ಅಂಕೋಲದಲ್ಲಿ ಭೂಕುಸಿತ PTI
ರಾಜ್ಯ

ಅಂಕೋಲಾದಲ್ಲಿ ಗುಡ್ಡ ಕುಸಿತ ಪ್ರಕರಣ: ಘಟನಾ ಸ್ಥಳದಲ್ಲಿ ಮತ್ತೆರಡು ಮೃತದೇಹ ಪತ್ತೆ!

ಎರಡು ದಿನಗಳ ಹಿಂದೆ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೃಹತ್ ಗುಡ್ಡ ಕುಸಿದು ಬಿದ್ದು ಸುಮಾರು 7 ಮಂದಿ ಸಾವನ್ನಪ್ಪಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರೂರು ಗ್ರಾಮದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ವೇಳೆ ಇಂದು ಮತ್ತೆ ಎರಡು ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಎರಡು ದಿನಗಳ ಹಿಂದೆ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೃಹತ್ ಗುಡ್ಡ ಕುಸಿದು ಬಿದ್ದು ಸುಮಾರು 7 ಮಂದಿ ಸಾವನ್ನಪ್ಪಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರೂರು ಗ್ರಾಮದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ವೇಳೆ ಇಂದು ಮತ್ತೆ ಎರಡು ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ಘಟನೆ ನಡೆದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸ್ಥಳೀಯ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಮತ್ತು ಇತರ ಏಜೆನ್ಸಿಗಳ ಅಧಿಕಾರಿಗಳು ಮಳೆಯ ನಡುವೆ ತೀವ್ರವಾದ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಯ ನಂತರ ಮಂಗಳವಾರ ಸಂಜೆಯ ವೇಳೆಗೆ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಯಿತು.

ಕಳೆದ ಎರಡು ದಿನಗಳಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಎಲ್ಲಾ ಏಜೆನ್ಸಿಗಳ ಸಹಾಯದಿಂದ ನಾವು ಇದುವರೆಗೆ ಆರು ಮೃತದೇಹಗಳನ್ನು ಹೊರತೆಗೆದಿದ್ದೇವೆ ಎಂದು ಪೊಲೀಸ್ ಅಧೀಕ್ಷಕ (ಕಾರವಾರ) ನಾರಾಯಣ ಎಂ ತಿಳಿಸಿದ್ದಾರೆ.

ಮೃತ ನಾಲ್ವರಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಟೀ ಅಂಗಡಿ ನಡೆಸುತ್ತಿದ್ದ ಒಂದೇ ಕುಟುಂಬದವರಾಗಿದ್ದಾರೆ. ಮೃತರನ್ನು 47 ವರ್ಷದ ಲಕ್ಷ್ಮಣ್ ನಾಯ್ಕ್, ಅವರ ಪತ್ನಿ 36 ವರ್ಷದ ಶಾಂತಿ ನಾಯ್ಕ್ ಮತ್ತು ಅವರ ಮಕ್ಕಳಾದ ರೋಷನ್ (11), ಆವಂತಿಕಾ (6) ಎಂದು ಗುರುತಿಸಲಾಗಿದೆ. ಮೃತ ಇನ್ನಿಬ್ಬರನ್ನು ಚಾಲಕರು ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಈ ಪೈಕಿ ಇದುವರೆಗೆ ಆರು ಮಂದಿಯ ಮೃತದೇಹಗಳು ಪತ್ತೆಯಾಗಿವೆ. ಎಲ್ಲಾ ಮೃತದೇಹಗಳು ಪತ್ತೆಯಾಗುವವರೆಗೂ ಶೋಧ ಕಾರ್ಯಾಚರಣೆ ಮುಂದುವರಿಯಲಿದೆ.

ಏತನ್ಮಧ್ಯೆ, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ರಸ್ತೆ ಮೇಲ್ಮೈಗೆ ತೀವ್ರ ಹಾನಿಯಾಗಿರುವ ಕಾರಣ ಚಿಕ್ಕಮಗಳೂರು ತಾಲೂಕಿನ ಸೀತಾಲಯನಗಿರಿ-ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಜುಲೈ 22ರವರೆಗೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!