ಬಸನಗೌಡ ದದ್ದಲ್  
ರಾಜ್ಯ

ಮಹರ್ಷಿ ನಿಗಮ ಹಗರಣ:‌ ಯಾರ ಸಂಪರ್ಕಕ್ಕೂ ಸಿಗದ ದದ್ದಲ್ ವಿಧಾನಸೌಧದಲ್ಲಿ ದಿಢೀರ್‌ ಪ್ರತ್ಯಕ್ಷ!

ನನಗೆ ಎಸ್‌ಐಟಿ ನೋಟಿಸ್‌ ನೀಡಿಲ್ಲ, ಇಡಿಯಿಂದಲೂ ನೋಟಿಸ್‌ ಬಂದಿಲ್ಲ. ನಾನು ಅಧಿವೇಶನಕ್ಕೆ ಹೋಗುತ್ತಿದ್ದೇನೆ. ಹೆಚ್ಚೇನೂ ಹೇಳುವುದಿಲ್ಲ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ಪ್ರಕರಣದಲ್ಲಿ ಸಿಲುಕಿ ಯಾರ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಇಂದು ದಿಢೀರ್ ವಿಧಾನಸೌಧದಲ್ಲಿ ಕಾಣಿಸಿಕೊಂಡಿದ್ದಾರೆ.

ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳಲು ದದ್ದಲ್ ವಿಧಾನಸೌಧಕ್ಕೆ ಆಗಮಿಸಿದ್ದಾರೆ.

ಈ ವೇಳೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ದದ್ದಲ್ ಅವರು, ನನಗೆ ಎಸ್‌ಐಟಿ ನೋಟಿಸ್‌ ನೀಡಿಲ್ಲ, ಇಡಿಯಿಂದಲೂ ನೋಟಿಸ್‌ ಬಂದಿಲ್ಲ. ನಾನು ಅಧಿವೇಶನಕ್ಕೆ ಹೋಗುತ್ತಿದ್ದೇನೆ. ಹೆಚ್ಚೇನೂ ಹೇಳುವುದಿಲ್ಲ ಎಂದು ಹೇಳಿ ತೆರಳಿದರು.

ವಿಧಾನಸೌಧಕ್ಕೆ ಆಗಮಿಸಿದ ದದ್ದಲ್‌ ಈಗ ಸಿಎಂ ಸಿದ್ದರಾಮಯ್ಯ ಅವರನ್ನು ಆಡಳಿತ ಪಕ್ಷದ ಕೊಠಡಿಯಲ್ಲಿ ಭೇಟಿ ಮಾಡಿ ಚರ್ಚಿಸುತ್ತಿದ್ದಾರೆ.

ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ದದ್ದಲ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಕಲಾಪ ನಡೆಯುವಾಗ ಶಾಸಕರನ್ನು ಬಂಧಿಸಬೇಕಾದರೆ ಸ್ಫೀಕರ್‌ ಅನುಮತಿ ಕಡ್ಡಾಯ. ಅಧಿವೇಶನ ನಡೆಯುವಾಗ ಬಂಧನಕ್ಕೆ ಸ್ಪೀಕರ್‌ ಅನುಮತಿ ನೀಡದೇ ಇದ್ದರೆ ಬಂಧನ ಮಾಡಲು ಸಾಧ್ಯವಿಲ್ಲ. ಹೀಗಾಗಿ ಇಡಿಯ ಮುಂದಿನ ನಡೆ ಕುತೂಹಲ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!