ಮಾಜಿ ಸಚಿವ ನಾಗೇಂದ್ರ ಪತ್ನಿ ಮಂಜುಳಾ ಇಡಿ ವಶ 
ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿ ಮಂಜುಳಾ ED ವಶಕ್ಕೆ

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ವಿಚಾರಣೆಗೆ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ದಿದ್ದಾರೆ. ಆರೋಪಿಗಳ ಹೇಳಿಕೆ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್​ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ವಿಚಾರಣೆಗೆ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ದಿದ್ದಾರೆ. ಆರೋಪಿಗಳ ಹೇಳಿಕೆ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ವಾಲ್ಮೀಕಿ ನಿಗಮದಿಂದ ಹಲವಾರು ಕೋಟಿ ರೂಪಾಯಿ ಅಕ್ರಮ ವ್ಯವಹಾರಲ್ಲಿ ಹಲವಾರು ಬ್ಯಾಂಕ್‌ ಖಾತೆಗಳಿಗೆ (Bank Account) ಹಣ ವರ್ಗಾವಣೆಯಾಗಿದೆ. ಈಗಾಗಲೇ ಬಂಧನಕ್ಕೆ ಒಳಗಾಗಿರುವ ನಾಗೇಂದ್ರ ಅವರ ಬ್ಯಾಂಕ್‌ ಖಾತೆ ಜೊತೆ ಕುಟುಂಬಸ್ಥರ ಬ್ಯಾಂಕ್‌ ಖಾತೆಯನ್ನು ಪರಿಶೀಲಿಸಿದಾಗ ಪತ್ನಿಯ ಖಾತೆಯಿಂದ ಹೆಚ್ಚು ಹಣ ವರ್ಗಾವಣೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕಾರಣಕ್ಕೆ ಇಡಿ ಅಧಿಕಾರಿಗಳು ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಇಡಿ ಅಧಿಕಾರಿಗಳು ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಮನೆ ಮೇಲೆ ದಾಳಿ ಮಾಡಿ ಶೋಧ ಕಾರ್ಯ ನಡೆಸಿ ನಾಗೇಂದ್ರ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ನಂತರ ಅವರನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT