ಬಂಧನ 
ರಾಜ್ಯ

ನಕಲಿ ದಾಖಲೆ ಸೃಷ್ಟಿಸಿ ವಾಹನ ಮಾರಾಟ: ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ; 2.5 ಕೋಟಿ ರೂ ಮೌಲ್ಯದ 17 ಕಾರು ವಶಕ್ಕೆ

ಆರೋಪಿಗಳು ಅನ್ಯ ರಾಜ್ಯಗಳಲ್ಲಿ ಕದ್ದ ಕಾರುಗಳಿಗೆ ನಕಲಿ ನೋಂದಣಿ ಸಂಖ್ಯೆ, ದಾಖಲೆಗಳನ್ನ ಸೃಷ್ಟಿಸುತ್ತಿದ್ದ ಆರೋಪಿಗಳು ಅವುಗಳನ್ನ ಮಾರಾಟ ಮಾಡುತ್ತಿದ್ದರು.

ಬೆಂಗಳೂರು: ಹೊರ ರಾಜ್ಯಗಳಲ್ಲಿ ಕದ್ದ ಕಾರುಗಳಿಗ ಸಾರಿಗೆ ಇಲಾಖೆ ಹಾಗೂ ಬ್ಯಾಂಕ್ ಗಳ ನಕಲಿ ನಿರಾಕ್ಷೇಪಣಾ ಪ್ರಮಾಣ ಪತ್ರ (ಎನ್ಒಸಿ) ಸೃಷ್ಟಿಸಿ ಜನರಿಗೆ ಕದ್ದ ಕಾರುಗಳ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಬಂಧನಕ್ಕೊಳಪಡಿಸಿದೆ.

ಆರೋಪಿಗಳನ್ನು ಸೈಯದ್ ರಿಯಾಜ್ ಮತ್ತು ಆಸ್ಟಿನ್ ಕಾರ್ಡೋಸ್ ಎಂದು ಗುರುತಿಸಲಾಗಿದೆ. ಆರೋಪಿಗಳು ಅನ್ಯ ರಾಜ್ಯಗಳಲ್ಲಿ ಕದ್ದ ಕಾರುಗಳಿಗೆ ನಕಲಿ ನೋಂದಣಿ ಸಂಖ್ಯೆ, ದಾಖಲೆಗಳನ್ನ ಸೃಷ್ಟಿಸುತ್ತಿದ್ದ ಆರೋಪಿಗಳು ಅವುಗಳನ್ನ ಮಾರಾಟ ಮಾಡುತ್ತಿದ್ದರು.

ಅದೇ ರೀತಿ ಬ್ಯಾಂಕ್‌ನಲ್ಲಿ ಪಡೆದ ಲೋನ್ ಮರುಪಾವತಿಸಲಾಗದವರಿಂದ ಕಾರುಗಳನ್ನು ಅಡಮಾನವಿರಿಸಿಕೊಳ್ಳುತ್ತಿದ್ದ ಆರೋಪಿಗಳು, ಬಳಿಕ ಲೋನ್ ಮರುಪಾವತಿಯಾಗಿರುವಂತೆ ಎನ್ಓಸಿ ಸಿದ್ಧಪಡಿಸಿ‌ ಅವುಗಳನ್ನು ಇತರರಿಗೆ ಮಾರಾಟ ಮಾಡುತ್ತಿದ್ದರು.

ಇನ್​ಸ್ಟಾಗ್ರಂ, ಫೇಸ್‌ಬುಕ್‌ ವಿಡಿಯೋಗಳ ಮೂಲಕ ಖರೀದಾರರನ್ನ ಸೆಳೆಯುತ್ತಿದ್ದ ಆರೋಪಿಗಳು, ಇದುವರೆಗೆ 40ಕ್ಕೂ ಅಧಿಕ ಕಾರುಗಳನ್ನು ಇದೇ ಮಾದರಿಯಲ್ಲಿ ಮಾರಾಟ ಮಾಡಿದ್ದರು ಎಂದು ಪೊಲೀಸರು ವಿವರಿಸಿದರು.

ಬಂಧಿತ ಆರೋಪಿಗಳಿಂದ ಸದ್ಯ ಇನ್ನೋವಾ ಫಾರ್ಚೂನರ್, ಮಹೀಂದ್ರಾ ಜೀಪ್, ಹ್ಯೂಂಡೈ ಕ್ರೆಟಾ ಸೇರಿದಂತೆ 2.5 ಕೋಟಿ ಮೌಲ್ಯದ 17 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

'ಪ್ರಧಾನಿಗೆ ನಿಜವಾದ ಕಾಳಜಿ ಇದ್ದರೆ ಸರ್ಕಾರಿ ಶಾಲೆಗಳ ಸುಧಾರಣೆಗೆ 'ಪಿಎಂ ಕೇರ್ಸ್ ಫಂಡ್' ಬಳಸಲಿ: ಅಭಿಜಿತ್ ದೀಪ್ಕೆ ಆಗ್ರಹ

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

Ind Vs SL: ಮಾನವ್ ಸುತಾರ್ ದಾಖಲೆ; 600ನೇ ಟೆಸ್ಟ್ ಪಂದ್ಯದ ಗೆದ್ದು ಸಂಭ್ರಮಿಸಿದ ಟೀಂ ಇಂಡಿಯಾ!