ಸಿದ್ದರಾಮಯ್ಯ 
ರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಆಗಸ್ಟ್ 1 ರಿಂದಲೇ 7ನೇ ವೇತನ ಆಯೋಗದ ಶಿಫಾರಸು ಜಾರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಿ ನೌಕರರಿಗೆ ಸೋಮವಾಗ ಸಿಹಿ ಸುದ್ದಿ ನೀಡಿದ್ದು, ಬಹು ನಿರೀಕ್ಷಿತ 7ನೇ ವೇತನ ಆಯೋಗದ ವರದಿಯ ಶಿಫಾರಸು ಆಗಸ್ಟ್ 1ರಿಂದಲೇ ಜಾರಿಗೆ ಬರಲಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಶೇ 27.5 ರಷ್ಟು ಹೆಚ್ಚಾಗಲಿದೆ.

7ನೇ ವೇತನ ಆಯೋಗ ಜಾರಿಗೊಳಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌ ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದ್ದು, ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿದೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ಮಾರ್ಚ್‌ 16 ರಂದು ಶೇ. 27.5 ರಷ್ಟು ವೇತನ ಪರಿಷ್ಕರಣೆ ಮಾಡುವ ಶಿಫಾರಸು ಒಳಗೊಂಡ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತ್ತು. ಬಳಿಕ ಸಿಎಂ, ಇದನ್ನು ಜಾರಿಗೆ ತರುವ ಬಗ್ಗೆ ಹಣಕಾಸು ಇಲಾಖೆಗೆ ಮಾಹಿತಿ ಕೇಳಿದ್ದ‌ರು. ಇದೀಗ ಹಣಕಾಸು ಇಲಾಖೆ ವರದಿ ಬಳಿಕ ಸಿದ್ದರಾಮಯ್ಯ ಅವರು ಆಗಸ್ಟ್ 1 ರಿಂದ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನ ಪ್ರಕಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್