ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ (ಸಂಗ್ರಹ ಚಿತ್ರ) 
ರಾಜ್ಯ

ಕಾವೇರಿ ತೀರದಲ್ಲಿ ಅಸ್ಥಿ ವಿಸರ್ಜನೆಗೆ ಆಕ್ಷೇಪ: ರಾಜ್ಯ ಸರ್ಕಾರಕ್ಕೆ High Court ನೋಟಿಸ್‌

ಉತ್ತರಾಖಂಡ ಹೈಕೋರ್ಟ್‌ ಗಂಗಾ, ಯಮುನಾ ಮತ್ತು ಅವುಗಳ ಉಪನದಿಗಳನ್ನು ಜ್ಯುರಿಸ್ಟಿಕ್‌ ಪರ್ಸನ್‌ ಎಂದು ಘೋಷಿಸಿದ್ದು, ಅಂತೆಯೇ ಕಾವೇರಿಯನ್ನೂ ಜ್ಯುರಿಸ್ಟಿಕ್‌ ಪರ್ಸನ್‌ ಎಂದು ಪರಿಗಣಿಸಬೇಕು ಸಮಿತಿಯೊಂದನ್ನು ರಚಿಸಬೇಕು.

ಬೆಂಗಳೂರು: ಕಾವೇರಿ ನದಿ ತೀರದಲ್ಲಿ ಅಸ್ಥಿ ವಿಸರ್ಜನೆ ಸೇರಿದಂತೆ ಮಾಲಿನ್ಯಕಾರಕ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿ ಮಾಡಿದೆ.

ಬೆಂಗಳೂರಿನ ಕೆ ಜಿ ರಸ್ತೆಯ ಕುಶಾಲ್‌ ಕುಮಾರ್‌ ಕೌಶಿಕ್‌ ಸೇರಿದಂತೆ ಆರು ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರು “ಕಾವೇರಿ ನದಿ ತೀರದಲ್ಲಿ ಮಾಲಿನ್ಯ ಹೆಚ್ಚಳವಾಗಿದೆ. ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ವರದಿಯಲ್ಲಿ ಕಾವೇರಿ ನದಿ ತೀರದಲ್ಲಿ ಮಾಲಿನ್ಯ ಹೆಚ್ಚಾಗುವುದಕ್ಕೆ ಕಾರಣಗಳನ್ನು ಉಲ್ಲೇಖಿಸಲಾಗಿದೆ. ‌ಇದನ್ನು ಪರಿಗಣಿಸಿ ನದಿ ತೀರದಲ್ಲಿ ಅಸ್ಥಿ ವಿಸರ್ಜನೆಗೆ ಮಾರ್ಗಸೂಚಿ ರೂಪಿಸಬೇಕು. ಕಾವೇರಿ ನದಿಯನ್ನು ಜ್ಯುರಿಸ್ಟಿಕ್‌ ಪರ್ಸನ್‌ (ಕಾನೂನಾತ್ಮಕ ವ್ಯಕ್ತಿ - ವಾಸ್ತವ ವ್ಯಕ್ತಿಯಲ್ಲದ ಆದರೆ ಕಾನೂನಿನನ್ವಯ ಮಾನ್ಯ ಮಾಡಲಾದ ಸಂಘ ಸಂಸ್ಥೆಗಳು, ನಿಸರ್ಗದ ಭಾಗಗಳನ್ನು ವ್ಯಕ್ತಿಗಳ ರೀತಿಯಲ್ಲಿ ಕಾನೂನಾತ್ಮಕವಾಗಿ ಗ್ರಹಿಸುವಿಕೆ) ಎಂದು ಘೋಷಿಸಬೇಕು” ಎಂದು ಕೋರಿದರು.

ಅಂತೆಯೇ “ಈ ಹಿಂದೆ ಸಾಮಾನ್ಯವಾಗಿ ಎರಡು ಸ್ಥಳಗಳಲ್ಲಿ ಮಾತ್ರ ಅಸ್ಥಿ ವಿಸರ್ಜನೆ ನಡೆಯುತ್ತಿತ್ತು. ಈಗ ನದಿಯ ತೀರದ ಎಲ್ಲಾ ಕಡೆಗಳಲ್ಲೂ ಅಸ್ಥಿ ವಿಸರ್ಜನೆ ನಡೆಸಲಾಗುತ್ತಿದೆ. ಇದೇ ನೀರನ್ನು ಕುಡಿಯಲು ಬಳಕೆ ಮಾಡಲಾಗುತ್ತಿದೆ. ಕನಿಷ್ಠ ಪಕ್ಷ ಶ್ರೀರಂಗಪಟ್ಟದ ನಿಮಿಷಾಂಭ ದೇವಸ್ಥಾನದ ತೀರದಲ್ಲಿಯಾದರೂ ಅಸ್ಥಿ ವಿಸರ್ಜನೆ ಮಾಡದಂತೆ ಮಧ್ಯಂತರ ತಡೆ ವಿಧಿಸಬೇಕು. ಈಗ ಮುಂಗಾರು ವ್ಯಾಪಕವಾಗಿದ್ದು, ಅರೆಬೆಂದ ಮೂಳೆಗಳು ದೇವಸ್ಥಾನದ ಬಳಿ ಬಂದು ಬೀಳಬಹುದು” ಎಂದರು.

ಕೆಲ ಕಾಲ ವಾದ ಆಲಿಸಿದ ಪೀಠವು ಮಧ್ಯಂತರ ಆದೇಶ ಮಾಡಲು ನಿರಾಕರಿಸಿತು. ರಾಜ್ಯ ಸರ್ಕಾರ ಮತ್ತು ಇತರೆ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್‌ 11ಕ್ಕೆ ಮುಂದೂಡಿತು.

ಅರ್ಜಿದಾರರ ಮನವಿ ಏನು?

ಕಾವೇರಿ ನದಿ ತೀರದ ನಿರ್ದಿಷ್ಟ ಸ್ಥಳಗಳಲ್ಲಿ ಅಸ್ಥಿ ವಿಸರ್ಜನೆಗೆ ಅವಕಾಶ ಮಾಡಿ ಮಾರ್ಗಸೂಚಿ ರೂಪಿಸಬೇಕು. ಉತ್ತರಾಖಂಡ ಹೈಕೋರ್ಟ್‌ ಗಂಗಾ, ಯಮುನಾ ಮತ್ತು ಅವುಗಳ ಉಪನದಿಗಳನ್ನು ಜ್ಯುರಿಸ್ಟಿಕ್‌ ಪರ್ಸನ್‌ ಎಂದು ಘೋಷಿಸಿದ್ದು, ಅಂತೆಯೇ ಕಾವೇರಿಯನ್ನೂ ಜ್ಯುರಿಸ್ಟಿಕ್‌ ಪರ್ಸನ್‌ ಎಂದು ಪರಿಗಣಿಸಿ ಸಮಿತಿಯೊಂದನ್ನು ರಚಿಸಬೇಕು. ಇವರು ನದಿಗೆ ಹಾನಿ ಮಾಡಿದರವ ವಿರುದ್ಧ ದಾವೆ ಹೂಡಲು ಅವಕಾಶ ಕಲ್ಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್