ವಿಧಾನಸಭೆ ಕಲಾಪ 
ರಾಜ್ಯ

ವಿಪಕ್ಷಗಳ ಅಹೋರಾತ್ರಿ ಧರಣಿ: ವಿಧಾನಸಭೆ, ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಮುಡಾ ಅಕ್ರಮ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಚರ್ಚೆಗೆ ಪಟ್ಟುಹಿಡಿದು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಅಹೋರಾತ್ರಿ ಧರಣಿ ನಡೆಸುತ್ತಿದೆ.

ಬೆಂಗಳೂರು: ಮುಡಾ ಅಕ್ರಮ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಚರ್ಚೆಗೆ ಪಟ್ಟುಹಿಡಿದು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಅಹೋರಾತ್ರಿ ಧರಣಿ ನಡೆಸುತ್ತಿದೆ.

ಇಂದು ಸಹ ಸದನದಲ್ಲಿ ವಿಪಕ್ಷಗಳು ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ನೀಡುವಂತೆ ಗದ್ದಲ ಎಬ್ಬಿಸಿದರು. ಈ ಹಿನ್ನೆಲೆಯಲ್ಲಿ ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ಜುಲೈ 15ರಂದು ಅಧಿವೇಶನ ಆರಂಭವಾಗಿದ್ದು, ಜುಲೈ 26ರವರೆಗೆ ನಡೆಯಬೇಕಿತ್ತು. ಆದರೆ ವಿಪಕ್ಷಗಳ ಗದ್ದಲದಿಂದಾಗಿ ಒಂದು ದಿನ ಮೊದಲೇ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ವಿಧಾನಸಭೆ ಕಲಾಪವನ್ನು ಸ್ಪೀಕರ್ ಯುಟಿ ಖಾದರ್ ಮುಂದೂಡಿದರೆ ವಿಧಾನಪರಿಷತ್ ಕಲಾಪವನ್ನು ಉಪಸಭಾಪತಿ ಪ್ರಾಣೇಶ್ ಮುಂದೂಡಿದರು.

ಇಂದು ಬೆಳಿಗ್ಗೆ ಸಹ ಪ್ರತಿಪಕ್ಷಗಳು ಧರಣಿಯನ್ನು ಮುಂದುವರೆಸಿದ್ದರಿಂದ ಸದನದಲ್ಲಿ ಸುಗಮ ಕಲಾಪ ಸಾಧ್ಯವಾಗದೆ ಸದನವನ್ನು ಎರಡು ಬಾರಿ ಮುಂದೂಡಲಾಯಿತು. ಮತ್ತೆ ಕಲಾಪ ಆರಂಭಗೊಂಡ ನಂತರ ವಿಪಕ್ಷಗಳ ಗದ್ದಲದ ನಡುವೆ ಸಭಾಧ್ಯಕ್ಷರು ಕೆಲ ವಿಧೇಯಕಗಳ ಮಂಡನೆ, ಅಂಗೀಕಾರ ಕಲಾಪ ನಡೆಸಿದರು. ನಂತರ ಸದನದ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT