ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕುಖ್ಯಾತ ಓಜಿ ಕುಪ್ಪಂ ಗ್ಯಾಂಗ್‌ನ ಇಬ್ಬರು ಮಹಿಳೆಯರ ಬಂಧನ

ಲಾವಣ್ಯ ಮತ್ತು ಮೀನಾ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಂದ ಆಭರಣಗಳನ್ನು ಕದಿಯುತ್ತಿದ್ದರು. ಕಳೆದ ಐದು ವರ್ಷಗಳಿಂದ ಈ ಕೆಲಸದಲ್ಲಿ ಸಕ್ರಿಯರಾಗಿದ್ದರು ಎನ್ನಲಾಗಿದೆ.

ಬೆಂಗಳೂರು: ಆಂಧ್ರಪ್ರದೇಶದ ಕುಖ್ಯಾತ ಓಜಿ ಕುಪ್ಪಂನ ಇಬ್ಬರು ಮಹಿಳೆಯರನ್ನು ನಗರದ ಉಪ್ಪಾರಪೇಟೆಯ ಲಾಡ್ಜ್‌ ವೊಂದರಲ್ಲಿ ಬಂಧಿಸಲಾಗಿದ್ದು, ಅವರಿಂದ ಸುಮಾರು 80 ಲಕ್ಷ ರೂಪಾಯಿ ಮೌಲ್ಯದ 899 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಲಾವಣ್ಯ ಮತ್ತು ಮೀನಾ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಂದ ಆಭರಣಗಳನ್ನು ಕದಿಯುತ್ತಿದ್ದರು. ಕಳೆದ ಐದು ವರ್ಷಗಳಿಂದ ಈ ಕೆಲಸದಲ್ಲಿ ಸಕ್ರಿಯರಾಗಿದ್ದರು ಎನ್ನಲಾಗಿದೆ.

ಆರೋಪಿಗಳು ದಾವಣಗೆರೆ, ತುಮಕೂರು, ಸಿರಾದಲ್ಲಿ ಕಳ್ಳತನ ಮಾಡಿದ್ದಾರೆ.ಹೀಗೆ ಕೆಆರ್ ಪುರಂ ಬಸ್ ನಿಲ್ದಾಣದಲ್ಲಿ ಕುಟುಂಬದೊಂದಿಗೆ ಬಸ್‌ಗಾಗಿ ಕಾಯುತ್ತಿದ್ದಾಗ 156 ಗ್ರಾಂ ಚಿನ್ನಾಭರಣ ಕಳೆದುಕೊಂಡಿದ್ದ ಸಂತ್ರಸ್ತ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳು ತಮಿಳುನಾಡಿನ ತಿರುಪತ್ತೂರಿನ ಬ್ಯಾಂಕ್‌ನಲ್ಲಿ ಚಿನ್ನವನ್ನು ಗಿರವಿ ಇಟ್ಟಿದ್ದರು.

ಆರೋಪಿಗಳು ಬೆಂಗಳೂರಿನಲ್ಲಿ ಕೆಆರ್ ಪುರಂ, ಮಹದೇವಪುರ, ಯಶವಂತಪುರ ಮತ್ತು ರಾಮಮೂರ್ತಿನಗರ ಪೊಲೀಸ್ ವ್ಯಾಪ್ತಿಯಲ್ಲಿ ಆಭರಣಗಳನ್ನು ಕಳವು ಮಾಡಿದ್ದರು. ಓಜಿ ಕುಪ್ಪಂ ಗ್ಯಾಂಗ್‌ನ ಸದಸ್ಯರು ಗಮನ ಬೇರೆಡೆ ಸೆಳೆಯುವ ತಂತ್ರಗಳಿಗೆ ಹೆಸರುವಾಸಿಯಾಗಿದ್ದಾರೆ.

ಈ ಗ್ಯಾಂಗ್ ಗುಂಪಾಗಿ ಬಂದು ಸಣ್ಣ ಸಣ್ಣ ಗುಂಪುಗಳಾಗಿ ಒಡೆದು ಲಾಡ್ಜ್ ಗಳಲ್ಲಿ ಇರುತ್ತಾರೆ. ದೊಡ್ಡ ಲೂಟಿಯ ನಂತರ ಕುಪ್ಪಂಗೆ ತೆರಳಿ ಅವರು ಲೂಟಿ ಮಾಡಿದ್ದನ್ನು ಹಂಚಿಕೊಳ್ಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿದ ಡೆಲಿವರಿ ಬಾಯ್: ಮಹಿಳೆಗೆ ಕಿರುಕುಳ, Video ವೈರಲ್

5ನೇ T20I: ಟ್ರಾಫಿಕ್‌ ಜಾಮ್ ನಲ್ಲಿ ಸಿಲುಕಿದ ಟೀಂ ಇಂಡಿಯಾ, 45 ನಿಮಿಷಗಳ ಕಾಲ ಪಂದ್ಯ ಮುಂದೂಡಿಕೆ!

ಅಮೆರಿಕದಲ್ಲಿ ಕೌಟುಂಬಿಕ ಹಿಂಸಾಚಾರ: ಭಾರತೀಯ ಮೂಲದ ಗೂಗಲ್ ಟೆಕ್ಕಿ ಹತ್ಯೆ; ಮಗನಿಗೂ ಗುಂಡೇಟು!