ಮಣಿಕಂಠ ರಾಥೋಡ್ 
ರಾಜ್ಯ

ಅಕ್ಕಿ ಕಳ್ಳತನ ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

ಯಾದಗಿರಿ ಜಿಲ್ಲೆ ಶಹಾಪುರ ಪಟ್ಟಣದಲ್ಲಿನ ಸರ್ಕಾರಿ ಗೋದಾಮಿನಿಂದ 2 ಕೋಟಿಗೂ ಅಧಿಕ ಮೌಲ್ಯದ 6077 ಕ್ವಿಂಟಾಲ್ ಅಕ್ಕಿ ಕಳ್ಳತನವಾಗಿತ್ತು.

ಕಲಬುರಗಿ: ಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಅವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಕಲಬುರಗಿ ನಗರದ ಭಾರತ ಪ್ರೈಡ್ ಅಪಾರ್ಟ್‌ಮೆಂಟ್‌ನಲ್ಲಿನ ಮನೆಯಿಂದ ಮಣಿಕಂಠ ರಾಠೋಡ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಯಾದಗಿರಿ ಜಿಲ್ಲೆ ಶಹಾಪುರ ಪಟ್ಟಣದಲ್ಲಿನ ಸರ್ಕಾರಿ ಗೋದಾಮಿನಿಂದ 2 ಕೋಟಿಗೂ ಅಧಿಕ ಮೌಲ್ಯದ 6077 ಕ್ವಿಂಟಾಲ್ ಅಕ್ಕಿ ಕಳ್ಳತನವಾಗಿತ್ತು. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮಣಿಕಂಠ ರಾಠೋಡ್‌ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ರಾಥೋಡ್ ಅವರು 2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಸರ್ಧೆಗಿಳಿಸಿದ್ದು, ಚುನಾವಣೆಯಲ್ಲಿ ಸೋಲು ಕಂಡಿದ್ದರು.

ಅನ್ನ ಭಾಗ್ಯ ಯೋಜನೆಯು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಪ್ರತಿ ತಿಂಗಳು 10 ಕೆಜಿ ಆಹಾರ ಧಾನ್ಯಗಳನ್ನು ನೀಡುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾರಿಗೆ ಯಾವ ಜಿಲ್ಲೆಯ ಜವಾಬ್ದಾರಿ?: ರಾಜ್ಯದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿ ಸಿಎಂ ಡಿಕೆ ಶಿವಕುಮಾರ್ ಆದೇಶ! ಆದ್ರೆ..

ತುಂಗಭದ್ರೆಗೆ ಹೊಸ ಕಳೆ; ನೂತನ 33 ಕ್ರೆಸ್ಟ್ ಗೇಟ್‌ಗಳ ಲೋಕಾರ್ಪಣೆ: ಒಂದೇ ವೇದಿಕೆಯಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು..!

Venezuela Earth quake: ನೆರವಿಗೆ ಧಾವಿಸಿದ ಅಮೆರಿಕ, ಟ್ರಂಪ್ ಆರ್ಥಿಕ ನೆರವು ಘೋಷಣೆ

Venezuela Earth quake: 40 ಸೆಕೆಂಡ್​​ ನಲ್ಲಿ 2 ಬಾರಿ ಭೂಕಂಪ, ಭಾರೀ ವಿನಾಶ, ಕನಿಷ್ಠ 32 ಸಾವು, ಸಾವಿನ ಸಂಖ್ಯೆ 1 ಲಕ್ಷಕ್ಕೇರುವ ಸಾಧ್ಯತೆ!

ಭಾರೀ ಭೂಕಂಪಕ್ಕೆ ವೆನೆಜುವೆಲಾ ತತ್ತರ: ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ, ಮಾನವೀಯ ನೆರವಿಗೆ ಭಾರತ ಸಜ್ಜು..!