ಸಿದ್ದರಾಮಯ್ಯ  
ರಾಜ್ಯ

ಆಸ್ತಿ ಬಗ್ಗೆ ಸುಳ್ಳು ಮಾಹಿತಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ 2 ಪ್ರತ್ಯೇಕ ದೂರು ಸಲ್ಲಿಕೆ

2018-23ರ ಚುನಾವಣೆಯ ಅಫಿಡವಿಟ್​ನಲ್ಲಿ ಸಿದ್ದರಾಮಯ್ಯ ಅವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ದೂರು ಸಲ್ಲಿಸಿದ್ದಾರೆ.

ಬೆಂಗಳೂರು: ವಿಧಾನಸಭೆ ಕಲಾಪ ನಿನ್ನೆಯಿಂದ ಶುರುವಾಗಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ಸಲ್ಲಿಸಲಾಗಿದೆ.

2018-23ರ ಚುನಾವಣೆಯ ಅಫಿಡವಿಟ್​ನಲ್ಲಿ ಸಿದ್ದರಾಮಯ್ಯ ಅವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ದೂರು ಸಲ್ಲಿಸಿದ್ದಾರೆ. 2018ರ ಚುನಾವಣೆ ವೇಳೆ ಪಾರ್ವತಿ ಸಿದ್ದರಾಮಯ್ಯ ಬಳಿ ಇರುವ 3 ಎಕರೆ 16 ಗುಂಟೆ ಕೃಷಿ ಜಮೀನು ಎಂದು ಅಫಿಡವಿಟ್‌ನಲ್ಲಿ ನಮೂದು ಮಾಡಲಾಗಿದೆ ಇದರ ಮೌಲ್ಯ ಕೇವಲ 25 ಲಕ್ಷ ಎಂದು ನಮೂದಿಸಲಾಗಿತ್ತು. ಆದರೆ 2005ರಲ್ಲಿಯೇ ಜಮೀನು ಪರಿವರ್ತನೆ ಮಾಡಿಸಿದ್ದ ದಾಖಲೆ ನೀಡಿ, ಮೊದಲ ದೂರು ಸಲ್ಲಿಸಲಾಗಿದೆ.

ಇನ್ನು 2023ರ ಚುನಾವಣೆ ವೇಳೆ 14 ಮುಡಾ ಸೈಟುಗಳ ಮೌಲ್ಯ ಕೇವಲ 8 ಕೋಟಿ ಎಂದು ಅಫಿಡವಿಟ್‌ನಲ್ಲಿ ನಮೂದು ಮಾಡಲಾಗಿದೆ. ಆದರೆ, 14 ಸೈಟುಗಳ ಅಸಲಿ ಮಾರುಕಟ್ಟೆ ಮೌಲ್ಯ 34 ಕೋಟಿಯಾಗಿದ್ದು, ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಮಾಹಿತಿ ತಪ್ಪು ನೀಡಿದ್ದಾರೆ ಎಂದು ಎರಡನೇ ದೂರು ನೀಡಲಾಗಿದೆ.

ಸಿಎಂ ಪತ್ನಿ ಪಾರ್ವತಿ ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ 2010ರಲ್ಲಿ ಈ ಜಾಗವನ್ನು ಗಿಫ್ಟ್‌ ಡೀಡ್‌ ಆಗಿ ನೋಂದಣಿ ಮಾಡಿದ್ದಾರೆ. ಈ ಜಾಗದ ಮೂಲ ಮಾಲೀಕರು ದೇವರಾಜು ಮತ್ತು ಕುಟುಂಬಸ್ಥರು ಆಗಿದ್ದು. 2004ರ ಆಗಸ್ಟ್‌ 25ರಂದು ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಈ ಜಾಗವನ್ನು ಮಾರಾಟ ಮಾಡಿದ್ದಾರೆ. 2013ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದ ವಾರ್ಷಿಕ ರಿಟರ್ನ್‌ ಲೋಕಾಯುಕ್ತಕ್ಕೆ ಸಲ್ಲಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಪತ್ನಿ ಬಳಿ ಇದ್ದ ನಿವೇಶನದ ವಿವರವನ್ನು ಉಲ್ಲೇಖಿಸಿದ್ದಾರೆ. ಆದರೆ 2013ರ ಚುನಾವಣೆಯ ಅಫಿಡವಿಟ್‌ ಸಲ್ಲಿಸುವಾಗ ಈ ವಿಚಾರವನ್ನು ಉದ್ದೇಶಪೂರ್ವಕವಾಗಿ ಉಲ್ಲೇಖ ಮಾಡಿಲ್ಲ.

ಕೃಷಿ ಭೂಮಿಯ ಬಗ್ಗೆ ಮಾಹಿತಿ ನೀಡದೇ ಸುಳ್ಳು ಅಫಿಡವಿಟ್ ಸಲ್ಲಿಸಿದ್ದು, ಜನಪ್ರತಿ ನಿಧಿ ಕಾಯ್ದೆ ಸೆಕ್ಷನ್ 125 ಎ ಮತ್ತು ಸೆಕ್ಷನ್ 8 ಉಲ್ಲಂಘನೆ. ಸುಳ್ಳು ದಾಖಲೆ ಸಲ್ಲಿಸಿದ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ 227, 229, 231, 236, 202 ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಟಿಜೆ ಅಬ್ರಹಾಂ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT