ಸಿಎಂ ಸಿದ್ದರಾಮಯ್ಯ 
ರಾಜ್ಯ

ಮುಡಾ ಹಗರಣ: ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ; ನಿವೃತ್ತ ನ್ಯಾ ಪಿಎನ್​ ದೇಸಾಯಿ ನೇತೃತ್ವದಲ್ಲಿ ಆಯೋಗ ರಚನೆ

ಮುಡಾ ಸೈಟ್​ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧವೇ ಆರೋಪಗಳು ಕೇಳಿ ಬಂದಿದ್ದು, ಪ್ರತಿಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಪರ್ಯಾಯ ಪ್ಲಾಟ್ ಹಗರಣದ ಕುರಿತು ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮಾಡಿದೆ.

ಮುಡಾ ಸೈಟ್​ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧವೇ ಆರೋಪಗಳು ಕೇಳಿ ಬಂದಿದ್ದು, ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಪ್ರತಿಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ.

ನಾಳೆಯಿಂದ ಆರಂಭವಾಗುವ ಮುಂಗಾರು ಅಧಿವೇಶನದಲ್ಲಿ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಮುಗಿಬೀಳಲು ಸಿದ್ಧರಾಗಿವೆ. ಹೀಗಾಗಿ ರಾಜ್ಯ ಸರ್ಕಾರ ಮುಡಾ ಅಕ್ರಮದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ಆದೇಶ ಹೊರಡಿಸಿದ್ದು, 6 ತಿಂಗಳೊಳಗೆ ವರದಿ ನೀಡುವಂತೆ ವಿಚಾರಣಾ ಆಯೋಗಕ್ಕೆ ಸೂಚನೆ ನೀಡಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿರುವುದಲ್ಲದೆ, ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act, 1952ರ ನಿಯಮ 3 ರ ಉಪನಿಯಮ (1) ರನ್ವಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿದೆ.

ಈ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು ಹಾಗೂ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು, ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಕರಿಸುವಂತೆ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT