ರಾಜ್ಯ

Darshan ಅರ್ಜಿ ವಜಾ; Yash ಚಿತ್ರಕ್ಕೆ ಸಂಕಷ್ಟ; BJP-JDS ಗದ್ದಲ: ಉಭಯ ಸದನ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ! ಇವು ಇಂದಿನ ಪ್ರಮುಖ ಸುದ್ದಿಗಳು 25-07-24

BJP-JDS ಗದ್ದಲ: ಉಭಯ ಸದನ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಮುಡಾ ಅಕ್ರಮ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಚರ್ಚೆಗೆ ಪಟ್ಟುಹಿಡಿದು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಿನ್ನೆ ಅಹೋರಾತ್ರಿ ಧರಣಿ ನಡೆಸಿದವು. ಇಂದು ಸಹ ಸದನದಲ್ಲಿ ವಿಪಕ್ಷಗಳು ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ನೀಡುವಂತೆ ಗದ್ದಲ ಎಬ್ಬಿಸಿದರು. ಈ ಹಿನ್ನೆಲೆಯಲ್ಲಿ ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಇಂದು ಬೆಳಿಗ್ಗೆ ಸಹ ಪ್ರತಿಪಕ್ಷಗಳು ಧರಣಿಯನ್ನು ಮುಂದುವರೆಸಿದ್ದರಿಂದ ಸದನದಲ್ಲಿ ಸುಗಮ ಕಲಾಪ ಸಾಧ್ಯವಾಗದೆ ಸದನವನ್ನು ಎರಡು ಬಾರಿ ಮುಂದೂಡಲಾಯಿತು. ಮತ್ತೆ ಕಲಾಪ ಆರಂಭಗೊಂಡ ನಂತರ ವಿಪಕ್ಷಗಳ ಗದ್ದಲದ ನಡುವೆ ಸಭಾಧ್ಯಕ್ಷರು ಕೆಲ ವಿಧೇಯಕಗಳ ಮಂಡನೆ, ಅಂಗೀಕಾರ ಕಲಾಪ ನಡೆಸಿದರು. ನಂತರ ವಿಧಾನಸಭೆ ಕಲಾಪವನ್ನು ಸ್ಪೀಕರ್ ಯುಟಿ ಖಾದರ್ ಮುಂದೂಡಿದರೆ, ವಿಧಾನಪರಿಷತ್ ಕಲಾಪವನ್ನು ಉಪಸಭಾಪತಿ ಪ್ರಾಣೇಶ್ ಮುಂದೂಡಿದರು.

#ONOE #Neet ವಿರುದ್ಧ ನಿರ್ಣಯ ಅಂಗೀಕಾರ

ತೀವ್ರ ವಿವಾದಕ್ಕೆ ಕಾರಣವಾಗಿರುವ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆ ನೀಟ್ ಅನ್ನು ರದ್ದುಗೊಳಿಸುವ ಮಹತ್ವದ ನಿರ್ಣಯವನ್ನು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಇಂದು ಅಂಗೀಕರಿಸಲಾಯಿತು. ಕೇಂದ್ರದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದರೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ ಮಂಡಿಸಿದರು. ಅಲ್ಲದೆ, ರಾಜ್ಯ ವಿಧಾನಸಭೆಯು ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆ ಮತ್ತು ಲೋಕಸಭೆ ಹಾಗೂ ವಿಧಾನಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯ ವಿರುದ್ಧ ನಿರ್ಣಯ ಅಂಗೀಕರಿಸಿದೆ. 2026ರ ಜನಗಣತಿ ಅಥವಾ ಅದರ ನಂತರ ನಡೆಯುವ ಜನಗಣತಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಕ್ಷೇತ್ರಗಳ ವಿಂಗಡಣೆಯನ್ನು ನಡೆಸಬಾರದು ಎಂದು ಕರ್ನಾಟಕ ವಿಧಾನಸಭೆ ಒತ್ತಾಯಿಸಿದೆ. ಜನಸಂಖ್ಯೆಯ ಆಧಾರದ ಮೇಲೆ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ ಅದನ್ನು ಗಣನೆಗೆ ತೆಗೆದುಕೊಳ್ಳಬೇಕು. ಪ್ರತಿ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನಾಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಸದನ ಒತ್ತಾಯಿಸಿದೆ.

Darshan ಅರ್ಜಿ ವಜಾ. Yash ಚಿತ್ರಕ್ಕೆ ಸಂಕಷ್ಟ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 24ನೇ ಎಸಿಎಂಎಂ ಕೋರ್ಟ್ ಇಂದು ವಜಾಗೊಳಿಸಿದೆ. ಜೈಲೂಟದಿಂದ ಅಜೀರ್ಣ, ಅತಿಸಾರ ಆಗಿದೆ. ಇದರಿಂದ ದೇಹದ ತೂಕ ಕಡಿಮೆಯಾಗುತ್ತಿದೆ ಎಂಬ ಕಾರಣ ನೀಡಿ ಮನೆಯ ಊಟ ತರಿಸಲು ಅನುಮತಿ ಕೋರಿ ದರ್ಶನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು, ಜೈಲು ನಿಯಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಕೊಲೆ ಆರೋಪಿಗೆ ಅವಕಾಶವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ್ದಾರೆ. ಮತ್ತೊಂದೆಡೆ ಯಶ್ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಟಾಕ್ಸಿಕ್ ಚಿತ್ರಕ್ಕಾಗಿ ಪೀಣ್ಯ ಪ್ಲಾಂಟೇಶನ್ ಜಮೀನಿನ ಬಳಿ 20 ಎಕರೆ ಜಾಗದಲ್ಲಿ ಬೃಹತ್ ಸೆಟ್ ಹಾಕಲಾಗಿದೆ. ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಸೆಟ್ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ವಕೀಲ ಜಿ. ಬಾಲಾಜಿ ನಾಯ್ಡು ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಟಾಕ್ಸಿಕ್ ಚಿತ್ರದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಮ್ತತು ಎಚ್ಎಂಟಿ ಸಂಸ್ಥೆಗೆ ನೊಟೀಸ್ ನೀಡಿದೆ.

ಮಂಗಳೂರು: ಮನೆ ಗೋಡೆ ಕುಸಿದು ಅಪ್ರಾಪ್ತ ಬಾಲಕ ಸಾವು

ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ಭಾರಿ ಗಾಳಿ ಮಳೆಗೆ ಮನೆ ಕುಸಿದು ಬಾಲಕನೋರ್ವ ಮೃತಪಟ್ಟಿದ್ದಾನೆ. ಮೃತ ಬಾಲಕನ್ನು ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಮಂಗಳೂರು ಭಾಗದಲ್ಲಿ ಭಾರಿ ಮಳೆಯಾಗಿದ್ದು ಭಾರಿ ಗಾಳಿ-ಮಳೆಗೆ ಮನೆಯ ಮೇಲೆ ತಡೆಗೋಡೆ ಕುಸಿದು ಈ ದುರಂತ ಸಂಭವಿಸಿದೆ. ಮಣ್ಣಿನಡಿ ಸಿಲುಕಿ ಶೈಲೇಶ್ ಸ್ಥಳದಲ್ಲೇ‌ ಮೃತಪಟ್ಟಿದ್ದು ಐವರು ಗಾಯಗೊಂಡಿದ್ದಾರೆ. ಪಾಂಡೇಶ್ವರ ಮತ್ತು ಕದ್ರಿ ಅಗ್ನಿ ಶಾಮಕ‌ದಳ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದು ಅಪಾಯದಲ್ಲಿದ್ದ ನಾಲ್ವರನ್ನು ರಕ್ಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!

ಮಾಜಿ ಸಿಇಸಿಗಳಿಗೆ ರಾಜ್ಯಪಾಲ, ಸಚಿವ ಸ್ಥಾನದ ಗಿಫ್ಟ್: ಕಾಂಗ್ರೆಸ್ ವಿರುದ್ಧ ಹಳೆಯ ಬಹುಮಾನಗಳ ಪಟ್ಟಿ ಬಿಚ್ಚಿಟ್ಟ ಬಿಜೆಪಿ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್