ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜ್ಯ

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ ಸಿದ್ದರಾಮಯ್ಯ

'ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಗಮವಾಗಿ ಮರುನಾಮಕರಣ ಮತ್ತು ಸಿದ್ಧರಾಮೇಶ್ವರ ಅಧ್ಯಯನ‌ ಪೀಠ ಸ್ಥಾಪನೆ ಬೇಡಿಕೆಯನ್ನು ಈಡೇರಿಸಲಾಗುವುದು' ಮುಖ್ಯಮಂತ್ರಿ

ಚಿತ್ರದುರ್ಗ: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ವಿದ್ಯೆಯ ಅವಕಾಶ ಇಲ್ಲದವರು ಕುಲ ಕಸುಬನ್ನಷ್ಟೆ ಮಾಡಿಕೊಂಡು ಹಿಂದುಳಿದರು. ಶೋಷಿತ ಸಮುದಾಯಗಳ ವಿಮೋಚನೆಗೆ ಹೋರಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣದಿಂದಲೇ ಮೇಧಾವಿಯಾದರು ಎಂದು ಅವರು ಸ್ಮರಿಸಿದರು.

ಭೋವಿ ಗುರುಪೀಠದ ಸಿದ್ಧರಾಮೇಶ್ವರ ಮಹಾಸಂಸ್ಥಾನದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳ ಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಸ್ವಾಭಿಮಾನ ಬೆಳೆಸಿಕೊಂಡು ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಬೇಕು. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಶಿಕ್ಷಣ ಪಡೆಯಲು ಸಾಧ್ಯವಾಗಿಲ್ಲ. ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದರು.

ರಾಜ್ಯದಲ್ಲಿ ಎಸ್ ಸಿ/ ಎಸ್ ಟಿ ಸಮುದಾಯಗಳ‌ ಜನಸಂಖ್ಯೆ ಶೇ. 24 ರಷ್ಟಿದೆ. ಈ ಜನಸಂಖ್ಯೆಗೆ ಸಮವಾಗಿ ಅಭಿವೃದ್ಧಿ ಆಯವ್ಯಯದ ಶೇ. 24 ರಷ್ಟು ಹಣವನ್ನು ಈ ಸಮುದಾಯಗಳ ಏಳಿಗೆಗಾಗಿ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು ನಮ್ಮ ಸರ್ಕಾರ. ಭೋವಿ ಸಮುದಾಯದ ಪ್ರತಿನಿಧಿಯನ್ನು ಕೆಪಿಎಸ್‌ಸಿ ಸದಸ್ಯರನ್ನಾಗಿ ಮಾಡಿದ್ದು ನಮ್ಮ ಸರ್ಕಾರ ಎಂದು ತಿಳಿಸಿದರು.

ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಗಮವಾಗಿ ಮರುನಾಮಕರಣ ಮತ್ತು ಸಿದ್ಧರಾಮೇಶ್ವರ ಅಧ್ಯಯನ‌ ಪೀಠ ಸ್ಥಾಪನೆ ಬೇಡಿಕೆಯನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!