ಮಾಂಸ ಮಾರಾಟ ನಿಷೇಧ (ಸಾಂದರ್ಭಿಕ ಚಿತ್ರ) 
ರಾಜ್ಯ

ರಾಜಸ್ಥಾನದಿಂದ ರೈಲಿನಲ್ಲಿ ಬಂದಿದ್ದು ಮೇಕೆ ಮಾಂಸ: FSSAI

ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದ ಜತೆಗೆ ನಾಯಿ ಮಾಂಸವನ್ನು ತರಲಾಗಿದೆ ಎಂದು ಪುನೀತ್ ಕೆರೆಹಳ್ಳಿ ಆರೋಪ ಮಾಡಿದ್ದರು.

ಬೆಂಗಳೂರು: ರೈಲು ಮೂಲಕ ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸವಲ್ಲ, ಮೇಕೆ ಮಾಂಸವೆಂದು ಆಹಾರ ಸುರಕ್ಷ|ತೆ ಮತ್ತು ಗುಣಮಟ್ಟ ಇಲಾಖೆ ಖಚಿತಪಡಿಸಿದೆ.

ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದ ಜತೆಗೆ ನಾಯಿ ಮಾಂಸವನ್ನು ತರಲಾಗಿದೆ ಎಂದು ಪುನೀತ್ ಕೆರೆಹಳ್ಳಿ ಆರೋಪ ಮಾಡಿದ್ದರು. ಈ ಬೆಳವಣಿಗೆ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿತ್ತು. ಶುಕ್ರವಾರ ಸಂಜೆಯ ವೇಳೆಗೆ ನಡೆದ ಈ ಘಟನೆ ಕೆಲವೇ ನಿಮಿಷಗಳಲ್ಲಿ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು.

ವಿವಾದವಾಗುತ್ತಿದಂತೆ ಆರೋಗ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ಕೋಟ್ಟು ಮಾಂಸವನ್ನು ವಶಕ್ಕೆ ಪಡೆದು ಅದರ ಪರೀಕ್ಷೆಗಾಗಿ ಲ್ಯಾಬ್‌ಗೆ ಕಳುಹಿಸಿದ್ದರು. ಅದರ ಪರೀಕ್ಷೆ ನಡೆಸಿದ ಪ್ರಯೋಗಾಲಯದವರು ಅದು ಮೇಕೆ ಮಾಂಸ ಎಂದು ವರದಿ ನೀಡಿದ್ದಾರೆ.

ಪ್ರಯೋಗಾಲಯದ ಪರೀಕ್ಷೆಯಲ್ಲಿ ಈ ಮಾಂಸವು ನಾಯಿಯದ್ದಲ್ಲ, ಮೇಕೆಯದ್ದು ಎಂದು ತಿಳಿದುಬಂದಿದೆ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ರಾಜ್ಯ ಆಯುಕ್ತ ಶ್ರೀನಿವಾಸ್ ಕೆ ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನು ಸಿರೋಹಿ ಮೇಕೆ ಮಾಂಸ ಎಂದು ಗುರುತಿಸಲಾಗಿದೆ, ಇದು ರಾಜಸ್ಥಾನ ಮತ್ತು ಗುಜರಾತ್‌ನ ಕಚ್-ಭುಜ್ ಪ್ರದೇಶದ ತಳಿಯಾಗಿದೆ. ಈ ತಳಿಯ ಮೇಕೆಗಳು ಮಚ್ಚೆಯುಳ್ಳ ದೇಹ ಮತ್ತು ಸ್ವಲ್ಪ ಉದ್ದವಾದ ಬಾಲವನ್ನು ಹೊಂದಿರುವುದು ವಿಶಿಷ್ಟವಾಗಿದೆ, ಹೀಗಾಗಿ ಈ ಮೇಕೆಗಳು ನಾಯಿಯನ್ನು ಹೋಲುತ್ತವೆ ಎಂದು ತಿಳಿಸಿದ್ದಾರೆ.

ಈ ಮೇಕೆಗಳ ಬಳಕೆ ಕಡಿಮೆಯಿದ್ದರೂ, ಉತ್ಪಾದನೆ ಹೆಚ್ಚಾಗಿದೆ. ಹೀಗಾಗಿ ಕೆಲವು ವ್ಯಾಪಾರಿಗಳು ಈ ಮೇಕೆ ಮಾಂಸವನ್ನು ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನ ಮೂಲಕ ಸರಬರಾಜು ಮಾಡಿಸಿಕೊಳ್ಳುತ್ತಾರೆಂದು ಎಫ್‌ಎಸ್‌ಎಸ್‌ಎಐ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT