ಸಂಗ್ರಹ ಚಿತ್ರ 
ರಾಜ್ಯ

ವಸತಿ ಯೋಜನೆ: ಫಲಾನುಭವಿಗಳಿಗೆ ತಲಾ 1 ಲಕ್ಷ ರೂ. ನೆರವು ನೀಡಲು ಸರ್ಕಾರ ಒಪ್ಪಿಗೆ!

ಬಿಜೆಪಿ ಶಾಸಕರ ಮನವಿ ಪುರಸ್ಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳ ವಂತಿಕೆಯ ಒಟ್ಟು ವೆಚ್ಚ ರೂ.121.53 ಕೋಟಿ ಬಿಡುಗಡೆ ಮಾಡಲು ಸಮ್ಮತಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಯೋಜನೆಯ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವಪು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಕಾಂಗ್ರೆಸ್‌, ಬಿಜೆಪಿ ಶಾಸಕರ ಮನವಿ ಪುರಸ್ಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳ ವಂತಿಕೆಯ ಒಟ್ಟು ವೆಚ್ಚ ರೂ.121.53 ಕೋಟಿ ಬಿಡುಗಡೆ ಮಾಡಲು ಸಮ್ಮತಿಸಿದ್ದಾರೆ ಎಂದು ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಮಾಹಿತಿ ನೀಡಿದ್ದಾರೆ.

ಈ ಯೋಜನೆಗೆ 2017ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ರೂ.6 ಲಕ್ಷ ನಿಗದಿ ಮಾಡಲಾಗಿತ್ತು. ಕೇಂದ್ರ ಸರ್ಕಾರ ರೂ.1.50 ಲಕ್ಷ, ರಾಜ್ಯ ಸರ್ಕಾರ ಸಾಮಾನ್ಯ ವರ್ಗಕ್ಕೆ ರೂ.1.20 ಲಕ್ಷ, ಪರಿಶಿಷ್ಟ ವರ್ಗಕ್ಕೆ ರೂ.2 ಲಕ್ಷ ನಿಗದಿ ಮಾಡಿತ್ತು.

ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ನಂತರ 10.60 ಲಕ್ಷಕ್ಕೆ ಹೆಚ್ಚಳ ಮಾಡಿದ್ದರು. ರೂ.60 ಸಾವಿರ ಜಿಎಸ್'ಟಿ ಸೇರಿ 11. 20 ಲಕ್ಷವಾಗಿತ್ತು. ಸಿದ್ದರಾಮಯ್ಯ ಅವರು ಈಗ ತೆಗೆದುಕೊಂಡ ತೀರ್ಮಾನದಿಂದ ಸಾಮಾನ್ಯ ವರ್ಗ ರೂ.7.50 ಲಕ್ಷ, ಪರಿಶಿಷ್ಟರು ರೂ.6.70 ಲಕ್ಷ ಕಟ್ಟಬೇಕಾಗುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ನಟ ಪ್ರಕಾಶ್ ರೈಗೆ ಜಾಮೀನು ಮಂಜೂರು; ಬಂಧನ ಭೀತಿಯಿಂದ ಪಾರು!

ರಾಕೆಟ್ ಮರು ಬಳಕೆ: SpaceX ಬಳಿಕ ಇದೀಗ ಹೊಸ ಮೈಲುಗಲ್ಲು ತಲುಪಿದ ಚೀನಾ!

'ಯಾವ ಕ್ಷಣದಲ್ಲಾದರೂ ಕುಸಿಯಬಹುದು': Kerala Landslide ಕುರಿತು ಮೊದಲೇ ಎಚ್ಚರಿಕೆ ನೀಡಿದ್ದ ಗುತ್ತಿಗೆದಾರರ ವರದಿ

ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟ Rajpal Yadav ಮತ್ತೆ ಜೈಲುಪಾಲು: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್