ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ 
ರಾಜ್ಯ

ಕೇಂದ್ರದ NEET ಪರೀಕ್ಷೆ ರದ್ಧುಗೊಳಿಸುವ ನಿರ್ಣಯಕ್ಕೆ ಉಭಯ ಸದನಗಳಲ್ಲೂ ಅಂಗೀಕಾರ

ಕೇಂದ್ರದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದರು.

ಬೆಂಗಳೂರು: ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆ ನೀಟ್ ಪರೀಕ್ಷೆ ರದ್ದುಗೊಳಿಸುವ ಮಹತ್ವದ ನಿರ್ಣಯವನ್ನು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಯಿತು.

ಕೇಂದ್ರದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದರು. ಈ ನಿರ್ಣಯಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.

ನೀಟ್ ಪರೀಕ್ಷಾ ವ್ಯವಸ್ಥೆಯಿಂದ ಕರ್ನಾಟಕದ ಗ್ರಾಮೀಣ ಭಾಗದ ಬಡ ಮಕಳಿಗೆ ಹಿನ್ನಡೆಯಾಗುತ್ತಿದೆ. ವೈದ್ಯಕೀಯ ಶಿಕ್ಷಣಗಳ ಅವಕಾಶಗಳ ಮೇಲೆ ಹೊಡೆತ ಬೀಳುತ್ತಿದೆ. ರಾಜ್ಯದ ವೈದ್ಯಕೀಯ ಕಾಲೇಜುಗಳ ಹಕ್ಕುಗಳನ್ನು ಕೇಂದ್ರದ ನೀಟ್ ಪರೀಕ್ಷಾ ವ್ಯವಸ್ಥೆ ಕಸಿದುಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕನ್ನು ಕೇಂದ್ರ ಕಸಿದುಕೊಳ್ಳುತ್ತಿದೆ. ಹೀಗಾಗಿ ನೀಟ್ ಪರೀಕ್ಷಾ ವ್ಯವಸ್ಥೆ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ ಮಂಡಿಸಿದರು. ಪರಿಷತ್ತಿನಲ್ಲೂ ಮಸೂದೆಯನ್ನು ಅಂಗೀಕರಿಸಲಾಯಿತು. ನೀಟ್ ಪರೀಕ್ಷಾ ವ್ಯವಸ್ಥೆಯು ಬಡ ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಅವಕಾಶಗಳನ್ನು ಕಸಿದುಕೊಳ್ಳುತ್ತಿದೆ. ರಾಜ್ಯ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯುವ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಮತ್ತು NEET ಪರೀಕ್ಷೆಯಲ್ಲಿ ಪದೇ ಪದೇ ನಡೆಯುತ್ತಿರುವ ಅಕ್ರಮಗಳನ್ನು ಪರಿಗಣಿಸಿ, ಕೇಂದ್ರ ಸರ್ಕಾರವು ಅಗತ್ಯ ತಿದ್ದುಪಡಿಗಳನ್ನು ಮಾಡಬೇಕು. ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯಿದೆ, 2019 (2019 ರ ಕೇಂದ್ರ ಕಾಯಿದೆ 30) ಇದರಿಂದ ರಾಷ್ಟ್ರೀಯ ಮಟ್ಟದಲ್ಲಿ NEET ವ್ಯವಸ್ಥೆಯನ್ನು ಕೈಬಿಡಲಾಗಿದೆ, ”ಎಂದು ನಿರ್ಣಯವನ್ನು ಓದಿ ಅಂಗೀಕರಿಸಲಾಯಿತು.

ಕೇಂದ್ರ ಸರ್ಕಾರವು ರಾಜ್ಯಕ್ಕೆ ಪರೀಕ್ಷೆಯಿಂದ ವಿನಾಯಿತಿ ನೀಡಬೇಕು ಮತ್ತು ಸಿಇಟಿ ಆಧಾರದ ಮೇಲೆ ವೈದ್ಯಕೀಯ ಪ್ರವೇಶವನ್ನು ಒದಗಿಸಬೇಕು ಎಂದು ಕರ್ನಾಟಕ ವಿಧಾನ ಪರಿಷತ್ತು ಸರ್ವಾನುಮತದಿಂದ ಅಂಗೀಕರಿಸಿದೆ.

ಬುಧವಾರ ಪಶ್ಚಿಮ ಬಂಗಾಳ ವಿಧಾನಸಭೆಯು NEET ರದ್ದುಗೊಳಿಸಲು ಮತ್ತು ವೈದ್ಯಕೀಯ ಆಕಾಂಕ್ಷಿಗಳಿಗೆ ಹೊಸ ಪ್ರವೇಶ ಪರೀಕ್ಷೆಯನ್ನು ತರುವ ನಿರ್ಣಯವನ್ನು ಅಂಗೀಕರಿಸಿತು. ತಮಿಳುನಾಡು, ಪಶ್ಚಿಮ ಬಂಗಾಳ, ನಂತರ ನೀಟ್ ಪರೀಕ್ಷೆ ರದ್ದುಪಡಿಸಿದ ಮೂರನೇ ರಾಜ್ ಕರ್ನಾಟಕವಾಗಿದೆ. ರಾಜ್ಯದಲ್ಲಿ ಒಟ್ಟು 10,945 ಸೀಟುಗಳಿದ್ದು ಅದರಲ್ಲಿ 3,200 ಸರ್ಕಾರಿ ವೈದ್ಯಕೀಯ ಸೀಟುಗಳು ಮತ್ತು 7,745 ಸೀಟುಗಳು ಖಾಸಗಿ ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಲಭ್ಯವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

SCROLL FOR NEXT