ಸಾಂದರ್ಭಿಕ ಚಿತ್ರ  
ರಾಜ್ಯ

ಬಸ್ ಟಿಕೆಟ್ ದರ ಸದ್ಯಕ್ಕೆ ಹೆಚ್ಚಳ ಇಲ್ಲ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ರಾಜು ಕಾಗೆ ದರ ಏರಿಕೆ ಬಗ್ಗೆ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ತಿಳಿಸಿದರು.

ಬೆಂಗಳೂರು: ಪೆಟ್ರೋಲ್, ಹಾಲಿನ ದರ ಏರಿಕೆ ಬೆನ್ನಲ್ಲೇ ಸಾಮಾನ್ಯ ಜನರು ಪ್ರಯಾಣಿಸುವ ಬಸ್ ಟಿಕೆಟ್‌ ದರ ಏರಿಕೆಯಾಗುತ್ತದೆ ಎಂಬ ಸುದ್ದಿಯಿತ್ತು. ಅದಕ್ಕೆ ಸ್ಪಷ್ಟನೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆಯಿಲ್ಲ ಎಂದಿದ್ದಾರೆ.

ವಿಧಾನಸೌಧದಲ್ಲಿ ಇಂದು ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜು ಕಾಗೆ ದರ ಏರಿಕೆ ಬಗ್ಗೆ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ತಿಳಿಸಿದರು.

ನಿನ್ನೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ್ದ ರಾಜು ಕಾಗೆ ಮತ್ತು ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಶ್ರೀನಿವಾಸ್‌ ಅವರು ದರ ಏರಿಕೆಯ ಬಗ್ಗೆ ಮಾತನಾಡಿದ್ದರು.

ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಡೀಸೆಲ್ ಹಾಗೂ ಬಸ್ ಬಿಡಿ ಭಾಗಗಳ ದರ ಕೂಡ ಹೆಚ್ಚಾಗಿದೆ. ಕಳೆದ 10 ವರ್ಷಗಳಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಶಕ್ತಿ ಯೋಜನೆಯಿಂದ ನಾವು ನಷ್ಟದಲ್ಲಿದ್ದೇವೆ. ಆದರೂ ನಾವು ನಡೆಸಿಕೊಂಡು ಹೋಗುತ್ತಿದ್ದೇವೆ ಎಂದು ಹೇಳಿಕೆ ನೀಡಿದ್ದರು.

ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂ. ನಷ್ಟವಾಗಿದೆ. ಟಿಕೆಟ್‌ ದರ ಏರಿಸದೇ ಇದ್ದರೆ ಕೆಎಸ್‌ಆರ್‌ಟಿಸಿ ಸಂಸ್ಥೆ ಉಳಿಯುವುದಿಲ್ಲ. ಸದ್ಯದಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು. ಮೊನ್ನೆ ನಿಗಮದ ಮೀಟಿಂಗ್ ಮುಗಿದಿದ್ದು ಶೇಕಡಾ 15ರಿಂದ 20 ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಿಎಂ ಮುಂದೆ ಇಟ್ಟಿದ್ದೇವೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT