ಕೆಆರ್‌ಎಸ್ ಡ್ಯಾಂ (ಸಂಗ್ರಹ ಚಿತ್ರ) 
ರಾಜ್ಯ

ಕೆಲವೇ ದಿನಗಳಲ್ಲಿ KRS ಜಲಾಶಯ ಪೂರ್ಣ ಭರ್ತಿ: ಮಂಡ್ಯದಲ್ಲಿ ಪ್ರವಾಹದ ಎಚ್ಚರಿಕೆ

ನೀರಾವರಿ ಅಧಿಕಾರಿಗಳು ಒಳಹರಿವಿನ ಮೇಲೆ ನಿಗಾ ಇಟ್ಟಿದ್ದು, ಅಣೆಕಟ್ಟೆ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ನೀರು ಬಿಡಲು ನಿರ್ಧರಿಸಿದ್ದಾರೆ.

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿಟ್ಟು ಬಿಡದೇ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಡ್ಯಾಂ ನೀರಿನ ಮಟ್ಟ ಏರಿಕೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಕಳೆದೆರಡು ದಿನಗಳಿಂದ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯಕ್ಕೆ ಐದು ಟಿಎಂಸಿ ಅಡಿಗೂ ಹೆಚ್ಚು ನೀರು ಹರಿದು ಬಂದಿದೆ.

ಒಂದು ದಿನದಲ್ಲಿ ಜಲಾಶಯ ಭರ್ತಿಯಾಗಲಿದೆ ಎಂದು ನೀರಾವರಿ ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ. ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ನೀರಾವರಿ ಅಧಿಕಾರಿಗಳು ಒಳಹರಿವಿನ ಮೇಲೆ ನಿಗಾ ಇಟ್ಟಿದ್ದು, ಅಣೆಕಟ್ಟೆ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ನೀರು ಬಿಡಲು ನಿರ್ಧರಿಸಿದ್ದಾರೆ.

ಅಧಿಕಾರಿಗಳ ಜತೆಗಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಕುಮಾರ್, ಅಣೆಕಟ್ಟೆಗೆ 46 ಸಾವಿರ ಕ್ಯೂಸೆಕ್ ಒಳಹರಿವು ಇದ್ದು, ಹೇಮಾವತಿ ಜಲಾಶಯ ಕೂಡ ಭರ್ತಿಯಾಗಿದೆ. ಇದರಿಂದ ಕೆಆರ್‌ಎಸ್ ಅಣೆಕಟ್ಟೆಗೆ 70 ಸಾವಿರ ಕ್ಯೂಸೆಕ್‌ ಒಳಹರಿವು ಬರಬಹುದು. ಕೆಆರ್‌ಎಸ್‌ನಲ್ಲಿ ಗರಿಷ್ಠ 124.8 ಅಡಿ ನೀರಿನ ಮಟ್ಟ 120 ಅಡಿ ತಲುಪಿದ ನಂತರ 20,000 ಕ್ಯೂಸೆಕ್‌ ನೀರು ಹರಿಸುವ ಬದಲು 50,000 ಕ್ಯೂಸೆಕ್‌ಗೆ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕೊಡಗಿ ನಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ ಎಂದು ಅವರು ಹೇಳಿದರು. ಕೆಆರ್‌ಎಸ್‌ನಿಂದ 1 ರಿಂದ 2 ಲಕ್ಷ ಕ್ಯೂಸೆಕ್ ನೀರು ಬಿಟ್ಟರೆ ಹಾನಿಯಾಗುವ ಗ್ರಾಮಗಳನ್ನು ಗುರುತಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶ್ರೀರಂಗಪಟ್ಟಣದ 53, ಮಳವಳ್ಳಿಯ 21 ಮತ್ತು ಪಾಂಡವಪುರ ತಾಲೂಕಿನ 15 ಗ್ರಾಮಗಳು ಪ್ರವಾಹದಿಂದ ಹಾನಿಗೊಳಗಾಗಲಿವೆ ಎಂದು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಆಗುವ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು, ಹಂತ ಹಂತವಾಗಿ ನೀರು ಬಿಡುವಂತೆ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT