ಸಂಗ್ರಹ ಚಿತ್ರ 
ರಾಜ್ಯ

ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ, ಆಸ್ಪತ್ರೆಗೆ ಹಾನಿ ಮಾಡಿದರೆ 7 ವರ್ಷ ಜೈಲು: ತಿದ್ದುಪಡಿ ವಿಧೇಯಕಕ್ಕೆ ಉಭಯ ಸದನಗಳ ಒಪ್ಪಿಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಮಂಡಿಸಿದ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ಮಸೂದೆಯನ್ನು ಧ್ವನಿಮತದ ಮೂಲಕ ಸದನ ಅಂಗೀಕರಿಸಿದೆ.

ಬೆಂಗಳೂರು: ವೈದ್ಯರು, ವೈದ್ಯಕೀಯ ಸಿಬ್ಬಂದಿ ಮೇಲೆ ಹಿಂಸಾಚಾರ, ಅಪಮಾನ ಮಾಡುವುದು ಮತ್ತು ಆಸ್ಪತ್ರೆಗೆ ಹಾನಿ ಮಾಡಿವವರಿಗೆ 3ರಿಂದ 7 ವರ್ಷಗಳ ವರೆಗೆ ಶಿಕ್ಷೆಗೆ ಅವಕಾಶ ಕಲ್ಪಿಸುವ ಹಾಗೂ ವೈದ್ಯಕೀಯ ವೃತ್ತಿ ಪಾಲಿಸುವವರಿಗೆ ನೋಂದಣಿ ಕಡ್ಡಾಯ ಮಾಡುವ ಮಹತ್ವದ ಮಸೂದೆಯನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಅಂಗೀಕರಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಮಂಡಿಸಿದ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ಮಸೂದೆಯನ್ನು ಧ್ವನಿಮತದ ಮೂಲಕ ಸದನ ಅಂಗೀಕರಿಸಿದೆ.

ವೈದ್ಯಕೀಯ ಪರಿಷತ್ತಿನ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರನ್ನು ಹೊರತುಪಡಿಸಿ ಇತರೆ ಸದಸ್ಯರು, ನಾಮನಿರ್ದೇಶಿತರ ಅವಧಿಯನ್ನು 5 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಎರಡು ಅವಧಿಗೆ ಅಧ್ಯಕ್ಷ ಅಥವಾ ಉಪಾಧ್ಯಕ್ಷರಾಗಿದ್ದವರು ಮತ್ತೆ ಅದೇ ಸ್ಥಾನಕ್ಕೆ ಚುನಾಯಿತರಾಗಲು ಅವಕಾಶವಿಲ್ಲ. ಪರಿಷತ್ತಿಗೆ ಮೂರು ವರ್ಷಗಳ ಅವಧಿಗೆ ಒಬ್ಬ ರಿಜಿಸ್ಟ್ರಾರ್‌ ಮತ್ತು ಉಪ ರಿಜಿಸ್ಟ್ರಾರ್‌ ನೇಮಕ ಮಾಡಲಾಗುತ್ತದೆ. ಪರಿಷತ್ತಿನಲ್ಲಿ ನೋಂದಣಿಯಾಗದವರು ವೈದ್ಯ ವೃತ್ತಿ ನಿರ್ವಹಿಸುವಂತಿಲ್ಲ. ನಕಲಿ ವೈದ್ಯರ ವಿರುದ್ಧ ಪರಿಷತ್‌ ಸ್ವಯಂಪ್ರೇರಣೆಯಿಂದ ದೂರು ಸಲ್ಲಿಸಬಹುದಾಗಿದೆ. ನಕಲಿ ವೈದ್ಯರಿಗೆ 1 ಲಕ್ಷ ರೂ. ಜುಲ್ಮಾನೆ ವಿಧಿಸಲಾಗುವುದು ಎಂದು ಹೇಳಿದರು.

ವೈದ್ಯಕೀಯ ಸೇವಾ ಸಿಬ್ಬಂದಿಯನ್ನು ಹಿಂಸಿಸುವುದು, ಅಪಮಾನ ಮಾಡುವುದು, ವೈದ್ಯೋಪಚಾರ ಸಂಸ್ಥೆಗಳ ಆಸ್ತಿಗೆ ಹಾನಿ ಮಾಡುವುದಕ್ಕೆ ಈ ಮೊದಲು ನಿಗದಿಯಾಗಿದ್ದ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಪ್ರಸ್ತಾವಿತ ಮಸೂದೆಯಲ್ಲಿ ಮೂರು ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ಏಳು ವರ್ಷಗಳವರೆಗೂ ವಿಸ್ತರಿಸಬಹುದಾದ ಕಾರಾಗೃಹ ವಾಸ ಹಾಗೂ 25 ಸಾವಿರ ರೂ.ಗಳಿಗಿಂತ ಕಡಿಮೆ ಇಲ್ಲದಂತೆ 2 ಲಕ್ಷಗಳವರೆಗೂ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಅಪರಾಧಗಳಿಗೆ ಪ್ರಚೋದನೆ ನೀಡುವವರಿಗೂ ಇದೇ ತೆರನಾದ ಶಿಕ್ಷೆಯನ್ನು ವಿಧಿಸಲು ಮಸೂದೆಯಲ್ಲಿ ಅವಕಾಶವಿದೆ. ಇನ್ನು ಮುಂದೆ ವೈದ್ಯಕೀಯ ಸೇವಾ ಸಿಬ್ಬಂದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ, ಆಡಿಯೋ-ವಿಡಿಯೋಗಳಲ್ಲಿ, ಆಸ್ಪತ್ರೆಗಳಲ್ಲಿ ಫೋಟೋ, ವಿಡಿಯೋ ತೆಗೆಯುವ ಮೂಲಕ ಅಗೌರವಿಸುವ, ದೌರ್ಜನ್ಯ ಎಸಗುವ ಕೃತ್ಯಗಳನ್ನು ನಡೆಸಿದರೆ ಅವು ದಂಡನಾರ್ಹವಾಗಲಿವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT