ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ

ರಾತ್ರಿ ಸುಮಾರು 11.10ಕ್ಕೆ ಯುವಕನೋರ್ವ ಚಾಕು ಇಟ್ಟುಕೊಂಡು ಯುವತಿ ಇದ್ದ ಲೇಡಿಸ್ ಪಿಜಿಯೊಳಗೆ ನುಗ್ಗಿದ್ದು 3ನೇ ಮಹಡಿಯಲ್ಲಿರುವ ಕೃತಿ ಕುಮಾರಿ ಅವರ ಕೊಠಡಿ ಬಳಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.

ಬೆಂಗಳೂರು: ಲೇಡಿಸ್‌ ಪಿಜಿಯೊಂದಕ್ಕೆ ನುಗ್ಗಿದ ದುಷ್ಕರ್ಮಿ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಕೋರಮಂಗಲದಲ್ಲಿರುವ ಲೇಡಿಸ್‌ ಪಿಜಿಯಲ್ಲಿಈ ಘಟನೆ ನಡೆದಿದೆ.

ಮೃತ ಯುವತಿಯನ್ನು ಬಿಹಾರ ಮೂಲದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದೆ. ರಾತ್ರಿ 11.10ರಿಂದ 11.30ರ ಸುಮಾರಿಗೆ ಈ ಹತ್ಯೆ ನಡೆದಿದೆ. ಕೃತಿ ಕುಮಾರಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕೋರಮಂಗಲದ ವಿಆರ್ ಲೇಔಟ್ ನ ಪಿಜಿಯಲ್ಲಿ ವಾಸವಾಗಿದ್ದರು.ರಾತ್ರಿ ಸುಮಾರು 11.10ಕ್ಕೆ ಯುವಕನೋರ್ವ ಚಾಕು ಇಟ್ಟುಕೊಂಡು ಯುವತಿ ಇದ್ದ ಲೇಡಿಸ್ ಪಿಜಿಯೊಳಗೆ ನುಗ್ಗಿದ್ದು 3ನೇ ಮಹಡಿಯಲ್ಲಿರುವ ಕೃತಿ ಕುಮಾರಿ ಅವರ ಕೊಠಡಿ ಬಳಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಬಳಿಕ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ.

ತೀವ್ರ ಗಾಯಗೊಂಡ ಕೃತಿ ಕುಮಾರಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಬಳಿಕ ಯುವಕ ಪರಾರಿಯಾಗಿದ್ದಾನೆ. ಪರಿಚಯಸ್ಥ ಯುವಕನಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸದೆ ಪಿಜಿ ಮಾಲೀಕರು ನಿರ್ಲಕ್ಷ್ಯ ವಹಿಸಿದ್ದೇ ಘಟನೆಗೆ ಕಾರಣ ಎನ್ನುವ ಆರೋಪ ಕೇಳಿ ಬಂದಿದೆ. ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಧಾವಿಸಿ ಮಾಹಿತಿ ಕಲೆ ಹಾಕಿದ್ದಾರೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿ ಯುವಕನ ಪತ್ತೆ ಹಚ್ಚಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!