ವಿಧಾನಸಭೆ ಅಧಿವೇಶನ 
ರಾಜ್ಯ

ಕಳೆದ 3-4 ವರ್ಷಗಳಲ್ಲಿ ಎಲ್ಲಾ SC/ST ನಿಗಮಗಳಲ್ಲಿ ಹಗರಣಗಳು ನಡೆದಿವೆ: ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರ ಸ್ವಾಮಿ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಅವ್ಯವಹಾರ ನಡೆದಿದ್ದು, ಮಾಜಿ ಎಂಎಲ್‌ಸಿ ಸುನೀಲ್ ವಲ್ಯಾಪೂರೆ ಅವರ ಪುತ್ರ ವಿನಯ್ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದೆ.

ಬೆಂಗಳೂರು: ಕಳೆದ 3-4 ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಎಲ್ಲಾ ಮಂಡಳಿಗಳು ಮತ್ತು ನಿಗಮಗಳಲ್ಲಿ ಹಗರಣಗಳು ನಡೆದಿವೆ ಎಂದು ಎಸ್‌ಸಿ/ಎಸ್‌ಟಿ ಕಲ್ಯಾಣ ಸಮಿತಿ ಅಧ್ಯಕ್ಷರೂ ಆದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರ ಸ್ವಾಮಿ ಅವರು ಮಂಗಳವಾರ ಆರೋಪಿಸಿದರು,

ವಿಧಾನಸಭೆಯಲ್ಲಿ ಮಾತನಾಡಿರುವ ಅವರು, ಕಳೆದ 3-4 ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಎಲ್ಲಾ ಮಂಡಳಿಗಳು ಮತ್ತು ನಿಗಮಗಳಲ್ಲಿ ಹಗರಣಗಳು ನಡೆದಿವೆ. ಇದರಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ ಮತ್ತು ತಾಂಡಾ ಅಭಿವೃದ್ಧಿ ನಿಗಮ ಕೂಡ ಸೇರಿವೆ. ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಅವ್ಯವಹಾರ ನಡೆದಿದ್ದು, ಮಾಜಿ ಎಂಎಲ್‌ಸಿ ಸುನೀಲ್ ವಲ್ಯಾಪೂರೆ ಅವರ ಪುತ್ರ ವಿನಯ್ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದೆ.

ಹಲವು ಸಮಿತಿಗಳು ಹಣಕಾಸು ಇಲಾಖೆಯ ವಹಿವಾಟಿನ ಮೇಲೆ ನಿಗಾ ಇಡಲು ವಿಫಲವಾಗಿದೆ. ಕಳೆದ 3-4 ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳಿಗೆ ಕಲ್ಯಾಣ ಯೋಜನೆಗಳ ಸೌಲಭ್ಯ ನೀಡಿಲ್ಲ ಎಂದು ಆರೋಪಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೀತ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!