ಸಾಂದರ್ಭಿಕ ಚಿತ್ರ 
ರಾಜ್ಯ

ರೇಸಿಂಗ್ ಬೈಕ್ ಕೊಡಿಸಲಿಲ್ಲ ಎಂದು ಪುತ್ರ ಆತ್ಮಹತ್ಯೆ: ನೊಂದು ರೈಲಿಗೆ ತಲೆ ಕೊಟ್ಟ ತಾಯಿ

ಧನರಾಜ ಸುರೇಶ ನಾಯಕ (18) ಹಾಗೂ ಈತನ ತಾಯಿ ಭಾಗ್ಯಮ್ಮ ನಾಯಕ (43) ಆತ್ಮಹತ್ಯೆ ಮಾಡಿಕೊಂಡವರು.

ಹುಬ್ಬಳ್ಳಿ: ರೇಸಿಂಗ್ ಬೈಕ್ ಕೊಡಿಸಲಿಲ್ಲ ಎಂದು ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದು, ಇದನ್ನು ಕಂಡ ತಾಯಿ ಕೂಡ ರೈಲು ಹಳಿಗೆ ಬಿದ್ದು ಆತ್ಮಹತ್ಯೆಗೆ ಮಾಡಿಕೊಂಡ ದುರ್ಘಟನೆ ಘಟನೆ ರಾಣೆಬೆನ್ನೂರ ತಾಲೂಕಿನ ಕರೂರ ಗ್ರಾಮದಲ್ಲಿ ನಡೆದಿದೆ.

ಧನರಾಜ ಸುರೇಶ ನಾಯಕ (18) ಹಾಗೂ ಈತನ ತಾಯಿ ಭಾಗ್ಯಮ್ಮ ನಾಯಕ (43) ಆತ್ಮಹತ್ಯೆ ಮಾಡಿಕೊಂಡವರು.

ಎರಡು ವರ್ಷದ ಹಿಂದೆ ಸುರೇಶ ಅವರ 14 ವರ್ಷದ ಇನ್ನೋರ್ವ ಪುತ್ರಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೀಗ ಪತ್ನಿ, ಪುತ್ರನನ್ನು ಕಳೆದುಕೊಂಡು ದುಖಃದ ಮಡುವಿನಲ್ಲಿ ಮುಳುಗುವಂತಾಗಿದೆ.

ಹರಿಹರದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಧನರಾಜ ತನಗೆ ರೇಸಿಂಗ್ ಬೈಕ್ ತೆಗೆದುಕೊಳ್ಳಲು ಹಣ ಬೇಕೆಂದು ತಂದೆ- ತಾಯಿ ಬಳಿ ಬೆಳಗ್ಗೆ ಜಗಳ ತೆಗೆದಿದ್ದ. ಕೂಲಿ ಮಾಡಿಕೊಂಡಿರುವ ತಂದೆ ಸುರೇಶ ಆಯ್ತು ಹೇಗಾದರೂ ಮಾಡಿ ಕೊಡಿಸುತ್ತೇನೆ ಎಂದು ಕೆಲಸಕ್ಕೆ ಹೋಗಿದ್ದರು. ನಂತರ ತಾಯಿ ಮಗನಿಗೆ ಬುದ್ದಿಮಾತು ಹೇಳಿದ್ದರು.

ತಾಯಿ ಪಕ್ಕದ ಮನೆಗೆ ಹೋಗಿದ್ದ ವೇಳೆ ಮಧ್ಯಾಹ್ನ ಧನರಾಜ ಅಡುಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತಿ ಮನೆಗೆ ಮರಳಿದ ನಂತರ ಘಟನೆ ಬೆಳಕಿಗೆ ಬಂದಿದೆ.

ತಾಯಿ ಮನೆಗೆ ಬರುತ್ತಿದ್ದಂತೆ ಮಗನ ಸ್ಥಿತಿ ಕಂಡು ದಿಗ್ಬ್ರಾಂತರಾಗಿದ್ದಾರೆ. ಇದರಿಂದ ದುಃಖಿತರಾಗಿ ಕರೂರ ರೈಲು ನಿಲ್ದಾಣದ ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕುಮಾರಪಟ್ಟಣ ಪಿಎಸ್‌ಐ ಪ್ರವೀಣ ವಾಲೀಕಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel