ಮಂಡ್ಯ: ಎರಡು ವರ್ಷಗಳ ನಂತರ ಭರ್ತಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅಭಿಜಿತ್ ಲಗ್ನದಲ್ಲಿ ಬಾಗಿನ ಅರ್ಪಿಸಿದರು.
ಇಂದು ಕೆಆರ್ ಎಸ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ನಂತರ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿಗಳಿಗೆ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ ಎಚ್.ಸಿ ಮಹದೇವಪ್ಪ, ವೆಂಕಟೇಶ್ ಸೇರಿ ಸೇರಿದಂತೆ ಹಳೇ ಮೈಸೂರು ಭಾಗದ ಸಚಿವರು, ಶಾಸಕರು ಸಾಥ್ ನೀಡಿದರು.
ವೈದಿಕ ಬಾನು ಪ್ರಕಾಶ್ ಶರ್ಮಾರಿಂದ ಪೂಜಾ ಕಾರ್ಯ ನೆರವೇರಿತು. ಜಲಾಶಯಕ್ಕೆ ಕ್ಷೀರಾಭಿಷೇಕ ಪುಷ್ಪಾರ್ಚನೆ ಮಾಡಲಾಯಿತು.
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅವಧಿಯಲ್ಲಿ ಮೂರನೇ ಬಾರಿಗೆ ಕೆಆರ್ಎಸ್ ಗೆ ಬಾಗಿನ ಅರ್ಪಿಸಿದ್ದಾರೆ. ಮೊದಲ ಬಾರಿಗೆ ಸಿಎಂ ಆದಾಗ 2013 ಹಾಗೂ 2014 ರಲ್ಲಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದರು. ಆನಂತರ ಬರಗಾಲ ಹಿನ್ನೆಲೆ ಜಲಾಶಯ ಭರ್ತಿಯಾಗಿರಲಿಲ್ಲ. ಎರಡನೇ ಅವಧಿಗೂ ಸಿಎಂ ಆದಗಲೂ 2023ರಲ್ಲಿ ಕನ್ನಂಬಾಡಿ ಅಣೆಕಟ್ಟು ಭರ್ತಿಯಾಗಿರಲಿಲ್ಲ. ಈ ವರ್ಷ ಸಂಪೂರ್ಣ ಭರ್ತಿಯಾಗಿದ್ದು ಬಾಗಿನ ಅರ್ಪಿಸಿದ್ದಾರೆ.