ಸಿಸಿಬಿ ಪೊಲೀಸರು 
ರಾಜ್ಯ

ಆ್ಯಪಲ್ ಹೆಸರಲ್ಲಿ ನಕಲಿ ಮೊಬೈಲ್ ಮಾರಾಟ: 8 ಲಕ್ಷ ರೂ ಮೌಲ್ಯದ ವಸ್ತು ಜಪ್ತಿ

ಚಿಕ್ಕಪೇಟೆಯ ಖಲೀಲ್ ಕಟ್ಟಡದ ಚೋದ್ರಾ ಟೆಲಿಕಾಂ ಎಂಬ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರು: ಪ್ರತಿಷ್ಠಿತ ಆ್ಯಪಲ್ ಕಂಪನಿಯ ಬ್ರ್ಯಾಂಡ್ ಹೆಸರಿನಲ್ಲಿ ಕಳಪೆ ಗುಣಮಟ್ಟದ ಮೊಬೈಲ್, ಏರ್ ಪಾಡ್ ಸೇರಿದಂತೆ ಕೆಲ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಸುಮಾರು ರೂ,8 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಚಿಕ್ಕಪೇಟೆಯ ಖಲೀಲ್ ಕಟ್ಟಡದ ಚೋದ್ರಾ ಟೆಲಿಕಾಂ ಎಂಬ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ಅಂಗಡಿಯಲ್ಲಿ ಆ್ಯಪಲ್ ಕಂಪನಿ ಬ್ರ್ಯಾಂಡ್ ಹೆಸರಿನಲ್ಲಿ ಕಳಪೆ ಗುಣಮಟ್ಟದ ಮೊಬೈಲ್ ಫೋನ್, ಏರ್ ಪಾಡ್, ಯುಎಸ್'ಬಿ ಕೇಬಲ್, ಲೈಟ್ನಿಂಗ್ ಕೇಬಲ್ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಿಸಿಬಿ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ.

ದಾಳಿ ವೇಳೆ ಆ್ಯಪಲ್ ಕಂಪನಿ ಹೆಸರಿನಲ್ಲಿ ನಕಲಿ ವಸ್ತುಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಸುಮಾರು ರೂ.8 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳಪೆ ತಾಮ್ರದ ತಂತಿ ಮಾರಾಟ: ರೂ.6 ಲಕ್ಷ ಮೌಲ್ಯದ ವೈಯರ್ ಜಪ್ತಿ

ಈ ನಡುವೆ ಪ್ರತಿಷ್ಠಿತ ಕಂಪನಿಗಳ ಬ್ರ್ಯಾಂಡ್ ಹೆಸರಿನಲ್ಲಿ ಕಳಪೆ ಗುಣಮಟ್ಟದ ವಿದ್ಯುತ್ ತಾಮ್ರದ ತಂತಿ ಮಾರಾಟ ಮಾಡುತ್ತಿದ್ದ ಗರುಚಾರ್ ಪಾಳ್ಯದ ಅಂಗಡಿ ಮೇಲೆ ಸಿಸಿಬಿ ದಾಳಿ ನಡೆಸಿ, ರೂ.6.20 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಈ ಅಂಗಡಿಯಲ್ಲಿ ವಿ ಗಾರ್ಡ್, ಆರ್ ಆರ್, ಪಾಲಿ ಕ್ಯಾಬ್, ಆ್ಯಂಕರ್,ಗ್ರೇಟ್ ವೈಟ್, ಹಾವೆಲ್ಸ್ ಕಂಪನಿಗಳ ಬ್ರ್ಯಾಂಡ್ ಹೆಸರಿನಲ್ಲಿ ಕಳಪೆ ಗುಣಮಟ್ಟದ ವಿದ್ಯುತ್ ತಾಮ್ರದ ವೈಯರ್ ಮಾರಾಟ ಮಾಡುತ್ತಿರುವ ಬಗ್ಗೆ ಖಚಿಕ ಮಾಹಿತಿ ದೊರೆತೆ ಹಿನ್ನೆಲೆಯಲ್ಲಿ ದಾಳಿ ಮಾಡಿ ರೂ,6.20 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ವಿದ್ಯುತ್ ತಾಮ್ರದ ತಂತಿ ಜಪ್ತಿ ಮಾಡಿದ್ದಾರೆ. ಈ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!