮನಿ (23) ಹಾಗೂ ಸುದೀಪ ಕೋಟಿ (19) ಮೃತ ವ್ಯಕ್ತಿಗಳು.

ಬೇವಿನಹಳ್ಳಿಯ ಐವರು ಶನಿವಾರ ಬೆಳಿಗ್ಗೆ ತಮ್ಮೂರಿನಿಂದ ಕೆಲಸ ನಿಮಿತ್ತ ಬೆಳಗಾವಿ‌ ಜಿಲ್ಲೆಯ ಬೈಲಹೊಂಗಲಕ್ಕೆ‌ ಹೊರಟಿದ್ದರು. ಹನುಮರಹಳ್ಳಿಯ ಬಳಿ‌ ನಿಯಂತ್ರಣ ತಪ್ಪಿದ್ದ ಕಾರು, ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ನಂತರ, ಕಾರು ಉರುಳಿ ರಸ್ತೆ ಪಕ್ಕದ ‌ತಗ್ಗಿನಲ್ಲಿ ಬಿದ್ದಿದೆ ಎಂದು ಪೊಲೀಸರು ಹೇಳಿದರು. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಐವರು ತೀವ್ರ ಗಾಯಗೊಂಡಿದ್ದು, ಅವರನ್ನು ಶಿಗ್ಗಾವಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಶಿಗ್ಗಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ಯಾರೇ ಒಪ್ಪಿದರೂ-ಒಪ್ಪದಿದ್ದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಣೆ; ಸ್ಪೀಕರ್ ಓಂ ಬಿರ್ಲಾ

CEC ಜ್ಞಾನೇಶ್ ಕುಮಾರ್ ಪದಚ್ಯುತಿಗೆ ನಿರ್ಣಯ: 200ಕ್ಕೂ ಹೆಚ್ಚು ಸಂಸದರಿಂದ ನೋಟಿಸ್‌ಗೆ ಸಹಿ

ಇರಾನ್ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೊರೆ, ಪ್ರತಿ ತಿಂಗಳು 30,000 ಕೋಟಿ ರೂ. ಹೆಚ್ಚಿನ ವೆಚ್ಚ!

SCROLL FOR NEXT