ಬಿಜೆಪಿ ಪ್ರತಿಭಟನೆ 
ರಾಜ್ಯ

ವಾಲ್ಮೀಕಿ ನಿಗಮ-ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ; ವಿಧಾನಸೌಧ ಗಾಂಧಿ ಪ್ರತಿಮೆ ಎದುರು BJP ಪ್ರತಿಭಟನೆ

ಕಾಂಗ್ರೆಸ್ ಎಸ್‌ಸಿ-ಎಸ್‌ಟಿಯಿಂದ ಹಣವನ್ನು ಲೂಟಿ ಮಾಡಿದ್ದು, ಆ ಹಣವನ್ನು ಕರ್ನಾಟಕ ಮತ್ತು ತೆಲಂಗಾಣ ಚುನಾವಣೆಗೆ ಬಳಸಿಕೊಂಡಿದೆ. ಅದರ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರು ಮತ್ತು ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಶಾಸಕರು ಮತ್ತು ಎಂಎಲ್‌ಸಿಗಳು ಒತ್ತಾಯಿಸಿದರು.

ಕಾಂಗ್ರೆಸ್ ಎಸ್‌ಸಿ-ಎಸ್‌ಟಿಯಿಂದ ಹಣವನ್ನು ಲೂಟಿ ಮಾಡಿದ್ದು, ಆ ಹಣವನ್ನು ಕರ್ನಾಟಕ ಮತ್ತು ತೆಲಂಗಾಣ ಚುನಾವಣೆಗೆ ಬಳಸಿಕೊಂಡಿದೆ. ಅದರ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಸಿಎಂ ರಾಜೀನಾಮೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಸಿ.ಟಿ ರವಿ ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ನಡೆದ ಹಗರಣಗಳ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಆಡಳಿತ ಪಕ್ಷದವರೇ ಮಾತನಾಡುತ್ತಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಸರಕಾರವಿದ್ದಾಗ ಹಲವಾರು ಹಗರಣಗಳು ನಡೆದಿವೆ. ಇದನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ, ದಾಖಲೆ ನೀಡುತ್ತೇವೆ. ಬಿಜೆಪಿ ಸರಕಾರದಲ್ಲಿ 300 ಕೋಟಿ ರೂ.ಗೂ ಹೆಚ್ಚು ಹಗರಣಗಳು ನಡೆದಿವೆ. ಬಿಜೆಪಿ ಭ್ರಷ್ಟಾಚಾರದ ಕಿಂಗ್ ಗಳು ಎಂದು ಹೇಳಿದರು.

ಆರೋಪದ ಕುರಿತು ಮಾತನಾಡಿ, ಹಗರಣಗಳ ಕುರಿತು ವಿಚಾರಣೆಗಳು ನಡೆಯುತ್ತಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ಆರೋರ ಕುರಿತು ನಿನ್ನೆ ಸದನದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರ್.ಅಶೋಕ್, ವಿಜಯೇಂದ್ರ ನನ್ನ ರಾಜೀನಾಮೆ ಕೇಳಿದ್ದಾರೆ. ಆರಗ ಜ್ಞಾನೇಂದ್ರ ಮಾಜಿ ಗೃಹ ಸಚಿವರು. ಇವರು ಎಸ್ಐಟಿ ತನಿಖೆ ಹಿಂದಕ್ಕೆ ಪಡೆಯಿರಿ ಎಂದು ಹೇಳಿದ್ದಾರೆ. ನೀವು ಗೃಹ ಮಂತ್ರಿ ಆಗಿದ್ದಾಗಲೂ ಎಸ್ಐಟಿ ಬಗ್ಗೆ ಹೀಗೆ ಹೇಳಿದ್ದೀರಾ? 26-5-2024 ರಂದು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡರು. ಇವರು ತಮಿಳುನಾಡಿನ ಬೋವಿ ಸಮುದಾಯದವರು. ವಿರೋಧ ಪಕ್ಷದವರು ಸಾವಿರ ಸಾರಿ ದಲಿತ, ದಲಿತ ಅಂತ ಮಾತಾಡಿದಾರೆ.

ಸಂವಿಧಾನದಲ್ಲಿ ಪರಿಶಿಷ್ಟ ಜಾತಿ/ವರ್ಗ ಎನ್ನುವ ಉಲ್ಲೇಖ ಇದೆ. ಇಬ್ಬರೂ ಸೇರಿ ಶೇ.24.1 ಜನಸಂಖ್ಯೆ ಇದ್ದಾರೆ. ಇವರ ಅಭಿವೃದ್ಧಿ ಆದರೆ ಮಾತ್ರ ಸಮ ಸಮಾಜದ ಆಶಯ ಈಡೇರುತ್ತದೆ. ಈ ಸಮುದಾಯಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಬರುತ್ತದೆ. ಅಸಮಾನತೆ ಇರುವವರೆಗೂ ಸಮಾನತೆ ಸಾಧ್ಯವಿಲ್ಲ. ಸಂವಿಧಾನ ಬಂದು 70 ವರ್ಷ ಆದರೂ ಸಮಾನತೆ ಸಿಕ್ಕಿಲ್ಲ. ಇದನ್ನು ಸರಿಪಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ವಾಲ್ಮೀಕಿ, ಬೋವಿ, ಆದಿಜಾಂಭವ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಸೇರಿ ಹಲವು ಅಭಿವೃದ್ಧಿ ನಿಗಮಗಳು ಆರಂಭಿಸಲಾಗಿದೆ.

ಈ ಎಲ್ಲಾ ನಿಗಮಗಳ ಉದ್ದೇಶ ಆಯಾ ಸಮುದಾಯಗಳನ್ನು ಆರ್ಥಿಕವಾಗಿ ಬಲಿಷ್ಠರನ್ನಾಗಿಸುವುದೇ ಆಗಿದೆ. 2013 ಡಿಸೆಂಬರ್ ನಲ್ಲಿ SCP/TSP ಕಾಯ್ದೆ ಜಾರಿ ಮಾಡಿದೆ. ನಾನು ಮುಖ್ಯಮಂತ್ರೊಯಾಗಿ ಜಾರಿ ಮಾಡಿದೆ. 24.1% ಅಭಿವೃದ್ಧಿ ಹಣ ಈ ಸಮುದಾಯದ ಅಭಿವೃದ್ಧಿಗೆ ಮೀಸಲಿಡಬೇಕು ಎಂದು ಕಡ್ಡಾಯ ಮಾಡಿದ್ದು ನಾನು. ನೀವು ಬರಿ ಮೊಸಳೆ ಕಣ್ಣೀರು ಹರಿಸುತ್ತೀರಿ.

1949 ರ ನವೆಂಬರ್ 25 ರಂದು ಸಂವಿಧಾನ ಸಭೆಯಲ್ಲಿ ಮಾಡಿದ ಭಾಷಣದಲ್ಲಿ, “ಜನವರಿ 26-1950 ಕ್ಕೆ ಸಂವಿಧಾನ ಜಾರಿಗೆ ಬಂದಿದೆ. ನಾವೆಲ್ಲರೂ ವೈರುಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಚರಿತ್ರಾರ್ಹವಾದ ಭಾಷಣದಲ್ಲಿ ಹೇಳಿದರು. ನಾವು ಪ್ರಜಾಪ್ರಭುತ್ವ ಒಪ್ಪಿಕೊಂಡಿದ್ದೇವೆ. ಇಂಥಾ ಸಮಾಜಕ್ಕೆ ಕಾಲಿಟ್ಟಾಗ ಆರ್ಥಿಕವಾಗಿ, ಸಾಮಾಜಿಕವಾಗಿ ಇನ್ನೂ ಅಸಮಾನತೆ ಉಳಿದುಕೊಂಡಿದೆ.

ನಾನು ಹಿಂದಿನ ಸಿದ್ದರಾಮಯ್ಯ ಅಲ್ಲ ಅಂತ ಯತ್ನಾಳ್ ಅವರು ಹೇಳಿದರು. ಯತ್ನಾಳ್ ಅವರು ಕೂಡ ವಾಜಪೇಯಿ ಅವರ ಸಂಪುಟದಲ್ಲಿದ್ದ ಯತ್ನಾಳ್ ಆಗಿ ಉಳಿದಿಲ್ಲ ಈಗ. ಆರ್.ಅಶೋಕ್ ಮೂರು ಗಂಟೆ ನಾಲ್ಲು ನಿಮಿಷ ಸದನದಲ್ಲಿ ಆರೋಪಿಸಿದ್ದೆಲ್ಲಾ ಪತ್ರಿಕಾ ಸುದ್ದಿಗಳ ಆಧಾರದಲ್ಲಿ ಮಾತ್ರ. ಇದು ST ವರ್ಗದ ಅಭಿವೃದ್ಧಿಗೆ ಮೀಸಲಾದ ನಿಗಮ. ನಮ್ಮ ಸರ್ಕಾರ ಬಂದ ಮೇಲೆ ಇಡೀ ದೇಶದಲ್ಲಿ Scsp/tsp ಕಾಯ್ದೆ ತಂದವರು ನಾವು. ಪರಿಶಿಷ್ಠ ಸಮುದಾಯಗಳ ಬಗ್ಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕೇಂದ್ರದ ಬಿಜೆಪಿಯಾಗಲಿ, ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಾಗಲಿ scsp/tsp ಕಾಯ್ದೆಯನ್ನು ಏಕೆ ಜಾರಿಗೆ ತಂದಿಲ್ಲ?

ಇಡೀ ದೇಶದಲ್ಲಿ ಕರ್ನಾಟಕ ಮಾತ್ರ ಇಂಥಾ ಪರಿಣಾಮಕಾರಿ ಕಾಯ್ದೆಯನ್ನು sC/st ಸಮುದಾಯಗಳಿಗಾಗಿ ಜಾರಿ ಮಾಡಿದ್ದೇವೆ. ಗುತ್ತಿಗೆಯಲ್ಲೂ SC-ST ಸಮುದಾಯಗಳಿಗೆ ಮೀಸಲಾತಿ ಜಾರಿ ಮಾಡಿರುವುದು ನಾವು ಮಾತ್ರ. ಇಂಥಾದ್ದನ್ನು ಬಿಜೆಪಿ ಯವರು ಇದುವರೆಗೂ ಏಕೆ ಜಾರಿ ಮಾಡಿಲ್ಲ. SC-ST ಉದ್ದಿಮೆಗಳಿಗೆ / ಉದ್ಯಮಗಳಿಗೆ ವಿಶೇಷ ಸಾಲದ ಸವಲತ್ತು , KIADB ಭೂಮಿ ವಿಚಾರದಲ್ಲಿ ಈ ಸಮುದಾಯಗಳಿಗೆ ಅನುಕೂಲ ಮಾಡಿ ಕಾನೂನು ತಂದವರು ನಾವು. ನಾವು SC-ST ಸಮುದಾಯದವರ ವಿರೋಧಿಯಾಗಿದ್ದರೆ ಇಷ್ಟೆಲ್ಲವನ್ನೂ ಜಾರಿ ಮಾಡಲು ಆಗುತ್ತಿತ್ತಾ?

ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ದರು. ನಿಮ್ಮಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ. ನಾವು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಪತ್ನಿ ಕೊಟ್ಡ ದೂರಿನ ಆಧಾರದಲ್ಲಿ FIR ದಾಖಲಿಸಿ ತನಿಖೆ ಶುರು ಮಾಡಿದೆವು. ನಿಗಮದ ಜನರಲ್ ಮ್ಯಾನೇಜರ್ ರಾಜಶೇಖರ್ ಕೊಟ್ಟ ಆರು ಮಂದಿ ವಿರುದ್ದ ನೀಡಿದ ದೂರಿನ ಆಧಾರದಲ್ಲೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT