ಆರ್. ಅಶೋಕ್ ಸಾಂದರ್ಭಿಕ ಚಿತ್ರ 
ರಾಜ್ಯ

ನಾಳೆಯಿಂದ ನೆರೆ ಪೀಡಿತ ಪ್ರದೇಶಗಳಿಗೆ ಬಿಜೆಪಿ ನಾಯಕರ ಪ್ರವಾಸ: 6 ತಂಡಗಳ ರಚನೆ

ವಿಪಕ್ಷ ನಾಯಕ ಆರ್ ಅಶೋಕ್, ಶಾಸಕರಾದ ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್ ಹಾಗೂ ಬಿ.ಶ್ರೀರಾಮುಲು ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ರಾಜ್ಯ ಬಿಜೆಪಿ ನಾಯಕರು ನಾಳೆಯಿಂದ ಭೇಟಿ ನೀಡುವ ಉದ್ದೇಶದಿಂದ ಆರು ತಂಡಗಳನ್ನು ರಚಿಸಲಾಗಿದೆ.

ವಿಪಕ್ಷ ನಾಯಕ ಆರ್ ಅಶೋಕ್, ಶಾಸಕರಾದ ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್ ಹಾಗೂ ಬಿ.ಶ್ರೀರಾಮುಲು ಅವರ ನೇತೃತ್ವದಲ್ಲಿನ ತಂಡಗಳು ನೆರೆ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಲಿವೆ ಎಂದು ಪ್ರಕಟಣೆ ತಿಳಿಸಿದೆ.

ಆರ್.ಅಶೋಕ್ ನೇತೃತ್ವದ ತಂಡ ಮಂಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಅರಗ ಜ್ಞಾನೇಂದ್ರ ನೇತೃತ್ವದ ತಂಡ ಶಿವಮೊಗ್ಗ ಜಿಲ್ಲೆಯಲ್ಲಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ತಂಡ ಕೊಡಗು ಹಾಗೂ ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ನೆರೆಯಿಂದಾಗಿರುವ ಹಾನಿ ಕುರಿತು ಪರಿಶೀಲನೆ ನಡೆಸಲಿದೆ.

ಛಲವಾದಿ ನಾರಾಯಣಸ್ವಾಮಿ ನೇತೃತ್ವದ ತಂಡ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅರವಿಂದ್ ಬೆಲ್ಲದ್ ನೇತೃತ್ವದ ತಂಡ ಬಾಗಲಕೋಟೆ, ವಿಜಯಪುರ ಹಾಗೂ ಬಿ.ಶ್ರೀರಾಮುಲು ಅವರ ತಂಡ ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT