ವಾಲ್ಮೀಕಿ ನಿಗಮ ಹಗರಣ 
ರಾಜ್ಯ

Valmiki Corporation scam: ಆರೋಪಿಗಳಿಂದ 16 ಕೆಜಿ ಚಿನ್ನ, 2.5 ಕೋಟಿ ನಗದು ವಶ

ಸತ್ಯನಾರಾಯಣ ವರ್ಮಾ ಅವರ ಮನೆಯಲ್ಲಿ 15 ಕೆಜಿ ಚಿನ್ನ ಪತ್ತೆಯಾಗಿತ್ತು. ಅಪರಾಧದಿಂದ ಪಡೆದ ಹಣದಲ್ಲಿ ಅಲ್ಟ್ರಾ ಐಷಾರಾಮಿ ಲಂಬೋರ್ಗಿನಿ ಕಾರನ್ನು ಖರೀದಿಸಿರುವುದಾಗಿ ವರ್ಮಾ ತನಿಖೆ ಒಪ್ಪಿಕೊಂಡಿದ್ದಾರೆ ಎಂದು ಎಸ್‌ಐಟಿ ಉನ್ನತ ಮೂಲಗಳು ಶನಿವಾರ ತಿಳಿಸಿವೆ.

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ಇಬ್ಬರು ಆರೋಪಿಗಳಿಂದ 16 ಕೆಜಿ ಚಿನ್ನ ಮತ್ತು 2.5 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗೆ ಅಧಿಕಾರಿಗಳು ನಡೆಸಲಾಗಿದ್ದ ದಾಳಿಯಲ್ಲಿ ಸತ್ಯನಾರಾಯಣ ವರ್ಮಾ ಅವರ ಮನೆಯಲ್ಲಿ 15 ಕೆಜಿ ಚಿನ್ನ ಪತ್ತೆಯಾಗಿತ್ತು. ಅಪರಾಧದಿಂದ ಪಡೆದ ಹಣದಲ್ಲಿ ಅಲ್ಟ್ರಾ ಐಷಾರಾಮಿ ಲಂಬೋರ್ಗಿನಿ ಕಾರನ್ನು ಖರೀದಿಸಿರುವುದಾಗಿ ವರ್ಮಾ ತನಿಖೆ ಒಪ್ಪಿಕೊಂಡಿದ್ದಾರೆ ಎಂದು ಎಸ್‌ಐಟಿ ಉನ್ನತ ಮೂಲಗಳು ಶನಿವಾರ ತಿಳಿಸಿವೆ.

ಮತ್ತೋರ್ವ ಆರೋಪಿ ಕಾಕಿ ಶ್ರೀನಿವಾಸ್ ರಾವ್ ಅವರ ಬಳಿ ಒಂದು ಕೆಜಿ ಚಿನ್ನ ಪತ್ತೆಯಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಇನ್ನು ಪ್ರಕರಣದ ತನಿಖೆ ತೀವ್ರಗೊಂಡಿದ್ದರಿಂದ ಈ ತಿಂಗಳ ಆರಂಭದಲ್ಲಿ ಇಬ್ಬರನ್ನೂ ಬಂಧಿಸಲಾಗಿತ್ತು. ಇದಲ್ಲದೆ, ಐಷಾರಾಮಿ ಫ್ಲಾಟ್ ಖರೀದಿಸಲು ಸತ್ಯನಾರಾಯಣ ವರ್ಮಾ ಪಾವತಿಸಿದ ಬಿಲ್ಡರ್‌ನಿಂದ 2.5 ಕೋಟಿ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದ ತನಿಖೆಯ ಭಾಗವಾಗಿ ಅಧಿಕಾರಿಗಳು ಬಿಲ್ಡರ್ ಅನ್ನು ಸಂಪರ್ಕಿಸಿದಾಗ ಅವರು ತಕ್ಷಣವೇ ತಾವು ಪಡೆದಿದ್ದ ಮೊತ್ತವನ್ನು ಹಿಂದಿರುಗಿಸಿದರು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

187 ಕೋಟಿ ರೂ ಹಗರಣ

ವಾಲ್ಮೀಕಿ ನಿಗಮದ ಹಗರಣವು ಸುಮಾರು 187.33 ಕೋಟಿ ರೂ.ಗಳ ಒಳಗೊಂಡಿದೆ ಎನ್ನಲಾಗಿದೆ. ಸರ್ಕಾರದ ಖಜಾನೆಯಲ್ಲಿ 40 ಕೋಟಿ ಸೇರಿದಂತೆ ವಿವಿಧ ಖಾತೆಗಳಲ್ಲಿ ಇರಿಸಲಾದ ಹಣವನ್ನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂಜಿ ರಸ್ತೆಯ ಶಾಖೆಗೆ ಹಣ ವರ್ಗಾಯಿಸಲಾಗಿದೆ.

187.33 ಕೋಟಿ ರೂ.ಗಳಲ್ಲಿ 18 ಸಂಸ್ಥೆಗಳು ಸೇರಿದಂತೆ ತೆಲಂಗಾಣದ ಕನಿಷ್ಠ 217 ವಿವಿಧ ಬ್ಯಾಂಕ್ ಖಾತೆಗಳಿಗೆ 88.63 ಕೋಟಿ ರೂ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಧಿಕಾರಿ ಆತ್ಮಹತ್ಯೆಯಿಂದ ಹಗರಣ ಬಯಲು

ಪಾಲಿಕೆಯ ಲೆಕ್ಕ ಅಧೀಕ್ಷಕ ಚಂದ್ರಶೇಖರನ್ ಪಿ ಆತ್ಮಹತ್ಯೆ ಮಾಡಿಕೊಂಡ ನಂತರ ಈ ಹಗರಣ ಬೆಳಕಿಗೆ ಬಂದಿತ್ತು. ತನ್ನ ಆತ್ಮಹತ್ಯೆ ಪತ್ರದಲ್ಲಿ ಹಣ ಹೇಗೆ ವರ್ಗಾವಣೆಯಾಗಿದೆ ಮತ್ತು ಹಗರಣದಲ್ಲಿ ಕಾರ್ಪೊರೇಷನ್ ಮತ್ತು ಬ್ಯಾಂಕ್ ಅಧಿಕಾರಿಗಳ ಪಾತ್ರವನ್ನು ವಿವರವಾಗಿ ವಿವರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಆಡಳಿತಾರೂಢ ಕಾಂಗ್ರೆಸ್ ಹಗರಣದಲ್ಲಿ ಭಾಗಿಯಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲದೆ ಹಣ ವರ್ಗಾವಣೆ ನಡೆಯಲು ಸಾಧ್ಯವಿಲ್ಲ ಎಂದು ಆರೋಪಿಸಿದ್ದಾರೆ. ಈ ಆರೋಪವನ್ನು ತಳ್ಳಿ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT