ನಾಗೇಂದ್ರ PTI
ರಾಜ್ಯ

ವಾಲ್ಮೀಕಿ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿ ಮತ್ತೆ ಐದು ದಿನ ವಿಸ್ತರಣೆ

ಕಾಂಗ್ರೆಸ್ ಶಾಸಕ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರುಪಡಿಸಲಾಯಿತು.

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ಬಿ ನಾಗೇಂದ್ರ ಅವರ ಇಡಿ ಕಸ್ಟಡಿಯನ್ನು ವಿಶೇಷ ನ್ಯಾಯಾಲಯ ಗುರುವಾರ ಐದು ದಿನಗಳ ಕಾಲ ವಿಸ್ತರಿಸಿದೆ.

ಬಳ್ಳಾರಿ ಗ್ರಾಮಾಂತರ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರುಪಡಿಸಲಾಯಿತು.

ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಮತ್ತೆ ತಮ್ಮ ಕಸ್ಟಿಡಿಗೆ ನೀಡುವಂತೆ ಇಡಿ ಪರ ವಕೀಲ ಪ್ರಸನ್ನ ಕುಮಾರ್ ಅವರು ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಕೋರ್ಟ್ ನಾಗೇಂದ್ರ ಅವರನ್ನು ಜುಲೈ 22ರವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಒಟ್ಟು 89.65 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಜಾರಿ ನಿರ್ದೇಶನಾಲಯದಿಂದ ವಿಸ್ತೃತ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ವಾಲ್ಮೀಕಿ ಹಗರಣ ಸಂಬಂಧ ನಾಲ್ಕು ರಾಜ್ಯಗಳ 23 ಕಡೆ ದಾಳಿ ನಡೆಸಿದ್ದೇವೆ. 18 ನಕಲಿ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದ್ದು, ನಂತರ ಹಲವು ನಕಲಿ ಅಕೌಂಟ್‌ಗಳಿಗೆ ಹೋಗಿ ಕ್ಯಾಶ್‌ ಆಗಿ ಮಾರ್ಪಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ನಾಗೇಂದ್ರ, ಬಸನಗೌಡ ದದ್ದಲ್‌ (ವಾಲ್ಮೀಕಿ ನಿಗಮದ ಅಧ್ಯಕ್ಷ) ಮನೆಯಲ್ಲಿ ದಾಖಲೆಗಳು ಪತ್ತೆಯಾಗಿವೆ ಎಂದು ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ದೇಶದಲ್ಲೇ ಮೊದಲು: ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್; ವೇತನ ಸಹಿತ 'ಋತುಚಕ್ರ ರಜೆ'ಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ!

ನ. 25 ರಂದು ಪ್ರಧಾನಿ ಮೋದಿಯಿಂದ ರಾಮ ಮಂದಿರದ ಮೇಲೆ 21 ಅಡಿ ಎತ್ತರದ ಧರ್ಮ ಧ್ವಜಾರೋಹಣ

'ಮೂರ್ನಾಲ್ಕು ದಿನದಲ್ಲಿ ಡಿಸ್ಚಾರ್ಜ್ ಆಗ್ತಾರೆ': ದೇವೇಗೌಡರ ಆರೋಗ್ಯದ ಕುರಿತು ಎಚ್.ಡಿ ಕುಮಾರಸ್ವಾಮಿ ಹೇಳಿಕೆ

Op Sindoor ನಿಂದ ಭಾರಿ ನಷ್ಟ, ಭಾರತದ ವಿರುದ್ಧ ಪ್ರತೀಕಾರಕ್ಕೆ ಸಜ್ಜು: ಮೊದಲ ಬಾರಿಗೆ 'ಮಹಿಳಾ ವಿಂಗ್ ' ರಚಿಸಿದ ಉಗ್ರ ಸಂಘಟನೆ JeM!

SCROLL FOR NEXT