ನಟ ದರ್ಶನ್(ಸಂಗ್ರಹ ಚಿತ್ರ) 
ರಾಜ್ಯ

ಮನೆ ಊಟ, ಹಾಸಿಗೆ, ಬಟ್ಟೆ ಕೇಳಿದ್ದ ದರ್ಶನ್ ಅರ್ಜಿ ವಜಾ; ದಾಸನಿಗೆ ಜೈಲೂಟವೇ ಗತಿ

ಕೊಲೆ ಆರೋಪಿಗಳಿಗೆ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ. ಜೈಲು ನಿಯಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ್ ಅವರು ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 24ನೇ ಎಸಿಎಂಎಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಈಗ ದರ್ಶನ್​ ಅವರಿಗೆ ಜೈಲಿನ ಊಟವೇ ಗತಿ ಆಗಿದೆ.

ಜೈಲೂಟದಿಂದ ಅಜೀರ್ಣ, ಅತಿಸಾರ ಆಗಿದೆ. ಇದರಿಂದ ದೇಹದ ತೂಕ ಕಡಿಮೆಯಾಗುತ್ತಿದೆ ಎಂಬ ಕಾರಣ ನೀಡಿ ಮನೆಯ ಊಟ ತರಿಸಲು ಅನುಮತಿ ಕೋರಿ ದರ್ಶನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು, ಕೊಲೆ ಆರೋಪಿಗಳಿಗೆ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ. ಜೈಲು ನಿಯಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ್ದಾರೆ.

ಜೈಲೂಟದಿಂದ ದರ್ಶನ್​ಗೆ ಯಾವುದೇ ಸಮಸ್ಯೆ ಆಗಿಲ್ಲ. ಶೂಟಿಂಗ್ ವೇಳೆ ಆದ ಗಾಯದ ನೋವಿನ ಬಗ್ಗೆ ಮಾತ್ರ ವೈದ್ಯರು ಸಲಹೆ ನೀಡಿದ್ದಾರೆ. ಜೈಲಿನ ನಿಯಮಾವಳಿಯಲ್ಲಿ ಮನೆಯೂಟಕ್ಕೆ ಅವಕಾಶವಿಲ್ಲ ಎಂದು ಪೊಲೀಸರ ಪರ ವಿಶೇಷ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ್ದರು.

ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್, ಮೊದಲು ಮನೆ ಊಟ ತರಿಸಿಕೊಳ್ಳಲು ಅವಕಾಶ ನೀಡಬೇಕು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಅಲ್ಲದೆ . ಈ ಕುರಿತಂತೆ ಜುಲೈ 27ರೊಳಗೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಿಚಾರಣೆ ನಡೆಸಿ, ತೀರ್ಪು ಪ್ರಕಟಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಹುಲ್ ವಿರುದ್ಧ 'ಕಿರುಚುವ' ಬದಲು ತನಿಖೆಗೆ ಆದೇಶಿಸಬೇಕಿತ್ತು: 'ಮತ ಕಳ್ಳತನ' ಆರೋಪದ ಬಗ್ಗೆ ಮಾಜಿ ಸಿಇಸಿ

ಭಾರತ - ಪಾಕ್ ಕ್ರಿಕೆಟ್ ಪಂದ್ಯ: 26 ಜನರ ಜೀವಗಳಿಗಿಂತ ಆರ್ಥಿಕ ಲಾಭವೇ ಮುಖ್ಯವೇ? ಬಿಜೆಪಿ ವಿರುದ್ಧ ಓವೈಸಿ ಕಿಡಿ

ಕ್ಷಮಿಸಿ, ಇನ್ಮುಂದೆ ನಿಮಗೆ ತೊಂದರೆ ಕೊಡಲ್ಲ: ಮಗನ ಮಾನಸಿಕ ಅಸ್ವಸ್ಥತೆ; 13ನೇ ಮಹಡಿಯಿಂದ ಪುತ್ರನೊಂದಿಗೆ ಹಾರಿ ತಾಯಿ ಆತ್ಮಹತ್ಯೆ!

ಸಾಲಬಾಧೆಯಿಂದ ನೊಂದ ಕುಟುಂಬ ಆತ್ಮಹತ್ಯೆ ಯತ್ನ: ಗಂಡ- ಮಕ್ಕಳ ಕತ್ತು ಹಿಸುಕಿ ಕೊಂದ ತಾಯಿ; ಮೂವರ ಸಾವು

Thailand safari park: ಜೀಪ್ ನಿಂದ ಇಳಿದ ಸಿಬ್ಬಂದಿಯನ್ನೇ ಎಳೆದು ಕೊಂದು ತಿಂದ ಸಿಂಹಗಳು! Video

SCROLL FOR NEXT