ಎಚ್ ಡಿ ರೇವಣ್ಣ 
ರಾಜ್ಯ

ದೇವಸ್ಥಾನದಲ್ಲಿ ಜಾರಿ ಬಿದ್ದ ಎಚ್.ಡಿ ರೇವಣ್ಣ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಆಷಾಢಮಾಸ ನಿಮಿತ್ತ ಉಪವಾಸವಿದ್ದ ಎಚ್ ಡಿ ರೇವಣ್ಣ ಅವರು ಇಂದು ಹೊಳೆನರಸೀಪುರ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ತೆರಳಿದ್ದರು.

ಹಾಸನ: ಮಾಜಿ ಸಚಿವ ಹಾಗೂ ಹಾಲಿ ಜೆಡಿಎಸ್ ಶಾಸಕ ಎಚ್‌.ಡಿ. ರೇವಣ್ಣ ಅವರು ಬುಧವಾರ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಆಸ್ಪತ್ರೆ ದಾಖಲಾಗಿದ್ದಾರೆ.

ಆಷಾಢಮಾಸ ನಿಮಿತ್ತ ಉಪವಾಸವಿದ್ದ ಎಚ್ ಡಿ ರೇವಣ್ಣ ಅವರು ಇಂದು ಹೊಳೆನರಸೀಪುರ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ಮನೆ ದೇವರು ಹರದನಹಳ್ಳಿಯ ಈಶ್ವರ ದೇವಾಲಯಕ್ಕೆ ತೆರಳಿದ್ದಾಗ ಕಾಲು ಜಾರಿಬಿದ್ದಿದ್ದು, ಪಕ್ಕೆಲುಬು ಮುರಿದಿದೆ ಎನ್ನಲಾಗಿದೆ.

ತಕ್ಷಣ ರೇವಣ್ಣ ಅವರನ್ನು ಹೊಳೆನರಸೀಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆದಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಾರಿನಲ್ಲಿಯೇ ಬೆಂಗಳೂರಿಗೆ ತೆರಳಿದರು.

ಎಚ್.ಡಿ. ರೇವಣ್ಣ ಅವರು ಮಂಗಳವಾರ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಂಡಿದ್ದರು. ಅಪಾರ ದೈವ ಭಕ್ತರಾಗಿರುವ ರೇವಣ್ಣ ಅವರು ಇಂದು ಹೊಳೆನರಸೀಪುರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಬೇಕಿತ್ತು. ಹೀಗಾಗಿ ಹೊಳೆನರಸೀಪುರಕ್ಕೆ ತೆರಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಧ್ಯ ಫಿಲಿಪೈನ್ಸ್ ಪ್ರದೇಶದಲ್ಲಿ ಪ್ರಬಲ ಭೂಕಂಪ: 31 ಮಂದಿ ಸಾವು

ಉಸಿರಾಟದ ಸಮಸ್ಯೆಯಿಂದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಇಂದು ನಾಡಿನಾದ್ಯಂತ ಆಯುಧಪೂಜೆ, ಮಹಾನವಮಿ ಸಂಭ್ರಮ: ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

SCROLL FOR NEXT