ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಗುರಾಯಿಸಿದ್ದನ್ನು ಪ್ರಶ್ನಿಸಿದ ಯುವಕನ ಬರ್ಬರ ಹತ್ಯೆ!

ಮನೋಜ್ ಶನಿವಾರ ಬೆಳಗ್ಗೆ 3 ಗಂಟೆ ಸುಮಾರಿಗೆ ತನ್ನ ಸ್ನೇಹಿತ ಆ್ಯಂಟನಿಯೊಂದಿಗೆ ರಸ್ತೆಯಲ್ಲಿ ಹೋಗುತ್ತಿದ್ದ. ಈ ವೇಳೆ ಎದುರಿನಿಂದ ಬಂದ ಆರೋಪಿಗಳ ಗುಂಪೊಂದು ಮನೋಜ್‌ನನ್ನು ಗುರಾಯಿಸಿದೆ. ಅದೇ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದೆ.

ಬೆಂಗಳೂರು: ಗುರಾಯಿಸಿದ್ದನ್ನು ಪ್ರಶ್ನಿಸಿದ ಎಂಬ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆಗೈದ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಯ್ಸಳ ನಗರದ 3ನೇ ಮುಖ್ಯರಸ್ತೆಯಲ್ಲಿ ಶನಿವಾರ ನಡೆದಿದೆ.

ಮೃತರನ್ನು ಖಾಸಗಿ ಸಂಸ್ಥೆಯ ಉದ್ಯೋಗಿ ಮನೋಜ್ (22) ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಗಾಯಗೊಂಡ ಮತ್ತೊಬ್ಬ ವ್ಯಕ್ತಿಯನ್ನು ಆ್ಯಂಟನಿ (23) ಎಂದು ಗುರುತಿಸಲಾಗಿದೆ, ಇಬ್ಬರೂ ಹೊಯ್ಸಳನಗರ ನಿವಾಸಿಗಳು.

ಮನೋಜ್ ಶನಿವಾರ ಬೆಳಗ್ಗೆ 3 ಗಂಟೆ ಸುಮಾರಿಗೆ ತನ್ನ ಸ್ನೇಹಿತ ಆ್ಯಂಟನಿಯೊಂದಿಗೆ ರಸ್ತೆಯಲ್ಲಿ ಹೋಗುತ್ತಿದ್ದ. ಈ ವೇಳೆ ಎದುರಿನಿಂದ ಬಂದ ಆರೋಪಿಗಳ ಗುಂಪೊಂದು ಮನೋಜ್‌ನನ್ನು ಗುರಾಯಿಸಿದೆ. ಅದೇ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದೆ.

ನೋಡನೋಡುತ್ತಿದ್ದಂತೆ ಆರೋಪಿಗಳು ಚಾಕುವಿನಿಂದ ಮನೋಜ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣ ಆತನ ಸ್ನೇಹಿತರು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಮನೋಜ್ ಮೃತಪಟ್ಟಿದ್ದಾನೆ. ಗಾಯಗೊಂಡಿರುವ ಆತನ ಸ್ನೇಹಿತ ಆ್ಯಂಟನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವುದಾಗಿ ರಾಮಮೂರ್ತಿ ನಗರ ಠಾಣಾ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿಕ್ಕಬಳ್ಳಾಪುರ: ಕ್ವಾರಿಯಲ್ಲಿ ಡ್ರಿಲ್ಲಿಂಗ್ ವೇಳೆ ಸ್ಫೋಟ, ಕಾರ್ಮಿಕ ಸಾವು

ಅಂತರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗುಡ್‌ನ್ಯೂಸ್: Fuel surcharge ಇಳಿಸಿದ Air India; ವಿಮಾನ ಟಿಕೆಟ್ ದರವೂ ಇಳಿಕೆ ಸಾಧ್ಯತೆ..!

ಬೆಳಗಾವಿ: 300 ವರ್ಷಗಳ ಪುರಾತನ ಮೆಟ್ಟಿಲು ಬಾವಿಗೆ ಮರುಜೀವ, Video

ರಷ್ಯಾದಿಂದಲೇ ತೈಲ ತಂದು, ರಷ್ಯಾಕ್ಕೇ ಪೆಟ್ರೋಲ್ ಮಾರಾಟ...? ಏನಿದು ಭಾರತದ ರಿಫೈನರಿಗಳ ‘ಉಲ್ಟಾ’ ಗೇಮ್? ಕೇಂದ್ರ ಸರ್ಕಾರ ಹೇಳಿದ್ದೇನು..?

ಅಮೆರಿಕವೇ ಹೆಚ್ಚು ಖರ್ಚು ಮಾಡುತ್ತಿದ್ದರೂ ಕಷ್ಟದ ಸಮಯದಲ್ಲಿ ಕೈಕೊಟ್ಟರು: ಏಕಪಕ್ಷೀಯ ಸಂಬಂಧ ಮುಂದುವರಿಸುವುದು ಹಾಸ್ಯಾಸ್ಪದ: NATO ವಿರುದ್ಧ ಟ್ರಂಪ್‌ ಆಕ್ರೋಶ