ಸಚಿವ ಚಲುವರಾಯಸ್ವಾಮಿ 
ರಾಜ್ಯ

ರಾಜ್ಯದ ಬರಗಾಲಕ್ಕೆ ಕಾಂಗ್ರೆಸ್ ಕಾರಣ ಎನ್ನುತ್ತಿದ್ದ ವಿಪಕ್ಷಗಳಿಗೆ ಪ್ರಕೃತಿಯೇ ತಿರುಗೇಟು ನೀಡಿದೆ: ಸಚಿವ ಚಲುವರಾಯಸ್ವಾಮಿ

ವಿಶ್ವ ದರ್ಜೆಯಲ್ಲಿ ಬೃಂದಾವನವನ್ನು ನಿರ್ಮಾಣ ಮಾಡಲಾಗುವುದು. ಮಂಡ್ಯ ಜಿಲ್ಲೆ ರೈತರ ಜಿಲ್ಲೆಯಾಗಿದ್ದು ನೂತನವಾಗಿ ಸಕ್ಕರೆ ಕಾರ್ಖಾನೆ ಹಾಗೂ ಕೃಷಿ ವಿಶ್ವ ವಿದ್ಯಾನಿಲಯವನ್ನು ಕಟ್ಟಿಸಲಾಗುವುದು. ಎಲ್ಲಾ ವಿಚಾರದಲ್ಲೂ ನಮ್ಮ ಸರ್ಕಾರ ಬದ್ಧತೆಯನ್ನು ತೋರುತ್ತದೆ.

ಮೈಸೂರು: ರಾಜ್ಯದಲ್ಲಿನ ಬರಗಾಲಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಹೇಳುತ್ತಿದ್ದ ಪ್ರತಿಪಕ್ಷಗಳಿಗೆ ಪ್ರಕೃತಿಯೇ ತಿರುಗೇಟು ನೀಡಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಸೋಮವಾರ ಹೇಳಿದರು.

ಕೆಆರ್‌ಎಸ್‌ನಲ್ಲಿ ಕಾವೇರಿ ನದಿಗೆ ಬಾಗಿನ ಅರ್ಪಿಸಿದ ನಂತರ ಮಾತನಾಡಿದ ಸಚಿವರು, ಈ ನಾಡಿನಲ್ಲಿ ಬಹುಶ ಲಕ್ಷಾಂತರ ಅಣೆಕಟ್ಟುಗಳಿದ್ದು, ರಾಜ್ಯದಲ್ಲೂ ಸಹ ನೂರಾರು ಅಣೆಕಟ್ಟುಗಳಿವೆ. ಆದರೆ ಕೆ ಆರ್ ಎಸ್ ನ ಕಾವೇರಿ ಎಂದರೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಹೆಸರುವಾಸಿಯಾಗಿದ್ದು, ಒಂದು ಭಾವನಾತ್ಮಕ ಅಣೆಕಟ್ಟಾಗಿದೆ. ಇದಕ್ಕಿಂತ ದೊಡ್ಡ ಅಣೆಕಟ್ಟುಗಳು ರಾಜ್ಯದಲ್ಲಿ ಇದ್ದರೂ ಸಹ ಕೆ ಆರ್ ಎಸ್ ನಷ್ಟು ಮನಸೆಳೆದಿರುವ ಅಣೆಕಟ್ಟು ಯಾವುದು ಇಲ್ಲ. ಇಂತಹ ಅಣೆಕಟ್ಟಿನ ನಿರ್ಮಾಣಕ್ಕೆ ಕಾರಣರಾಗಿರುವಂತಹ ನಾಲ್ವಡಿ ಕೃಷ್ಣ ರಾಜ ಒಡೆಯರ್ ಮಹಾರಾಜರು ಹಾಗೂ ಸರ್ ಎಂ ವಿಶ್ವೇಶ್ವರಯ್ಯ ಅವರ ಕೀರ್ತಿಯನ್ನು ಪ್ರತಿಯೊಬ್ಬರೂ ಒಪ್ಪಲೇಬೇಕು ಎಂದು ಹೇಳಿದರು.

ನಮ್ಮ ಸರ್ಕಾರವು ಕೇವಲ ಆಡಳಿತ ಮಾಡಲಿಕ್ಕೆ ಮಾತ್ರ ಬಂದಿಲ್ಲ. ಜಿಲ್ಲೆಯ ಎಲ್ಲಾ ರೈತರ ಪರವಾದ ಯೋಜನೆಗಳನ್ನು ನೀಡಿ, ಜನತೆಯ ಅಭಿವೃದ್ಧಿಗೆ ಶ್ರಮಿಸುವ ಕೆಲಸ ಮಾಡುತ್ತೇವೆ. ಕಳೆದ ಬೇಸಿಗೆಯಲ್ಲಿ ಬರಗಾಲ ಇದ್ದರೂ ಕೂಡ ಜಿಲ್ಲೆಗೆ ಬರದ ತೊಂದರೆ ರೈತರಿಗೆ ತಟ್ಟದಂತೆ 5 ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ನೀಡುವ ಮೂಲಕ ಸಾರ್ವಜನಿಕರಿಗೆ ಒಳಿತು ಮಾಡಿದ್ದೇವೆ. ರೈತರಿಗೆ ಬಿತ್ತನೆಬೀಜ, ಗೊಬ್ಬರ, ಕೀಟನಾಶಕ ನೀಡುವ ಮೂಲಕ ಬೇಸಿಗೆಯಲ್ಲಿ ಬಂದಂತಹ ಬರಗಾಲವನ್ನು ಯಾವುದೇ ಸಮಸ್ಯೆಯಿಲ್ಲದೆ ಬಗೆ ಹರಿಸಿದ ಹೆಮ್ಮೆ ನಮ್ಮ ಸರ್ಕಾರದ್ದಾಗಿದೆ.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆ ಆರ್ ಎಸ್ ನ ಕಾವೇರಿ ಮಾತೆಗೆ 3 ನೇ ಬಾರಿ ಬಾಗಿನವನ್ನು ಅರ್ಪಿಸುವ ಸುಯೋಗ ಇಂದು ಒದಗಿಬಂದಿದೆ. ದೇವರ ಕೃಪೆಯಿಂದ ಇಂದು ಕೆ ಆರ್ ಎಸ್ ಅಣೆಕಟ್ಟು ತುಂಬಿರುವ ಅದ್ಭುತವಾದ ಘಳಿಗೆಯಲ್ಲಿ ಈ ನಾಡಿನ ಕಾವೇರಿ ತಾಯಿಗೆ ನಿಮ್ಮೆಲ್ಲರ ಸಮ್ಮುಖದಲ್ಲಿ ಬಾಗಿನವನ್ನು ಅರ್ಪಿಸಲಾಗಿದೆ. ಎಲ್ಲರ ಆಶೀರ್ವಾದ ನಮ್ಮ ಮೇಲಿರಲಿ ಎಂದರು.

ಸರ್ಕಾರದ ವಿರುದ್ಧ ಆರೋಪ ಬೊಟ್ಟು ಮಾಡುತ್ತಾ ವಿರೋಧ ಪಕ್ಷಗಳು ಎಲ್ಲಾ ಮಿತಿ ಮೀರಿವೆ. ರಾಜ್ಯದಲ್ಲಿನ ಬರಗಾಲಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದೂ ಹೇಳಿದ್ದವು. ಆದರೆ, ಈ ಆರೋಪಕ್ಕೆ ಇದೀಗ ಉತ್ತಮ ಮಳೆ ಮೂಲಕ ಪ್ರಕೃತಿಯೇ ತಿರುಗೇಟು ನೀಡಿದೆ. ಪ್ರತಿಪಕ್ಷಗಳು ರಾಜ್ಯದ ಅಭಿವೃದ್ಧಿಗೆ ಕಟ್ಟುನಿಟ್ಟಿನ ಸಲಹೆಗಳನ್ನು ನೀಡುವ ಬದಲು ಸರ್ಕಾರದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿವೆ ಎಂದು ಹೇಳಿದರು.

ಕರ್ನಾಟಕ ಹಾಗೂ ತಮಿಳುನಾಡಿನ ಸಮಸ್ಯೆಯನ್ನು ಬಗೆ ಹರಿಸಲು ಸುಪ್ರೀಂ ಕೋರ್ಟ್ ನ ಆದೇಶದ ಮೇರೆಗೆ 2 ಕಮಿಟಿಯನ್ನು ಮಾಡಲಾಗಿದ್ದು, ಸಮಸ್ಯೆ ಬಗೆ ಹರಿಸುವ ಪ್ರಯತ್ನ ಮಾಡಲಾಗುವುದು ಎಂದರು.

ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಸಾರ್ವಜನಿಕರಿಗೆ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲೂ ಸಹ ರೈತರ ಯಾವುದೇ ಸಮಸ್ಯೆಯಲ್ಲೂ ಕೂಡ ಜೊತೆ ನಿಂತು ಬಗೆಹರಿಸಲಾಗುವುದು. ದೇಶದ ಆಡಳಿತವನ್ನು ನಿರ್ಧಾರ ಮಾಡುವಂತದ್ದು ಜನತೆಯೇ ವಿನಃ ಯಾವುದೇ ಅಧಿಕಾರವಲ್ಲ ಎಂದರು.

ವಿಶ್ವ ದರ್ಜೆಯಲ್ಲಿ ಬೃಂದಾವನವನ್ನು ನಿರ್ಮಾಣ ಮಾಡಲಾಗುವುದು. ಮಂಡ್ಯ ಜಿಲ್ಲೆ ರೈತರ ಜಿಲ್ಲೆಯಾಗಿದ್ದು ನೂತನವಾಗಿ ಸಕ್ಕರೆ ಕಾರ್ಖಾನೆ ಹಾಗೂ ಕೃಷಿ ವಿಶ್ವ ವಿದ್ಯಾನಿಲಯವನ್ನು ಕಟ್ಟಿಸಲಾಗುವುದು. ಎಲ್ಲಾ ವಿಚಾರದಲ್ಲೂ ನಮ್ಮ ಸರ್ಕಾರ ಬದ್ಧತೆಯನ್ನು ತೋರುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT