ಸಾಂದರ್ಭಿಕ ಚಿತ್ರ 
ರಾಜ್ಯ

ರಾಮನಗರ: 4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ, ಸಂಬಂಧಿ ಅರೆಸ್ಟ್

ಜುಲೈ 20 ರಂದು ಆರೋಪಿ ಮನೆಗೆ ಬಂದಿದ್ದ ಆತ, ಕೊಲೆಯಾಗಿರುವ ಹೆಣ್ಣು ಮಗುವಿನ ಜೊತೆಗೆ ಮತ್ತೊಂದು ಮಗುವನ್ನು ಸಂಜೆ ಅಂಗಡಿಗೆ ಕರೆದೊಯ್ದು ಐಸ್‌ಕ್ರೀಂ ಕೊಡಿಸಿಕೊಂಡು ಬಂದಿದ್ದ. ನಂತರ, ಮತ್ತೆ ಹೆಣ್ಣು ಮಗುವನ್ನು ತನ್ನೊಂದಿಗೆ ಕರೆದೊಯ್ದಿದ್ದ ಎಂದು ಪೊಲೀಸರು ತಿಳಿಸಿದರು.

ಮಾಗಡಿ: 4 ವರ್ಷದ ಹೆಣ್ಣು ಮಗುವನ್ನು ಸಂಬಂಧಿಯೇ ಅಪಹರಿಸಿ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಗುವಿನ ಶವವು ತಿಪ್ಪಗೊಂಡನಹಳ್ಳಿ ಬಳಿ ಸೋಮವಾರ ರಾತ್ರಿ ಪತ್ತೆಯಾಗಿದೆ.

ಘಟನೆಗೆ ಸಂಬಂಧಿಸಿದಂತೆ, ಆರೋಪಿ ಬೆಂಗಳೂರಿನ ಗೌರಿಪಾಳ್ಯದ ಇಮ್ರಾನ್ ಖಾನ್‌ ವಿರುದ್ಧ ಮಾಗಡಿ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಸಂತ್ರಸ್ತ ಮಗುವಿನ ಕುಟುಂಬದ ಸಂಬಂಧಿಯಾದ ಆರೋಪಿ ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಅದೇ ರೀತಿ ಜುಲೈ 20ಕ್ಕೆ ಬಂದಿದ್ದ ಆತ, ಕೊಲೆಯಾಗಿರುವ ಹೆಣ್ಣು ಮಗುವಿನ ಜೊತೆಗೆ ಮತ್ತೊಂದು ಮಗುವನ್ನು ಸಂಜೆ ಅಂಗಡಿಗೆ ಕರೆದೊಯ್ದು ಐಸ್‌ಕ್ರೀಂ ಕೊಡಿಸಿಕೊಂಡು ಬಂದಿದ್ದ. ನಂತರ, ಮತ್ತೆ ಹೆಣ್ಣು ಮಗುವನ್ನು ತನ್ನೊಂದಿಗೆ ಕರೆದೊಯ್ದಿದ್ದ ಎಂದು ಪೊಲೀಸರು ತಿಳಿಸಿದರು.

ಸಂಜೆ 7 ಗಂಟೆಯಾದರೂ ಮಗು ಮನೆಗೆ ಬಾರದಿದ್ದರಿಂದ ಗಾಬರಿಗೊಂಡ, ತಾಯಿ ಅಕ್ಕಪಕ್ಕ ಹುಡುಕಾಡಿದರು. ಕಡೆಗೆ, ಅಂಗಡಿಗೆ ಮಗು ಕರೆದೊಯ್ದಿದ್ದ ಆರೋಪಿಗೆ ಕರೆ ಮಾಡಿದಾಗ ಆತ, ‘ನನಗೇನೂ ಗೊತ್ತಿಲ್ಲ’ ಎಂದು ಕರೆ ಸ್ಥಗಿತಗೊಳಿಸಿ, ಮೊಬೈಲ್ ಫೋನ್ ಸ್ವಿಚ್‌ ಆಫ್ ಮಾಡಿಕೊಂಡಿದ್ದ. ಅನುಮಾನಗೊಂಡ ತಾಯಿ ಠಾಣೆಗೆ ದೂರು ಕೊಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡು ಮಗು ಹಾಗೂ ಆರೋಪಿಗಾಗಿ ಹುಡುಕಾಟ ನಡೆಸಿದ್ದೆವು ಎಂದು ಹೇಳಿದರು.

ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಸೇರಿದಂತೆ, ವಿವಿಧ ಮೂಲಗಳನ್ನು ಆಧರಿಸಿ ಶೋಧ ಕಾರ್ಯ ನಡೆಸಿದಾಗ, ಆರೋಪಿ ತಿಪ್ಪಗೊಂಡನಹಳ್ಳಿ ಬಳಿಯ ರಸ್ತೆಯಲ್ಲಿ ಓಡಾಡಿರುವುದು ಗೊತ್ತಾಯಿತು. ಸುತ್ತಮುತ್ತ ಹುಡುಕಾಡಿದಾಗ ರಸ್ತೆ ಬದಿಯ ಬಂಡೆಯ ಬಳಿ ಬೆತ್ತಲೆ ಸ್ಥಿತಿಯಲ್ಲಿ ಮಗುವಿನ ಶವ ಪತ್ತೆಯಾಯಿತು. ನಂತರ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಸಹ ಬಂಧಿಸಲಾಯಿತು. ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬದವರಿಗೆ ಶವ ಹಸ್ತಾಂತರಿಸಲಾಯಿತು ಎಂದು ತಿಳಿಸಿದರು.

ಮೊನ್ನೆ ಚಾಕೊಲೇಟ್ ಕೊಡಿಸುವುದಾಗಿ ಬಾಲಕಿಯನ್ನ ಕಾಮುಕ ಅಪಹರಿಸಿದ್ದನು. ಬಾಲಕಿ ಕಾಣದ ಹಿನ್ನೆಲೆಯಲ್ಲಿ ಮಾಗಡಿ ಟೌನ್ ಠಾಣೆಯಲ್ಲಿ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಬಳಿಕ ಸಿಸಿಟಿವಿ ಪರಿಶೀಲಿಸಿದಾಗ ಇರ್ಫಾನ್ ಖಾನ್ ಬಾಲಕಿಯನ್ನ ಕರೆದೊಯ್ದ ದೃಶ್ಯ ಸೆರೆಯಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು.

ಆರೋಪಿ ಇರ್ಫಾನ್ ಖಾನ್ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಸಿಕ್ಕಿಬಿದ್ದಿದ್ದ. ಬಳಿಕ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರೋದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಮಾಗಡಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಕೊನೆಯ ಓವರ್ ನಲ್ಲಿ ಭರ್ಜರಿ ಜಯ, ಪ್ಲೇಆಫ್ ಗೆ RCB ಲಗ್ಗೆ, ರೇಸ್ ನಿಂದ PBKS ಔಟ್, CSK ಆಸೆ ಜೀವಂತ!

IPL 2026: RCB vs PBKS ಪಂದ್ಯದಲ್ಲಿ ಎರಡು ಭಾರೀ ದಾಖಲೆ ನಿರ್ಮಿಸಿದ Virat Kohli

ಸ್ವಾತಂತ್ರ್ಯ ಹೋರಾಟಗಾರ ಗಣೇಶ್ ಶಂಕರ್ ವಿದ್ಯಾರ್ಥಿ ಪ್ರತಿಮೆ ಸ್ಥಾಪನೆಗೆ ವಿಳಂಬ: ಯೋಗಿಗೆ ರಕ್ತದಲ್ಲಿ ಪತ್ರ ಬರೆದ SP ಶಾಸಕ!

ಬೌಂಡರಿ ತಡೆದ್ರೆ ಬಿಡ್ತೀವಾ.. 42 ಡಿಗ್ರಿ ತಾಪಮಾನದಲ್ಲೂ 4 ರನ್ ಓಡಿಸಿದ Virat Kohli, ಹೈರಾಣಾದ DDP, ವೈರಲ್ ವಿಡಿಯೋ ಅಸಲೀಯತ್ತು ಬಯಲು

ಯುರೇನಿಯಂ ಹಸ್ತಾಂತರ, ಪರಮಾಣು ನಿರ್ಬಂಧ: 5 ಷರತ್ತುಗಳನ್ನು ಇರಾನ್ ಮುಂದಿಟ್ಟ ಅಮೆರಿಕ!

SCROLL FOR NEXT