ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ 
ರಾಜ್ಯ

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ: Phonepe ವಿರುದ್ಧ ಆಕ್ರೋಶ; #Boycott ಅಭಿಯಾನ

ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈಗೆ ಕನ್ನಡದ ನೆಲ, ಜಲ ಬೇಕು. ಆದರೆ, ಕನ್ನಡಿಗರಿಗೆ ನೌಕರಿ ಕೊಡಿ ಎಂದರೆ ಇವರಿಗೆ ತೊಂದರೆ. ನಾವು ಮುಂದಿನ ದಿನಗಳಲ್ಲಿ ಅವರ ಕಂಪನಿಗಳಿಗೆ ಮುತ್ತಿಗೆ ಹಾಕುತ್ತೇವೆ.

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವ ಹೊತ್ತಿನಲ್ಲೇ ಕನ್ನಡಪರ ಸಂಘಟನೆಗಳು Phonepe ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, #Boycott ಅಭಿಯಾನ ಆರಂಭಿಸಿವೆ.

ಹೌದು.. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆ (Karnataka Job Reservation) ಜಾರಿಗೆ ಆಗ್ರಹಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕನ್ನಡ ಪರ ಸಂಘಟನೆಗಳಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಕಾಯ್ದೆ ಜಾರಿ ಮಾಡುವುದಾಗಿ ಹೇಳಿದ ಬೆನ್ನಲ್ಲೇ ನಿರ್ಧಾರ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಖಾಸಗಿ ಕಂಪನಿಗಳ ಒತ್ತಡಕ್ಕೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮಣಿಯಬಾರದು. ಶೀಘ್ರವೇ ಮಸೂದೆ ಜಾರಿಗೊಳಿಸಬೇಕೆಂದು ಕನ್ನಡಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆದಿದ್ದು, ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈಗೆ ಕನ್ನಡದ ನೆಲ, ಜಲ ಬೇಕು. ಆದರೆ, ಕನ್ನಡಿಗರಿಗೆ ನೌಕರಿ ಕೊಡಿ ಎಂದರೆ ಇವರಿಗೆ ತೊಂದರೆ.

ನಾವು ಮುಂದಿನ ದಿನಗಳಲ್ಲಿ ಅವರ ಕಂಪನಿಗಳಿಗೆ ಮುತ್ತಿಗೆ ಹಾಕುತ್ತೇವೆ. ಸಿಎಂ ಸಿದ್ದರಾಮಯ್ಯ ಮಸೂದೆ ಜಾರಿಗೆ ತರದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಅಲ್ಲದೆ ಪ್ರತಿಭಟನೆ ವೇಳೆ ಉಧ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್‌ ದಾಸ್‌ ಪೈ ಮತ್ತು ಫೋನ್ ಪೇ ಸಂಸ್ಥೆಯ ಭಾವಚಿತ್ರ ಹಿಡಿದು ಕಾರ್ಯಕರ್ತರು ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಫೋನ್ ಪೇ ಮುಖ್ಯಸ್ಥರ ವಿರುದ್ಧ ಆಕ್ರೋಶ

ಇನ್ನು ಕನ್ನಡಿಗರಿಗೆ ಮೀಸಲಾತಿ ಕಾಯ್ದೆಗೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ʼಫೋನ್ ಪೇʼ ಬಾಯ್ಕಾಟ್ ಅಭಿಯಾನ (‘PhonePe’ boycott campaign) ಶುರುವಾಗಿದೆ.

ಕನ್ನಡಿಗರ ವಿರೋಧಿ ಸಮೀರ್ ನಿಗಮ್ ರ ಫೋನ್ ಪೇಯನ್ನು ಮೊಬೈಲ್ ನಿಂದ ತೆಗೆದುಹಾಕುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರುವಾಗಿದೆ. ಕನ್ನಡಿಗರ ವಿಷಯದಲ್ಲಿ ಫೋನ್ ಪೇ ಸಿಇಒ ಸಮೀರ್ ನಿಗಮ್ ಉದ್ಧಟತನ ತೋರಿದ್ದಾರೆ. ಹೀಗಾಗಿ ಫೋನ್‌ ಪೇ ಆ್ಯಪ್ ಅನ್ನು ಯಾರೂ ಬಳಸಬೇಡಿ. 1 ರೇಟಿಂಗ್ ನೀಡಿದ ಬಳಿಕ ಆ್ಯಪ್ ಡಿಲಿಟ್ ಮಾಡುವಂತೆ ಅಭಿಯಾನ ಶುರು ಮಾಡಲಾಗಿದೆ.

ಏನು ಹೇಳಿದ್ದರು ಸಮೀರ್ ನಿಗಮ್?

ಸರ್ಕಾರದ ಮೀಸಲಾತಿ ಕಾಯ್ದೆ ವಿಚಾರವಾಗಿ ಈ ಹಿಂದೆ ಟ್ವೀಟ್ ಮಾಡಿದ್ದ ಸಮೀರ್ ನಿಗಮ್, ''ನನಗೆ 46 ವರ್ಷ. 15ಕ್ಕೂ ಹೆಚ್ಚು ವರ್ಷಗಳ ಕಾಲ ಯಾವುದೇ ರಾಜ್ಯದಲ್ಲಿ ಎಂದಿಗೂ ವಾಸಿಸಿಲ್ಲ. ನನ್ನ ತಂದೆ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ದೇಶದಾದ್ಯಂತ ಪೋಸ್ಟ್ ಮಾಡಲಾಗಿದೆ. ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ?

ನಾನು ಕಂಪನಿಗಳನ್ನು ನಿರ್ಮಿಸಿದ್ದು, ಭಾರತದಾದ್ಯಂತ 25000+ ಉದ್ಯೋಗಗಳನ್ನು ಸೃಷ್ಟಿಸಿದೆ! ನನ್ನ ಮಕ್ಕಳು ತಮ್ಮ ತವರು ನಗರದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ಎಂದು ಹೇಳುವ ಮೂಲಕ ಉದ್ಯೋಗ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT