ಆತ್ಮಹತ್ಯೆ (ಸಾಂಕೇತಿಕ ಚಿತ್ರ) 
ರಾಜ್ಯ

ಕ್ಷುಲ್ಲಕ ಕಾರಣಕ್ಕೆ ಜಗಳ: ಮೈಸೂರಿನಲ್ಲಿ ಪ್ರೇಮಿಗಳು ಆತ್ಮಹತ್ಯೆಗೆ ಶರಣು

ಸಾವಿಗೆ ಶರಣಾದ ಪ್ರೇಮಿಗಳನ್ನು ಮೈಸೂರಿನ ಮಂಡಕಳ್ಳಿಯ ಮೋನಿಕಾ ಮತ್ತು ಜ್ಯೋತಿನಗರದ ಮನು ಎಂದು ಗುರುತಿಸಲಾಗಿದೆ.

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದಿಂದ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಸಾವಿನ ಸುದ್ದಿ ತಿಳಿದು ಪ್ರಿಯಕರ ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮೈಸೂರಿನಲ್ಲಿ ನಡೆದಿದೆ.

ಸಾವಿಗೆ ಶರಣಾದ ಪ್ರೇಮಿಗಳನ್ನು ಮೈಸೂರಿನ ಮಂಡಕಳ್ಳಿಯ ಮೋನಿಕಾ ಮತ್ತು ಜ್ಯೋತಿನಗರದ ಮನು ಎಂದು ಗುರುತಿಸಲಾಗಿದೆ. ಇವರಿಬ್ಬರು ಕಳೆದ ಎರಡು ವರ್ಷಗಳಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇಬ್ಬರ ಮಧ್ಯ ಬಂದ ಒಂದು ಮನಸ್ತಾಪಕ್ಕೆ ಈ ಜೋಡಿ ಸಾವಿಗೆ ಶರಣಾಗಿದೆ.

ಮೈಸೂರಿನ ಮಂಡಕಳ್ಳಿಯಲ್ಲಿ ಮೋನಿಕಾ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರೇಯಸಿಯ ಸಾವಿನ ಸುದ್ದಿ ತಿಳಿದು ಇತ್ತ ಪ್ರಿಯಕರ ಮನು ಸಹ ಜ್ಯೋತಿನಗರದ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಪ್ರೇಮಿಗಳ ಮಧ್ಯ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿತ್ತು ಎನ್ನಲಾಗಿದೆ. ಇದರಿಂದ ಬೇಸತ್ತು ಮೊದಲಿಗೆ ಮೋನಿಕಾ ದಟ್ಟಗಳ್ಳಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮೋನಿಕಾ ಸಾವಿನ ವಿಚಾರ ತಿಳಿಯುತ್ತಿದ್ದಂತೆಯೇ ಇತ್ತ ಮನು ಸಹ ಸಾವಿನ ಹಾದಿ ತುಳಿದಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ