ಸಾಂದರ್ಭಿಕ ಚಿತ್ರ 
ರಾಜ್ಯ

ಸಿನಿಮಾ ಟಿಕೆಟ್‌, OTT ಸಬ್‌ಸ್ಕ್ರಿಪ್ಶನ್ ಮೇಲೆ ಶೇ. 2 ರಷ್ಟು ಸೆಸ್ ವಿಧಿಸಲು ಸರ್ಕಾರ ಮುಂದು!

ಸಿನಿಮಾ ಟಿಕೆಟ್‌ಗಳ ಮೇಲೆ ಮತ್ತು OTT ಸಬ್‌ಸ್ಕ್ರಿಪ್ಶನ್ ಶುಲ್ಕದ ಮೇಲೆ ಶೇ. ಒಂದರಿಂದ ಎರಡರಷ್ಟು ಹೊಸ ಸೆಸ್ ವಿಧಿಸಲು ರಾಜ್ಯ ಸರ್ಕಾರ ಯೋಜಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರವು ಸಿನಿಮಾ, ಸಾಂಸ್ಕೃತಿಕ ಕಲಾವಿದರ ಅನುಕೂಲಕ್ಕಾಗಿ ಸಿನಿಮಾ ಟಿಕೆಟ್‌ಗಳ ಮೇಲೆ ಮತ್ತು OTT ಸಬ್‌ಸ್ಕ್ರಿಪ್ಶನ್ ಶುಲ್ಕದ ಮೇಲೆ ಶೇ. ಒಂದರಿಂದ ಎರಡರಷ್ಟು ಹೊಸ ಸೆಸ್ ವಿಧಿಸಲು ಯೋಜಿಸಿದೆ.

ಈ ಶುಲ್ಕವು ಕಾರ್ಮಿಕ ಸಚಿವಾಲಯದ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಲಾವಿದರ(ಕಲ್ಯಾಣ) ಮಸೂದೆ 2024 ರ ಅಡಿಯಲ್ಲಿ ಸಿನಿ ಕಲಾವಿದರು ಮತ್ತು ಸಾಂಸ್ಕೃತಿಕ ಪ್ರದರ್ಶಕರಿಗೆ ESI ಮತ್ತು PF ನಂತಹ ಸಾಮಾಜಿಕ ಭದ್ರತಾ ಪ್ರಯೋಜನಗಳನ್ನು ಒದಗಿಸುತ್ತದೆ.

ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಲಾವಿದರ(ಕಲ್ಯಾಣ) ಮಸೂದೆ, 2024 ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಸೆಸ್ ಶೇ.1 ರಿಂದ ಶೇ.2ರ ವರೆಗೆ ಇದ್ದು, ಇದರ ನಿಖರ ದರವನ್ನು ಸರ್ಕಾರ ನಂತರ ನಿರ್ಧರಿಸಲಿದೆ.

ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್ ಮಾತನಾಡಿ, ರಾಜ್ಯದಲ್ಲಿ ಪ್ರದರ್ಶನಗೊಳ್ಳುವ ನಾಟಕಗಳಿಗೂ ಸೆಸ್ ಅನ್ನು ವಿಸ್ತರಿಸಲು ಯೋಜಿಸಲಾಗಿದೆ. ಈ ಸೆಸ್‌ನಿಂದ ಬರುವ ಹಣವನ್ನು ಚಲನಚಿತ್ರ ಕಾರ್ಮಿಕರ ಸಾಮಾಜಿಕ ಭದ್ರತಾ ಯೋಜನೆಗಳಿಗೆ ಬಳಸಿಕೊಳ್ಳಲಾಗುವುಗು.

ಸರ್ಕಾರವು ರಾಜ್ಯದಲ್ಲಿನ ಸಿನಿಮಾ, ಸಾಂಸ್ಕೃತಿಕ ಕಾರ್ಯಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ‘ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಸಾಮಾಜಿಕ ಭದ್ರತೆ & ಕಲ್ಯಾಣ ನಿಧಿ' ಎಂಬ ನಿಧಿ ಸ್ಥಾಪಿಸಲು ಮಸೂದೆಯಲ್ಲಿ ಪ್ರಸ್ತಾಪಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರ ವಿಧಿಸುವಂತಹ ಸೆಸ್‌ ಅನ್ನು ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಕಲ್ಯಾಣ ಮಂಡಳಿಗೆ ವರ್ಗಾವಣೆ ಮಾಡಲಾಗುವುದು. ಏಳು ಸದಸ್ಯರ ಈ ಮಂಡಳಿಯಲ್ಲಿ ಉಸ್ತುವಾರಿ ಸಚಿವರು, ಕಾರ್ಮಿಕ ಇಲಾಖೆ, ಕಾರ್ಮಿಕ ಇಲಾಖೆ ಆಯುಕ್ತರು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿ, ನಿ ಕಾರ್ಮಿಕರು ಇರಲಿದ್ದು, ಅವರು ಸರ್ಕಾರದಿಂದ ನಾಮನಿರ್ದೇಶನಗೊಂಡಿರುತ್ತಾರೆ.

ಕರ್ನಾಟಕ ಚಲನಚಿತ್ರ ಕಾರ್ಮಿಕರ ಕಲಾವಿದರು ಮತ್ತು ತಂತ್ರಜ್ಞರ ಒಕ್ಕೂಟದ ಅಂದಾಜಿನ ಪ್ರಕಾರ ಕಲಾವಿದರು ಮತ್ತು ತಂತ್ರಜ್ಞರು ಸೇರಿದಂತೆ ಸುಮಾರು 2,355 ಕಾರ್ಮಿಕರು ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದಾಗ್ಯೂ, ಅನೇಕ ಸಣ್ಣ-ಸಣ್ಣ ಕಲಾವಿದರು ಮತ್ತು ತಂತ್ರಜ್ಞರು ನೋಂದಾಯಿಸಿಕೊಂಡಿಲ್ಲ.

ವಿಧಾನಸಭೆಯಲ್ಲಿ ಮಂಡಿಸಲಾದ ಪ್ರಸ್ತಾವನೆಯ ಪ್ರಕಾರ, ಪ್ರತಿ ನೋಂದಾಯಿತ ಸದಸ್ಯರು ಪ್ರಯೋಜನಗಳನ್ನು ಪಡೆಯಲು ವಿಶಿಷ್ಟವಾದ ಗುರುತಿನ ಚೀಟಿಯನ್ನು ಪಡೆಯುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT