ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಕಾಯ್ದಿರಿಸುವಂತೆ ಸರ್ಕಾರ ಆದೇಶ

ಈ ಹಿಂದಿನ ಆದೇಶಗಳಿಗೆ ಹೆಚ್ಚುವರಿಯಾಗಿ ಈ ನಿರ್ದೇಶನ ನೀಡಲಾಗಿದೆ. ಮುಂದಿನ ಆದೇಶದವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ.

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಆತಂಕಕಾರಿಯಾಗಿ ಹೆಚ್ಚಾಗುತ್ತಿದ್ದು, ಡೆಂಗ್ಯೂ ಸಂಬಂಧಿತ ಸಾವುನೋವುಗಳನ್ನು ತಡೆಗಟ್ಟಲು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ(HFW) ಇಲಾಖೆಯು ಡೆಂಗ್ಯೂ ಪ್ರಕರಣಗಳ ಪರಿಣಾಮಕಾರಿ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಬೆಡ್ ಗಳನ್ನು ಕಾಯ್ದಿರಿಸುವಂತೆ ಬುಧವಾರ ಆದೇಶಿಸಿದೆ.

ಮುಂದಿನ ಸೂಚನೆವರೆಗೆ ಡೆಂಗ್ಯೂ ರೋಗಿಗಳಿಗೆ ನಿರ್ದಿಷ್ಟ ಸಂಖ್ಯೆಯ ಹಾಸಿಗೆಗಳನ್ನು ಕಾಯ್ದಿರಿಸುವಂತೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆ (25 ಹಾಸಿಗೆಗಳು), ಸಿವಿ ರಾಮನ್ ಆಸ್ಪತ್ರೆ (25 ಹಾಸಿಗೆಗಳು), ಜಿಎಚ್ ಜಯನಗರ(25 ಹಾಸಿಗೆಗಳು), ತಾಲೂಕು ಆಸ್ಪತ್ರೆ, ಯಲಹಂಕ (10) ಹಾಸಿಗೆಗಳು), ಮತ್ತು ತಾಲೂಕು ಆಸ್ಪತ್ರೆ, ಕೆಆರ್ ಪುರಂ (10 ಹಾಸಿಗೆಗಳು), ಮತ್ತು ಜಿಲ್ಲಾ ಕೇಂದ್ರದ ಎಚ್‌ಎಫ್‌ಡಬ್ಲ್ಯೂ ಆಸ್ಪತ್ರೆಗಳು ತಲಾ 10 ಹಾಸಿಗೆಗಳನ್ನು ಕಾಯ್ದಿರಿಸಲು ಹಾಗೂ ತಾಲೂಕು ಕೇಂದ್ರದ ಎಚ್‌ಎಫ್‌ಡಬ್ಲ್ಯೂ ಆಸ್ಪತ್ರೆಗಳಲ್ಲಿ ತಲಾ ಐದು ಹಾಸಿಗೆಗಳನ್ನು ಡೆಂಗ್ಯೂ ರೋಗಿಗಳಿಗೆ ಮೀಸಲಿಡುವಂತೆ ಸೂಚಿಸಲಾಗಿದೆ.

ಈ ಹಿಂದಿನ ಆದೇಶಗಳಿಗೆ ಹೆಚ್ಚುವರಿಯಾಗಿ ಈ ನಿರ್ದೇಶನ ನೀಡಲಾಗಿದೆ. ಮುಂದಿನ ಆದೇಶದವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ.

ರಾಜ್ಯದಲ್ಲಿ ಇದುವರೆಗೆ 10,973 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 4,040 ಬಿಬಿಎಂಪಿ ವ್ಯಾಪ್ತಿಯಲ್ಲಿ, 63 ಬೆಂಗಳೂರು ನಗರ ಮತ್ತು 51 ಬೆಂಗಳೂರು ಗ್ರಾಮಾಂತರದಲ್ಲಿ ವರದಿಯಾಗಿವೆ.

ಚಿಕ್ಕಮಗಳೂರಿನಲ್ಲಿ ರಾಜ್ಯದಲ್ಲಿಯೇ ಎರಡನೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಒಟ್ಟು 621 ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!