ರಜನೀಶ್ ಮತ್ತು ಶಾಲಿನಿ ರಜನೀಶ್ 
ರಾಜ್ಯ

ಪತಿ ನಿವೃತ್ತಿ, ಪತ್ನಿಗೆ ಅದೇ ಹುದ್ದೆ: ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕಕ್ಕೆ ಸಂಪುಟ ಸಭೆ ಅಸ್ತು

ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್​ರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಇದೇ ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಅವರ​ ಪತ್ನಿ ಶಾಲಿನಿ ರಜನೀಶ್‌ ಅವರನ್ನು ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲು ಶುಕ್ರವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್​ ಅವರು, ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್​ರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದರು.

ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಇನ್ನು ಐದು ದಿನದಲ್ಲಿ​ ನಿವೃತ್ತಿ ಆಗುತ್ತಾರೆ. ಹೀಗಾಗಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್​ರನ್ನು ನೇಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಎಚ್ ಕೆ ಪಾಟೀಲ್ ಅವರು ಮಾಹಿತಿ ನೀಡಿದರು. ಇದರೊಂದಿಗೆ ಪತಿ ನಿವೃತ್ತಿ ಬೆನ್ನಲ್ಲೇ ಅದೇ ಹುದ್ದೆ ಪತ್ನಿಗೆ ದಕ್ಕುತ್ತಿದೆ.

ರಜನೀಶ್‌ ಗೋಯೆಲ್‌ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ನೂತನ ಮುಖ್ಯ ಕಾರ್ಯದರ್ಶಿ ಯಾರು ಎಂಬ ಚರ್ಚೆ ನಡೆದಿತ್ತು. ಜೇಷ್ಠತೆಯಲ್ಲಿ ಕ್ರಮವಾಗಿ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್‌ ಸೇಠ್‌, ಅಭಿವೃದ್ಧಿ ಆಯುಕ್ತರಾಗಿರುವ ಶಾಲಿನಿ ರಜನೀಶ್‌ ಅವರ ಹೆಸರುಗಳು ಕೇಳಿಬಂದಿದ್ದವು. ಆದರೆ ಇಬ್ಬರ ಪೈಕಿ ಶಾಲಿನಿ ರಜನೀಶ್‌ ಅವರೇ ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುವ ಸಾಧ್ಯತೆ ದಟ್ಟವಾಗಿತ್ತು. ಇದೀಗ ಶಾಲಿನಿ ರಜನೀಶ್ ಅವರು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗುವುದು ಖಚಿತವಾಗಿದೆ.

1989ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಶಾಲಿನಿ ರಜನೀಶ್ ಅವರು 2027ರ ಜೂನ್ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT