ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ: ಸ್ವಂತ ಮಗಳ ಖಾಸಗಿ ವೀಡಿಯೋ ವೈರಲ್; ಪತಿ ವಿರುದ್ಧ ದೂರು ದಾಖಲಿಸಿದ ಮಹಿಳೆ!

ತನ್ನ ತಂದೆಯ ಕೃತ್ಯದಿಂದ ಮನನೊಂದ ಮಗಳು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ತನ್ನ 18 ವರ್ಷದ ಮಗಳ ಖಾಸಗಿ ವಿಡಿಯೋಗಳನ್ನು ಹರಿಬಿಟ್ಟ ಆರೋಪದಲ್ಲಿ ಮಹಿಳೆಯೊಬ್ಬರು ಪತಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ತನ್ನ ತಂದೆಯ ಕೃತ್ಯದಿಂದ ಮನನೊಂದ ಮಗಳು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪಡುಬಿದ್ರಿ ಸಮೀಪದ ಕಂಚಿನಟ್ಕ ನಿವಾಸಿ ಆಸಿಫ್ ಆರೋಪಿ. ಈತನ ಪುತ್ರಿ ತೀರ್ಥಹಳ್ಳಿಯ ಸಂಬಂಧಿಕನೇ ಆದ ತೌಸಿಫ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಇದು ಆಸಿಫ್ ಗೆ ಇಷ್ಟವಿರಲಿಲ್ಲ. ನಂತರ ತೌಸಿಫ್ ನನ್ನು ಮನೆಗೆ ಕರೆಸಿ ಹಲ್ಲೆ ಮಾಡಿದ್ದಾನೆ. ಅಲ್ಲದೇ ಇಬ್ಬರ ಮೊಬೈಲ್ ಫೋನ್ ಕಸಿದುಕೊಂಡು ಅದರಲ್ಲಿದ್ದ ವೀಡಿಯೊ ಮತ್ತು ಫೋಟೋಗಳನ್ನು ತನ್ನ ಮೊಬೈಲ್ ಗೆ ವರ್ಗಾಯಿಸಿಕೊಂಡಿದ್ದು, ಅವುಗಳನ್ನು ವಾಟ್ಸಾಪ್ ಗ್ರೂಪ್ ಸೇರಿದಂತೆ ವಿವಿಧ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದನ್ನು ವಿರೋಧಿಸಿದ ಪತ್ನಿ ಹಾಗೂ ಪುತ್ರಿಯ ಮೇಲೂ ಆಸಿಫ್ ಹಲ್ಲೆ ಮಾಡಿದ್ದು, ಇಬ್ಬರೂ ಗಾಯಗೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ ಮತ್ತು ವೀಡಿಯೊ ವೈರಲ್ ಆದ ಬಳಿಕ ಮನನೊಂದ ಪುತ್ರಿ ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಉಡುಪಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಯುವತಿ ತಾಯಿ ಉಡುಪಿಯ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ಮುಂದುವರೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು