ಬೆಂಗಳೂರು: ದುಬೈಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಬಂದಿಳಿದ ವಿಮಾನದ ಇಬ್ಬರು ಪ್ರಯಾಣಿಕರ ಬಳಿ 1,68,95,725 ರೂ. ಮೌಲ್ಯದ 2.5 ಕೆಜಿ ಚಿನ್ನಾಭರಣ ಜಪ್ತಿ ಮಾಡಲಾಗಿದೆ.
ಮಂಗಳವಾರ ದುಬೈಯಿಂದ ಕೆಐಎಗೆ ಬಂದ ಪ್ರಯಾಣಿಕರನ್ನು ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ಸ್ಕಾೃನಿಂಗ್ ಮಾಡಿ ತಪಾಸಣೆ ನಡೆಸುತ್ತಿದ್ದರು. ಈ ಇಬ್ಬರ ಬಟ್ಟೆಯಲ್ಲಿ ಲೋಹ ಬಚ್ಚಿಟ್ಟಿರುವುದು ಗೊತ್ತಾಗಿದೆ.
ಬಳಿಕ ಇಬ್ಬರನ್ನೂ ವಶಕ್ಕೆ ಪಡೆದು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಉಡುಪಿನಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನ ಬಚ್ಚಿಟ್ಟಿರುವುದು ತಿಳಿದುಬಂದಿದೆ.
ಪ್ರತ್ಯೇಕ ಮಾಡಿ ನೋಡಿದಾಗ 2 ಕೆಜಿ 579 ಗ್ರಾಂ ಚಿನ್ನದ ಪೇಸ್ಟ್ ಪತ್ತೆಯಾಗಿದೆ. ಇದರ ಮೌಲ್ಯ 1.69 ಕೋಟಿ ರೂ. ಆಗಿದೆ ಎಂದು ಕೆಐಎ ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.