ಸಂಗ್ರಹ ಚಿತ್ರ 
ರಾಜ್ಯ

Muda scam: ಗದ್ದಲ-ಕೋಲಾಹಲ ನಡುವಲ್ಲೇ 3 ವಿಧೇಯಕಗಳು ಅಂಗೀಕಾರ

ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳಿಗೆ ರಕ್ಷಣೆ ಒದಗಿಸುವ ಹಾಗೂ ಹಲ್ಲೆ, ನಿಂದನೆ ಮಾಡುವವರಿಗೆ ಜಾಮೀನು ರಹಿತ ಪ್ರಕರಣ ದಾಖಲಿಸಲು ಅವಕಾಶ ನೀಡುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ವಿಧೇಯಕ- 2024 ವಿಧೇಯಕವನ್ನು ಮಂಡನೆ ಮಾಡಲಾಗಿದೆ.

ಬೆಂಗಳೂರು: ಮುಡಾ ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ಒಟ್ಟು 9 ವಿಧೇಯಕಗಳನ್ನು ಮಂಡಿಸಲಾಗಿದ್ದು, ಈ ಪೈಕಿ 8,573 ಕೋಟಿ ರೂ.ಗಳ ಪೂರಕ ಅಂದಾಜುಗಳ ಧನ ವಿನಿಯೋಗ ವಿಧೇಯಕ ಸೇರಿ ಮೂರು ವಿಧೇಯಕಗಳಿಗೆ ಅಂಗೀಕಾರ ಪಡೆಯಲಾಗಿದೆ.

ಒಟ್ಟು 9 ವಿಧೇಯಕ ಮಂಡಿಸಿದ್ದು, ಈ ಪೈಕಿ 3 ಪರ್ಯಾಲೋಚನೆಗೆ ಪರಿಗಣಿಸಲಾಯಿತು. ಮುಡಾ ಗದ್ದಲದ ನಡುವೆ ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಹಾಗೂ ಕಾಲುವೆಗಳ ಕೊನೇ ಭಾಗದ ರೈತರಿಗೂ ನೀರು ತಲುಪಿಸಲು ಅನುವಾಗುವಂತೆ ರೂಪಿಸಿರುವ ಕರ್ನಾಟಕ ನೀರಾವರಿ ತಿದ್ದುಪಡಿ ವಿಧೇಯಕ-2024 ಹಾಗೂ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ -20245ಕ್ಕೂ ಅನುಮೋದನೆ ನೀಡಲಾಯಿತು.

ಪೂರಕ ಅಂದಾಜಿನಲ್ಲಿ, ರಾಜ್ಯದ ವಿವಿಧ ಮಠಗಳು ಹಾಗೂ ದೇವಾಲಯಗಳಿಗೆ ನೀಡಲು 85 ಕೋಟಿ ರೂ.ಗಳಷ್ಟು ಮುಖ್ಯಮಂತ್ರಿಗಳ ವಿಶೇಷ ಅನುದಾನ ಒದಗಿಸುವುದು ಸೇರಿ ಕಂದಾಯ ಇಲಾಖೆಗೆ 6,993 ಕೋಟಿ ರೂ.ಗಳ ಬೇಡಿಕೆಗೆ ಸದನದ ಒಪ್ಪಿಗೆ ಪಡೆಯಲಾಯಿತು.

ನಗರಾಭಿವೃದ್ಧಿ ಇಲಾಖೆಯ 200 ಕೋಟಿ ರೂ., ಲೋಕೋಪಯೋಗಿ ಇಲಾಖೆಯ 250 ಕೋಟಿ ರೂ., ಕಾನೂನು ಇಲಾಖೆಯ 161 ಕೋಟಿ ರೂ., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ 450 ಕೋಟಿ ರೂ. ಸೇರಿ ಒಟ್ಟು 28 ಇಲಾಖೆಗಳಿಗೆ ಸಂಬಂಧಿಸಿದ ಬೇಡಿಕೆಗಳ ಮೇಲಿನ ಪೂರಕ ಅಂದಾಜುಗಳಿಗೂ ಅಂಗೀಕಾರ ಸಿಕ್ಕಿದೆ.

ಇದಲ್ಲದೆ, ಸರ್ಕಾರಿ ಇಲಾಖೆಗಳು, ನಿಗಮ-ಮಂಡಳಿ, ವಿಶ್ವವಿದ್ಯಾಲಯ ಮುಂತಾದವುಗಳಲ್ಲಿ ಗುತ್ತಿಗೆ ಆಧಾರದ ಮೇಲಿನ ನೇಮಕಾತಿ ಪ್ರಕ್ರಿಯೆಯಲ್ಲಿ ಎಸ್ಸಿ-ಎಸ್ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂದಾತವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕ- 2024, ಕರ್ನಾಟಕ ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ ತಿದ್ದುಪಡಿ ವಿಧೇಯಕ-2024, ಕರ್ನಾಟಕ ಸರ್ಕಾರಿ ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ವಿಧೇಯಕ, ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಧೇಯಕಗಳನ್ನೂ ಮಂಡಿಸಲಾಯಿತು.

ಜೊತೆಗೆ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳಿಗೆ ರಕ್ಷಣೆ ಒದಗಿಸುವ ಹಾಗೂ ಹಲ್ಲೆ, ನಿಂದನೆ ಮಾಡುವವರಿಗೆ ಜಾಮೀನು ರಹಿತ ಪ್ರಕರಣ ದಾಖಲಿಸಲು ಅವಕಾಶ ನೀಡುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ವಿಧೇಯಕ- 2024 ವಿಧೇಯಕವನ್ನು ಮಂಡನೆ ಮಾಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT