ಸಂಗ್ರಹ ಚಿತ್ರ 
ರಾಜ್ಯ

ಪೆಡ್ಲರ್'ಗಳ ಪತ್ತೆಗೆ ಪೊಲೀಸರ ಮಾಸ್ಟರ್ ಪ್ಲಾನ್..! ಮಾದಕವಸ್ತು ಬಳಕೆದಾರರನ್ನೇ ಮಾಹಿತಿದಾರರನ್ನಾಗಿ ಬಳಸಲು ಮುಂದು!

ನಗರದಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕುವುದು ನಮ್ಮ ಗುರಿಯಾಗಿದೆ. ಮಾದಕ ದ್ರವ್ಯ ಸೇವನೆ ಮಾಡುವವರ ವಿರುದ್ಧ ಪ್ರಕರಣಗಳ ದಾಖಲಿಸದೆ, ಸಂಖ್ಯೆ ಹೆಚ್ಚಾಗುತ್ತಲೇ ಇರುತ್ತದೆ. ಆದರೆ, ಅವರನ್ನೇ ಮಾಹಿತಿದಾರರನ್ನಾಗಿ ಬಳಕೆ ಮಾಡಿದರೆ, ಪೆಡ್ಲರ್ ಗಳ ಹುಡುಕಾಟ ಸುಲಭವಾಗುತ್ತದೆ.

ಬೆಂಗಳೂರು: ಮಾದಕ ವಸ್ತು ಜಾಲ ಪತ್ತೆ ಹಾಗೂ ಪೆಡ್ಲರ್ ಗಳ ಪತ್ತೆಗೆ ಖಾಕಿ ಪಡೆ ಮಾಸ್ಟರ್‌ ಪ್ಲಾನ್‌ ರೂಪಿಸಿದೆ.

ಮಾದಕ ದ್ರವ್ಯ ಸೇವನೆ ಪ್ರಕರಣಗಳಲ್ಲಿ ಮೊದಲ ಬಾರಿಗೆ ಸಿಕ್ಕಿಬಿದ್ದವರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸುವುದನ್ನು ನಿಲ್ಲಿಸಿ, ಅವರನ್ನೇ ಮಾಹಿತಿದಾರರನ್ನಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಇದೇ ವ್ಯಕ್ತಿ ಮತ್ತೆ ಸಿಕ್ಕಿಬಿದ್ದಿದ್ದೇ ಆದರೆ, ಪ್ರಕರಣ ದಾಖಲಿಸಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ಪೊಲೀಸರ ಈ ಹೊಸ ತಂತ್ರ ಈಗಾಗಲೇ ಕೆಲಸ ಮಾಡಿದೆ ಎನ್ನಲಾಗಿದೆ. ರಾಜ್ಯ ಪೊಲೀಸರು ಕಳೆದ 6 ತಿಂಗಳುಗಲ್ಲಿ 619 ಕೆಜಿ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದು, 36 ಮಂದಿ ವಿದೇಶಿ ಪ್ರಜೆಗಳು ಸೇರಿ ಒಟ್ಟು 219 ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಮಾದಕ ಸೇವನೆ ಹಾಗೂ ಪೆಡ್ಲರ್ ಗಳ ವಿರುದ್ಧ ಮಾದಕ ದ್ರವ್ಯ ಸೇವನೆ ಮಾಡುವವರ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟಾನ್ಸ್ (ಎನ್‌ಡಿಪಿಎಸ್) ಕಾಯ್ದೆಯ ಸೆಕ್ಷನ್ 27 ಬಿ ಅಡಿಯಲ್ಲಿ ಪೊಲೀಸರು ಪ್ರಕರಣಗಳನ್ನು ದಾಖಲಿಸುತ್ದಿದ್ದು, ಇದರ ಪರಿಣಾಮವಾಗಿ ನ್ಯಾಯಾಲಯವು 10,000 ರೂಪಾಯಿ ದಂಡ ಅಥವಾ ಆರು ತಿಂಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸುತ್ತದೆ.

ನಗರದಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕುವುದು ನಮ್ಮ ಗುರಿಯಾಗಿದೆ. ಮಾದಕ ದ್ರವ್ಯ ಸೇವನೆ ಮಾಡುವವರ ವಿರುದ್ಧ ಪ್ರಕರಣಗಳ ದಾಖಲಿಸದೆ, ಸಂಖ್ಯೆ ಹೆಚ್ಚಾಗುತ್ತಲೇ ಇರುತ್ತದೆ. ಆದರೆ, ಅವರನ್ನೇ ಮಾಹಿತಿದಾರರನ್ನಾಗಿ ಬಳಕೆ ಮಾಡಿದರೆ, ಪೆಡ್ಲರ್ ಗಳ ಹುಡುಕಾಟ ಸುಲಭವಾಗುತ್ತದೆ. ಇದರಿಂದ ಇಡೀ ನೆಟ್ ವರ್ಕ್'ಗೆ ಕಡಿವಾಣ ಹಾಕಬಹುದಾಗಿದೆ. ಈ ಕ್ರಮದಿಂದಾಗಿ ಕಳೆದ ವರ್ಷದಿಂದ ಡ್ರಗ್ಸ್ ವಶಪಡಿಸಿಕೊಳ್ಳುತ್ತಿರುವುದು ಹಾಗೂ ಪೆಡ್ಲರ್ ಗಳ ಬಂಧನದ ಸಂಖ್ಯೆ ಹೆಚ್ಚಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಹೇಳಿದ್ದಾರೆ.

ಯುವರು ಪ್ರಯೋಗಾರ್ತವಾಗಿಯೂ ಡ್ರಗ್ಸ್ ಸೇವನೆ ಮಾಡುವರು. ಅವರ ವಿರುದ್ಧ ಪ್ರಕರಣ ದಾಖಳಿಸಿದರೆ, ವ್ಯಸನಿ ಅಥವಾ ಪೆಡ್ಲರ್ ಗಳಾಗಿ ಮಾರ್ಪಾಡಾಗಬಹುದು. ಇದರಿಂದ ಅವರ ಜೀವನ ಹಾಳಾಗುತ್ತದೆ. ನಮ್ಮ ಈ ಪ್ರಯೋಗ ಎಲ್ಲರಿಗೂ ಮೇಲೂ ನಡೆಯುವುದಿಲ್ಲ. ಮೊದಲ ಬಾರಿಗೆ ಸಿಕ್ಕಿಹಾಕಿಕೊಂಡವರ ಮೇಲೆ ನಡೆಯುತ್ತದೆ. ಎರಡನೇ ಬಾರಿ ಸಿಕ್ಕಿಹಾಕಿಕೊಂಡವರ ವಿರುದ್ಧ ಪ್ರಕರಣ ದಾಖಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT