ಕೆಆರ್‌ಎಸ್‌ ಜಲಾಶಯ (ಸಂಗ್ರಹ ಚಿತ್ರ) 
ರಾಜ್ಯ

ಕೆಆರ್‌ಎಸ್‌ ಜಲಾಶಯ ಭರ್ತಿ: ಜುಲೈ 29 ರಂದು ಕಾವೇರಿ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಸಮರ್ಪಣೆ

ಕೆಆರ್‌ಎಸ್‌ ಅಣೆಕಟ್ಟು ಗರಿಷ್ಠ ಸಾಮರ್ಥ್ಯಕ್ಕೆ ಭರ್ತಿಯಾಗಿರುವುದರಿಂದ ಈ ಭಾಗದ ಜೀವನಾಡಿ ನದಿಗೆ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವುದು ವಾಡಿಕೆ. ಸೋಮವಾರ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಲಿದ್ದಾರೆ.

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 29 ರಂದು (ಸೋಮವಾರ) ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನಲ್ಲಿ ಕಾವೇರಿ ನದಿಗೆ ಬಾಗಿನ ಅರ್ಪಿಸಲಿದ್ದಾರೆ.

ಕೆಆರ್‌ಎಸ್‌ ಅಣೆಕಟ್ಟು ಗರಿಷ್ಠ ಸಾಮರ್ಥ್ಯಕ್ಕೆ ಭರ್ತಿಯಾಗಿರುವುದರಿಂದ ಈ ಭಾಗದ ಜೀವನಾಡಿ ನದಿಗೆ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವುದು ವಾಡಿಕೆ. ಸೋಮವಾರ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲ ಸಂಪನ್ಮೂಲ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಹೆಚ್ ಡಿ ಕುಮಾರಸ್ವಾಮಿ, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ, ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಹಾಗೂ ಜಿಲ್ಲಾಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಬೋಸರಾಜು, ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮೈಸೂರು ಜಂಗಲ್ ಲಾಡ್ಜ್ ಅಧ್ಯಕ್ಷರಾದ ಸಿ.ಅನಿಲ್ ಕುಮಾರ್ ರವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ ರಮೇಶ್ ಬಂಡಿಸಿದ್ದೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದ್ಯಾರ್ಥಿಗೆ ಪೆಲೆಟ್ ಗನ್ ಪೆಟ್ಟು: ರಾಹುಲ್ ಧರಣಿ ಬೆನ್ನಲ್ಲೇ FIR ದಾಖಲಿಸಿದ ದೆಹಲಿ ಪೊಲೀಸ್

ಜಂತರ್ ಮಂತರ್ ಪ್ರತಿಭಟನೆಗಳು ಭ್ರಷ್ಟಾಚಾರ ಮಾತ್ರವಲ್ಲ, ವ್ಯವಸ್ಥೆಯ ವೈಫಲ್ಯಗಳನ್ನೂ ಎತ್ತಿ ತೋರಿಸಿದೆ: RSS

Toxic ಟಿಕೆಟ್ ದಾಖಲೆ ಮಾರಾಟ: 1.65 ಲಕ್ಷ ಮುಂಗಡ ಟಿಕೆಟ್ ಬುಕ್ಕಿಂಗ್; ಹಿಂದಿಯಲ್ಲೇ ಮೊದಲ ದಿನ 50 ಕೋಟಿ ಗಳಿಕೆ ಸಾಧ್ಯತೆ, ಕನ್ನಡದಲ್ಲೆಷ್ಟು!

"ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ"- ಸೆರ್ಗಿಯೊ ಗೋರ್ ಹೇಳಿಕೆಗೆ ಪಾಕ್ ಕೆಂಡ- ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ- ಭಾರತ

3ನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ-ಸೈಫ್ ಅಲಿ ಖಾನ್? ಸಂಚಲನ ಸೃಷ್ಟಿಸಿದ ಬೇಬಿ ಬಂಪ್ ವಿಡಿಯೋ!