ನಟ ದರ್ಶನ್ ಮತ್ತು ಗ್ಯಾಂಗ್ 
ರಾಜ್ಯ

Renukaswamy Case: ಮನೆ ಊಟ, ಬಟ್ಟೆ, ಬೆಡ್ ಗಾಗಿ ಅನುಮತಿ ಕೋರಿ ನಟ Darshan ಹೊಸ ಅರ್ಜಿ

‘ಮನೆಯಿಂದ ಊಟ, ಬಟ್ಟೆ ಮತ್ತು ಹಾಸಿಗೆ ತರಿಸಿಕೊಳ್ಳಲು ಅನುಮತಿ ನೀಡಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಹೈಕೋರ್ಟ್‌ನಲ್ಲಿ ಹೊಸ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಜೈಲಿನಲ್ಲಿ ಮನೆ ಊಟ, ಬಟ್ಟೆ, ಬೆಡ್ ಗಾಗಿ ಅನುಮತಿ ಕೋರಿ ಮತ್ತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

‘ಮನೆಯಿಂದ ಊಟ, ಬಟ್ಟೆ ಮತ್ತು ಹಾಸಿಗೆ ತರಿಸಿಕೊಳ್ಳಲು ಅನುಮತಿ ನೀಡಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಹೈಕೋರ್ಟ್‌ನಲ್ಲಿ ಹೊಸ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಗೃಹದ ಅಧೀಕ್ಷಕರು ಮತ್ತು ಕಾಮಾಕ್ಷಿಪಾಳ್ಯದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ಅವರನ್ನು ಪ್ರತಿವಾದಿಗಳನ್ನಾಗಿ ಕಾಣಿಸಲಾಗಿದೆ.

ಹೈಕೋರ್ಟ್‌ ವಕೀಲೆ ಸಂಜೀವಿನಿ ಪಿ.ನಾವದಗಿ ವಕಾಲತ್ತು ವಹಿಸಿರುವ ಈ ಅರ್ಜಿಯು ಮಂಗಳವಾರ (ಜುಲೈ 31) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದೆ.

‘ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಆದೇಶ ರದ್ದುಪಡಿಸಬೇಕು. ಮನೆಯಿಂದ ಊಟ, ಬಟ್ಟೆ ಮತ್ತು ಹಾಸಿಗೆ ತರಿಸಿಕೊಳ್ಳಲು ನನಗೆ ಅನುಮತಿ ನೀಡುವಂತೆ ಕಾರಾಗೃಹದ ಅಧೀಕ್ಷಕರಿಗೆ ನಿರ್ದೇಶಿಸಬೇಕು’ ಎಂದು ದರ್ಶನ್‌ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್