ರಾಜ್ಯ

ಅಸಹಜ ಲೈಂಗಿಕ ದೌರ್ಜನ್ಯ: ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು; ರಾಜ್ಯದ ಎಲ್ಲಾ ಮಾಲ್‌ಗಳಿಗೆ ಮಾರ್ಗಸೂಚಿ ಶೀಘ್ರ; ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ತೀರ್ಪು ಜುಲೈ 25ಕ್ಕೆ! ಇವು ಇಂದಿನ ಪ್ರಮುಖ ಸುದ್ದಿಗಳು 22-07-24

ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಕೋರಿ ಸೂರಜ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ವಿಶೇಷ ಕೋರ್ಟ್ ಇಂದು ಎರಡೂ ಪ್ರಕರಣಗಳಲ್ಲಿ ಜಾಮೀನು ಮಂಜೂರು ಮಾಡಿದೆ. ಆರೋಪಿ ಸೂರಜ್ ರೇವಣ್ಣ ಯಾವುದೇ ರೀತಿಯಲ್ಲೂ ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು. ತನಿಖಾಧಿಕಾರಿ ಮುಂದೆ ಪ್ರತಿ ತಿಂಗಳ ಎರಡನೇ ಭಾನುವಾರ ಹಾಜರಾಗಬೇಕು ಎಂದು ಕೋರ್ಟ್ ಷರತ್ತು ವಿಧಿಸಿದೆ.

ಮಾಜಿ ಸಚಿವ ನಾಗೇಂದ್ರಗೆ ಆಗಸ್ಟ್ 3ರವರೆಗೆ ನ್ಯಾಯಾಂಗ ಬಂಧನ

ವಾಲ್ಮೀಕಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಆಗಸ್ಟ್ 3ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರ ಮುಂದೆ ಬೆಳಗ್ಗೆ ಹಾಜರುಪಡಿಸಲಾಯಿತು. ಇದೇ ವೇಳೆ ಪ್ರಾಸಿಕ್ಯೂಷನ್ ಪರ ಹಾಜರಾದ ಇ.ಡಿ ವಕೀಲ ಪಿ.ಪ್ರಸನ್ನ ಕುಮಾರ್ ಅವರು, ಪ್ರಕರಣದ ಮತ್ತೊಬ್ಬ ಆರೋಪಿಯಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಹೈದರಾಬಾದ್‌ನ ಸತ್ಯನಾರಾಯಣ ವರ್ಮ ಅವರನ್ನು ಬಾಡಿ ವಾರಂಟ್ ಮುಖಾಂತರ ವಶಕ್ಕೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದರು. ಇದಕ್ಕೆ ಕೋರ್ಟ್ ನಾಳೆ ಸತ್ಯನಾರಾಯಣ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸುವಂತೆ ಸೂಚಿಸಿದರು.

ರಾಜ್ಯದ ಎಲ್ಲಾ ಮಾಲ್‌ಗಳು ಮತ್ತು ಇತರ ಸಂಸ್ಥೆಗಳಿಗೆ ಈ ಸಂಬಂಧ ಮಾರ್ಗಸೂಚಿ: ಡಿಕೆ ಶಿವಕುಮಾರ್

ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಪಂಚೆ ಧರಿಸಿ ಬಂದಿದ್ದ ರೈತನ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಮಾಲ್‌ಗಳು ಮತ್ತು ಇತರ ಸಂಸ್ಥೆಗಳಿಗೆ ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಪ್ರಕರಣ ಸಂಬಂಧ ಜುಲೈ 18ರಂದು ರಾಜ್ಯ ಸರ್ಕಾರ ಜಿಟಿ ವರ್ಲ್ಡ್ ಮಾಲ್ ಅನ್ನು ಬಂದ್ ಮಾಡಿತ್ತು. ಈ ವಿಚಾರ ಸದನದಲ್ಲೂ ಚರ್ಚೆಯಾಗಿತ್ತು. ಇದೀಗ ಇಂತಹ ಘಟನೆ ಮರುಕಳಿಸದಂತೆ ಸರ್ಕಾರದಿಂದಲೇ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸದನಕ್ಕೆ ತಿಳಿಸಿದರು. ರೈತನಿಗೆ ಪ್ರವೇಶ ನಿರಾಕರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಟ್ ಮಾಲ್ ಮಾಲೀಕರು ಕ್ಷಮೆಯಾಚಿಸಿದ್ದರು.

ಗಂಗಾ ಆರತಿ, ರಾಜ್ಯದಲ್ಲಿ ಕಾವೇರಿ ಆರತಿ: ಡಿಕೆ ಶಿವಕುಮಾರ್

ವಾರಣಾಸಿಯಲ್ಲಿ ಗಂಗಾ ಆರತಿ ನಡೆಯುವಂತೆ, ರಾಜ್ಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಪ್ರಾರಂಭಿಸುವ ಆಲೋಚನೆ ಇದೆ. ಕೊಡಗು, ಮೈಸೂರು ಹಾಗೂ ಕಾವೇರಿ ಪ್ರದೇಶದ ಶಾಸಕರು ಹಾಗು ಅಧಿಕಾರಿಗಳು ಸೇರಿದ 20 ಜನರ ಸಮಿತಿಯನ್ನು ರಚನೆ ಮಾಡಿ, ವಾರಣಾಸಿಯಲ್ಲಿ ನಡೆಯುವ ಗಂಗಾ ಆರತಿ ಹೇಗೆ ನಡೆಯುತ್ತದೆ ಎನ್ನುವ ಬಗ್ಗೆ ಅಧ್ಯಯನ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಕೆಆರ್ ಎಸ್ ಅಣೆಕಟ್ಟು ವೀಕ್ಷಣೆ ನಂತರ ಮಾತನಾಡಿದ ಅವರು. ಕಾವೇರಿ ಬೃಂದಾವನ ಅಮ್ಯೂಸ್ ಮೆಂಟ್ ಉದ್ಯಾನಕ್ಕೆ ಹೊಸ ರೂಪ ನೀಡಲಾಗುವುದು. ಪಿಪಿಪಿ ಮಾದರಿಯಲ್ಲಿ ಇದರ ಅಭಿವೃದ್ದಿ ಕೆಲಸ ಮಾಡಲಾಗುವುದು. ಈ ವಿಚಾರ ಇನ್ನೆರಡು ದಿನಗಳಲ್ಲಿ ಕ್ಯಾಬಿನೆಟ್ ಮುಂದೆ ಚರ್ಚೆಗೆ ಬರುತ್ತದೆ. ಈ ಯೋಜನೆಯಿಂದ ಈ ಭಾಗದ 8-10 ಸಾವಿರ ಜನರಿಗೆ ಉದ್ಯೋಗ ಲಭಿಸಲಿದೆ ಎಂದರು.

ಮನೆ ಊಟ, ಹಾಸಿಗೆ, ಪುಸ್ತಕ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ತೀರ್ಪು ಜುಲೈ 25ಕ್ಕೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಅವರು ಮನೆ ಊಟ, ಹಾಸಿಗೆ ಹಾಗೂ ಪುಸ್ತಕ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ಕೋರ್ಟ್‌ನಲ್ಲಿ ನಡೆಯಿತು. ದರ್ಶನ್ ಪರ ವಕೀಲ ರಾಘವೇಂದ್ರ ಅವರು ವಾದ ಮಂಡಿಸಿದ್ದು ನಟ ಎಂಬ ಕಾರಣಕ್ಕೆ ಕೈದಿಯ ಹಕ್ಕುಗಳನ್ನು ನಿರಾಕರಿಸಲಾಗಿದೆ ಎಂದು ವಾದಿಸಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪೊಲೀಸರ ಪರ ವಕೀಲರಾದ ಎಸ್ಪಿಪಿ ಪ್ರಸನ್ನ ಕುಮಾರ್ ಅವರು, ಕೊಲೆ ಆರೋಪಿಗೆ ಈ ಸೌಕರ್ಯಗಳನ್ನು ನೀಡಲು ಸಾಧ್ಯವಿಲ್ಲ ಎಂದು ವಾದಿಸಿದರು. ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಧೀಶ ವಿಶ್ವನಾಥ್ ಸಿ. ಗೌಡರ್ ಅವರು ಆದೇಶ ಕಾಯ್ದಿರಿಸಿದ್ದು ಜುಲೈ 25ರಂದು ತೀರ್ಪು ನೀಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT