ರೋಹನ್ ಕಾರಿಯಪ್ಪ ಮತ್ತು ಶರವಣ ಭಟ್ಟಾಚಾರ್ಯ  
ರಾಜ್ಯ

ಕಿವುಡ, ಮೂಗರ ಬಗ್ಗೆ Instagramನಲ್ಲಿ ಅವಮಾನಕರ ವಿಡಿಯೋ; ರೇಡಿಯೊ ಜಾಕಿ ಸೇರಿ ಇಬ್ಬರ ಬಂಧನ

ರೋಹನ್ ಅವರು ಹಿಂದಿ ಭಾಷೆಯಲ್ಲಿ ರಾಜಕೀಯದ ಕುರಿತು ಮಾತನಾಡಿದ್ದರೆ, ಶರವಣ ಅದನ್ನು ಸನ್ನೆಯಲ್ಲಿ ಮಾಡಿ ಅವಹೇಳನ ಆಗುವಂತೆ ತೋರಿಸಿದ್ದರು ಎಂಬ ಆರೋಪವಿದೆ.

ಬೆಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಕಿವುಡರು ಹಾಗೂ ಮೂಗರನ್ನು ಅಪಹಾಸ್ಯ ಮಾಡುವ ಹಾಗೂ ಮನನೋಯಿಸುವ ರೀತಿಯಲ್ಲಿ ವಿಡಿಯೋ ಮಾಡಿ ಹರಿಬಿಟ್ಟಿದ್ದ ರೇಡಿಯೋ ಜಾಕಿ ಸೇರಿ ಇಬ್ಬರು ಯುವಕರನ್ನು ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ರೋಹನ್ ಕಾರಿಯಪ್ಪ ಮತ್ತು ಶರವಣ ಭಟ್ಟಾಚಾರ್ಯ ಬಂಧಿತರಾದವರಾಗಿದ್ದಾರೆ. ರೋಹನ್ ಕಾರ್ಯಪ್ಪ ಅವರು ಎಫ್‌ಎಂ ರೇಡಿಯೊದಲ್ಲಿ ಜಾಕಿಯಾಗಿ ಕೆಲಸ ಮಾಡುತ್ತಿದ್ದರೆ, ಶರವಣ ಅವರು ಮನೆಯಲ್ಲೇ ಇದ್ದರು. ಯುವ ರಾಜಕಾರಣಿಗಳನ್ನು ಅಣಕಿಸುವ ಭರದಲ್ಲಿ ವಾಕ್‌ ಮತ್ತು ಶ್ರವಣದೋಷವುಳ್ಳವರ ಕುರಿತು ಅವಹೇಳನಕಾರಿಯಾಗಿ ರೀಲ್ಸ್ ಮಾಡಿದ್ದರು ಎನ್ನಲಾಗಿದೆ.

ರೋಹನ್ ಅವರು ಹಿಂದಿ ಭಾಷೆಯಲ್ಲಿ ರಾಜಕೀಯದ ಕುರಿತು ಮಾತನಾಡಿದ್ದರೆ, ಶರವಣ ಅದನ್ನು ಸನ್ನೆಯಲ್ಲಿ ಮಾಡಿ ಅವಹೇಳನ ಆಗುವಂತೆ ತೋರಿಸಿದ್ದರು ಎಂಬ ಆರೋಪವಿದೆ.

ಆ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಈ ವೀಡಿಯೊಗೆ ಆಕ್ಷೇಪ ವ್ಯಕ್ತವಾದ ಮೇಲೆ ಡಿಲೀಟ್‌ ಮಾಡಿ ಕ್ಷಮೆ ಕೋರಿದ್ದರು ಎಂದು ಮೂಲಗಳು ತಿಳಿಸಿವೆ.

ಇದರ ಬೆನ್ನಲ್ಲೇ ಆರೋಪಿಗಳನ್ನು ಬಂಧಿಸುವಂತೆ ವ್ಯಕ್ತಿಯೊಬ್ಬರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT