ಡಿಕೆ ಶಿವಕುಮಾರ್-ಸಿಟಿ ರವಿ 
ರಾಜ್ಯ

ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರನ್ನು ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವೇ?: ಸಿ.ಟಿ ರವಿಗೆ ಡಿ.ಕೆ ಶಿವಕುಮಾರ್ ತಿರುಗೇಟು

ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ರಾಷ್ಟ್ರೀಯ ಬ್ಯಾಂಕುಗಳು ಭಾಗಿಯಾಗಿದ್ದರೆ, ಅದಕ್ಕೆ ದೆಹಲಿಯ ಕೇಂದ್ರ ಸಚಿವರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲು ಸಾಧ್ಯವೇ?

ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ರಾಷ್ಟ್ರೀಯ ಬ್ಯಾಂಕುಗಳು ಭಾಗಿಯಾಗಿದ್ದರೆ, ಅದಕ್ಕೆ ದೆಹಲಿಯ ಕೇಂದ್ರ ಸಚಿವರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲು ಸಾಧ್ಯವೇ? ಅಧಿಕಾರಿಗಳು ಮಾಡುವ ಅಕ್ರಮಕ್ಕೆ ಸಚಿವರನ್ನು ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವೇ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ತಿರುಗೇಟು ನೀಡಿದರು.

ವಿಧಾನ ಪರಿಷತ್ ನಲ್ಲಿ ಮಂಗಳವಾರ ನಡೆದ ಕಲಾಪದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಸಿ.ಟಿ.ರವಿ ಅವರು ಮಾತನಾಡಿ, ವಾಲ್ಮೀಕಿ ನಿಗಮದ ಹಗರಣ ಪೂರ್ವನಿಯೋಜಿತವಾಗಿದ್ದು, ಮೊದಲೇ ಇ ಸ್ಟಾಂಪ್ ಪೇಪರ್ ಖರೀದಿ ಮಾಡಿ, ಒಂದೇ ದಿನದಲ್ಲಿ ಸಾಲಕ್ಕೆ ಅರ್ಜಿ ಹಾಕಿ, ಸೆಕ್ಯುರಿಟಿ ಓವರ್ ಡ್ರಾಫ್ಟ್ ತೆಗೆದುಕೊಂಡು ಹಣ ಪಡೆಯಲಾಗಿದೆ ಎಂಬ ವಿಚಾರ ಪ್ರಸ್ತಾಪಿಸಿದರು.

ಇದಕ್ಕೆ ಪ್ರತ್ಯುತ್ತರ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಿ.ಟಿ ರವಿ ಅವರು ಅಕ್ರಮದ ಬಗ್ಗೆ ಮಾತನಾಡುತ್ತಾ ಅಕ್ರಮ ಮಾಡಿದವರ ಒಂದು ಕೂಟ ಇದೆ ಎಂದೆಲ್ಲಾ ಪ್ರಸ್ತಾಪ ಮಾಡಿದ್ದಾರೆ. ಬ್ಯಾಂಕಿನಲ್ಲಿ ಆಗಿರುವ ಅಕ್ರಮದ ವಿಚಾರ ಪ್ರಸ್ತಾಪಿಸಿದ್ದಾರೆ. ಅಕ್ರಮವಾಗಿ ಬ್ಯಾಂಕಿಗೆ ವರ್ಗಾವಣೆಯಾದ ಹಣದ ಮೇಲೆ ಒಂದೇ ದಿನದಲ್ಲಿ ಸಾಲಕ್ಕೆ ಅರ್ಜಿ ಹಾಕಿದರು, ಓವರ್ ಡ್ರಾಫ್ಟ್ ತೆಗೆದುಕೊಂಡು ಹಣ ಬಿಡಿಸಿಕೊಂಡರು ಎಂದೆಲ್ಲ ವಿವರಿಸಿದ್ದಾರೆ.

ಬ್ಯಾಂಕಿನಲ್ಲಿ ಒಂದೇ ದಿನದಲ್ಲಿ ಇಷ್ಟೆಲ್ಲಾ ಆಗಿದೆ ಎಂದರೆ ಇಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಸಹ ಭಾಗಿಯಾಗಿದೆ ಎಂದು ಅರ್ಥವಲ್ಲವೇ? ಹೀಗಾಗಿ ನಾನು ಇದರಲ್ಲಿ ದೆಹಲಿಯ ಸನ್ಮಾನ್ಯ ಕೇಂದ್ರ ಸಚಿವರು ಭಾಗಿಯಾಗಿದ್ದಾರೆ ಎಂದು ಹೇಳಲು ಆಗುತ್ತದೆಯೇ? ಎಂದು ಪ್ರಶ್ನಿಸಿದರು.

ಯಾರೋ ಅಧಿಕಾರಿ ಮಾಡಿದ ತಪ್ಪಿಗೆ ಸಚಿವರ ಮೇಲೆ ಆರೋಪ ಹೊರಿಸಲು ಆಗುವುದಿಲ್ಲ. ಮಂತ್ರಿಗಳು, ಶಾಸಕರು ಅಕ್ರಮಗಳಲ್ಲಿ ಭಾಗಿಯಾಗಿದ್ದರೆ ಯಾವುದೇ ಕಾರಣಕ್ಕೂ ನಾವು ಅದಕ್ಕೆ ಬೆಂಬಲವಾಗಿ ನಿಲ್ಲುವುದಿಲ್ಲ. ಈ ಪ್ರಕರಣದಲ್ಲಿ ನಮ್ಮ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಂಡು ತನಿಖಾ ತಂಡ ರಚನೆ ಮಾಡಿದೆ. ತನಿಖಾ ತಂಡವು ಹಣವನ್ನು ಮರಳಿ ಪಡೆದಿದೆ.

ಮಾಜಿ ಮಂತ್ರಿಗಳಿಗೆ ಹಾಗೂ ಶಾಸಕರಿಗೆ ನೋಟಿಸ್ ನೀಡಿದೆ. ಎಸ್ ಐಟಿ ಯಾವ ಕ್ರಮ ಬೇಕಾದರೂ ತೆಗೆದುಕೊಳ್ಳಲಿ. ಸಿಬಿಐ ಸೇರಿದಂತೆ ಯಾರು ಬೇಕಾದರೂ ಬಂದು ತನಿಖೆ ಮಾಡಲಿ. ಆದರೆ ನೀವು ಅದಕ್ಕಿಂತ ಮುಂಚಿತವಾಗಿ ಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿಸಿದರೆ ಹೇಗೆ? ನೀವು ಯಾವ ದೃಷ್ಟಿಕೋನದಲ್ಲಿ ಸರಕಾರ ಆರೋಪಿಗಳ ರಕ್ಷಣೆ ಮಾಡುತ್ತಾ ಇದೆ ಎಂದು ಹೇಳಲು ಹೊರಟಿದ್ದೀರಿ ಎಂದು ನನಗೆ ತಿಳಿದಿದೆ. ನೀವು ಅವರ ಹೆಸರು ಹೇಳಿ. ನಾನು ಸಹ ನನಗೆ ಗೊತ್ತಿರುವ ಹೆಸರುಗಳನ್ನು ಹೇಳುತ್ತೇನೆ” ಎಂದು ಸಿ.ಟಿ.ರವಿ ಅವರಿಗೆ ಕುಟುಕಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT