ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಜ್ಯದಲ್ಲಿ 10,000 ದಾಟಿದ ಡೆಂಘಿ ಪ್ರಕರಣ: ಬಿಬಿಎಂಪಿ ವ್ಯಾಪ್ತಿಯಲ್ಲಿ 3,770 ಕೇಸ್ ವರದಿ!

ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ 10,449 ಪಾಸಿಟಿವ್ ಪ್ರಕರಣಗಳ ಪೈಕಿ 358 ಸಕ್ರಿಯ ಪ್ರಕರಣಗಳಾಗಿವೆ (ಆಸ್ಪತ್ರೆಗೆ ದಾಖಲಾದವರು) ಡೆಂಘಿಯಿಂದಾಗಿ 8 ಮಂದಿ ಸಾವನ್ನಪ್ಪಿದ್ದಾರೆ.

ಸಾಂದರ್ಭಿಕ ಚಿತ್ರ
Nagaraja AB
Updated On : 16 Jul 2024, 8:19 pm

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ವರ್ಷದಲ್ಲಿ ಇಲ್ಲಿಯವರೆಗೂ 10,000 ಪ್ರಕರಣಗಳು ದೃಢಪಟ್ಟಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಂಗಳವಾರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 487 ಡೆಂಘಿ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇದರೊಂದಿಗೆ ಜನವರಿಯಿಂದ ಇಲ್ಲಿಯವರೆಗೂ ದೃಢಪಟ್ಟ ಪ್ರಕರಣಗಳ ಸಂಖ್ಯೆ 10, 449ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ 10,449 ಪಾಸಿಟಿವ್ ಪ್ರಕರಣಗಳ ಪೈಕಿ 358 ಸಕ್ರಿಯ ಪ್ರಕರಣಗಳಾಗಿವೆ (ಆಸ್ಪತ್ರೆಗೆ ದಾಖಲಾದವರು) ಡೆಂಘಿಯಿಂದಾಗಿ 8 ಮಂದಿ ಸಾವನ್ನಪ್ಪಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 3,770 ಪ್ರಕರಣಗಳು, ಚಿಕ್ಕಮಗಳೂರಿನಲ್ಲಿ 621, ಮೈಸೂರಿನಲ್ಲಿ 562 ಪ್ರಕರಣ ವರದಿಯಾಗಿದೆ.

Also Read

ಡೆಂಘಿ ಹೆಚ್ಚಳ: ಇಲಾಖೆ ವ್ಯಾಪ್ತಿಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಪರೀಕ್ಷೆ, ಚಿಕಿತ್ಸೆ

ಡೆಂಘಿ ಹರಡದಂತೆ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಮುಂಗಾರು ಅವಧಿ ಮುಗಿಯುವವರೆಗೂ ಮುಂದಿನ 2 ತಿಂಗಳ ಕಾಲ ಪ್ರತಿಯೊಬ್ಬರು ಮುಂಜಾಗ್ರತೆ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ಜನರಲ್ಲಿ ಮನವಿ ಮಾಡಿದ್ದರು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments